Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 19:7 - ಕನ್ನಡ ಸತ್ಯವೇದವು J.V. (BSI)

7 ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇವಿುನವರ ಆಲೋಚನೆಯನ್ನು ಚೆಲ್ಲಿ ಮಣ್ಣುಪಾಲುಮಾಡಿ ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ ಆ ಹೆಣಗಳನ್ನು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇಮಿನವರ ಆಲೋಚನೆಯನ್ನು ಮಣ್ಣುಪಾಲುಮಾಡಿ, ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ, ಆ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಜೆರುಸಲೇಮಿನವರ ಯೋಜನೆಗಳನ್ನು ಮಣ್ಣುಪಾಲಾಗಿಸುವೆನು. ಅವರ ಶತ್ರುಗಳ ಹಾಗು ಕೊಲೆಗಡುಕರ ಕತ್ತಿಗೆ ಅವರನ್ನು ತುತ್ತಾಗಿಸುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈ ಸ್ಥಳದಲ್ಲಿ ನಾನು ಯೆಹೂದದ ಮತ್ತು ಜೆರುಸಲೇಮಿನ ಜನರ ಯೋಜನೆಗಳನ್ನು ಹಾಳು ಮಾಡುತ್ತೇನೆ. ಶತ್ರುವು ಈ ಜನರನ್ನು ಬೆನ್ನಟ್ಟಿ ಬರುವನು. ನಾನು ಈ ಸ್ಥಳದಲ್ಲಿ ಖಡ್ಗದಿಂದ ಯೆಹೂದದ ಜನರ ಕೊಲೆಯಾಗುವಂತೆ ಮಾಡುವೆನು. ಅವರ ಹೆಣಗಳು ಪಕ್ಷಿಗಳಿಗೆ ಮತ್ತು ಕಾಡುಪ್ರಾಣಿಗಳಿಗೆ ಆಹಾರವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ ‘ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು. ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಿಂದಲೂ ಅವರನ್ನು ಖಡ್ಗದಿಂದ ಬೀಳುವಂತೆ ಮಾಡುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 19:7
32 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಮೇಲೆ ಉಗ್ರಕೋಪವನ್ನು ಮಾಡುವದರಿಂದ ನೀವು ನಿಮ್ಮ ಶತ್ರುಗಳ ಎದುರಿನಿಂದ ಸೋತು ಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಹಿಂದಟ್ಟದೆ ಇರುವಾಗಲೂ ನೀವು ಹೆದರಿ ಓಡುವಿರಿ.


ಅವರು ಘೋರಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಹೂಣಿಡರು; ಅವರು ಭೂವಿುಯ ಮೇಲೆ ಗೊಬ್ಬರವಾಗುವರು; ಖಡ್ಗವೂ ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂವಿುಯ ಜಂತುಗಳಿಗೂ ಆಹಾರವಾಗುವವು.


ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವವು.


ಏಳು ಮಂದಿ ಮಕ್ಕಳನ್ನು ಹೆತ್ತ ಭಾಗ್ಯವಂತಳೂ ಬಳಲಿ ಪ್ರಾಣಬಿಟ್ಟಂತಿದ್ದಾಳೆ, ಹಗಲಿನಲ್ಲಿಯೇ ಆಕೆಯ ಪಾಲಿಗೆ ಸೂರ್ಯನು ಮುಣುಗಿದ್ದಾನೆ, ಆಶಾಭಂಗಪಟ್ಟು ಅವಮಾನಕ್ಕೆ ಈಡಾಗಿದ್ದಾಳೆ; ಆಕೆಯ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿನಲ್ಲಿ ನಾನು ಖಡ್ಗಕ್ಕೆ ಗುರಿಮಾಡುವೆನು, ಇದು ಯೆಹೋವನ ನುಡಿ.


ನೀನು ಅವರಿಗೆ - ಮರಣವ್ಯಾಧಿಗೆ ಗೊತ್ತಾದವರು ಮರಣವ್ಯಾಧಿಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ, ಕ್ಷಾಮಕ್ಕೆ ಗೊತ್ತಾದವರು ಕ್ಷಾಮಕ್ಕೆ, ಸೆರೆಗೆ ಗೊತ್ತಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ ಎಂದು ಹೇಳು.


ಈ ಜನರ ಹೆಣಗಳು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವದಿಲ್ಲ.


ಧರ್ಮಶಾಸ್ತ್ರದವರು ಬಾಧ್ಯರಾಗಿದ್ದರೆ ನಂಬಿಕೆಯು ವ್ಯರ್ಥವಾಯಿತು, ವಾಗ್ದಾನವೂ ಬರೀದಾಯಿತು.


ಹಾಗಾದರೆ ನಂಬಿಕೆಯಿಂದ ಧರ್ಮಪ್ರಮಾಣವನ್ನು ನಿರರ್ಥಕಮಾಡುತ್ತೇವೋ? ಎಂದಿಗೂ ಇಲ್ಲ. ಧರ್ಮಪ್ರಮಾಣವನ್ನು ಸ್ಥಿರಪಡಿಸುತ್ತೇವೆ.


ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?


ಅವರ ಪ್ರಾಣವನ್ನು ಹುಡುಕುವ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಕೊಟ್ಟುಬಿಡುವೆನು; ಅನಂತರ ಅಲ್ಲಿ ಪೂರ್ವಕಾಲದ ಹಾಗೆ ಜನರು ವಾಸಿಸುವರು. ಇದು ಯೆಹೋವನ ನುಡಿ.


ನಿನ್ನ ಪ್ರಾಣವನ್ನು ಹುಡುಕಿ ನಿನ್ನಲ್ಲಿ ಭಯವನ್ನು ಹುಟ್ಟಿಸುವವರ ಕೈಗೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಕಸ್ದೀಯರ ಕೈಗೆ ಕೊಟ್ಟು ಬಿಡುವೆನು.


ಇವನನ್ನು ಯೆರೂಸಲೇವಿುನ ಬಾಗಿಲುಗಳ ಹೊರಗೆ ಕತ್ತೆಯಂತೆ ಎಳೆದು ಬಿಸಾಟು ಮಣ್ಣುಪಾಲುಮಾಡುವರು.


ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡಿರು ಮಕ್ಕಳನ್ನು ನೀಗಿಕೊಂಡು ವಿಧವೆಯರಾಗಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ;


ಇವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಆಶ್ರಯಿಸಿ ಪೂಜಿಸಿದ ಸೂರ್ಯಚಂದ್ರತಾರಾಗಣಗಳ ಎದುರಿಗೆ ಹರಡಿಬಿಡುವರು; ಅವುಗಳನ್ನು ಯಾರೂ ಕೂಡಿಸಿ ಹೂಣಿಡುವದಿಲ್ಲ; ಅವು ಭೂವಿುಯ ಮೇಲೆ ಗೊಬ್ಬರವಾಗುವವು.


ಆಲೋಚನೆಮಾಡಿಕೊಳ್ಳಿರಿ, ಅದು ಮುರಿದುಹೋಗುವದು; ಅಪ್ಪಣೆಮಾಡಿರಿ, ಅದು ನಿಲ್ಲದು; ದೇವರು ನಮ್ಮ ಕೂಡ ಇದ್ದಾನಷ್ಟೆ.


ಯಾವ ಜ್ಞಾನವೂ ಯಾವ ವಿವೇಕವೂ ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವದಿಲ್ಲ.


ಹೀಗಿರಲು ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ ಎಂದು ನೀವು ಅಂದುಕೊಳ್ಳುವದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳನ್ನಾಗಿ ಮಾಡಿದೆ.


ಜ್ಞಾನಿಗಳು ಆಶಾಭಂಗಪಟ್ಟು ಬೆಬ್ಬರಬಿದ್ದು ಸಿಕ್ಕಿಕೊಂಡಿದ್ದಾರೆ; ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು;


ಆದಕಾರಣ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರವಿುಸುವನು;


ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನವನ್ನು ಮೀರಿದದರಿಂದ ಆ ಕತ್ತಿಯು ಪ್ರತಿದಂಡನೆಮಾಡುವದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗವುಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.


ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವನು; ನಾನು ನಿನ್ನನ್ನು ಕೊಂದು ನಿನ್ನ ತಲೆಯನ್ನು ಕಡಿದುಹಾಕಿ ಫಿಲಿಷ್ಟಿಯಸೈನ್ಯದ ಶವಗಳನ್ನು ಮೃಗಪಕ್ಷಿಗಳಿಗೆ ಹಂಚಿಕೊಡುವೆನು. ಇದರಿಂದ ಇಸ್ರಾಯೇಲ್ಯರೊಳಗೆ ದೇವರಿರುತ್ತಾನೆಂಬದು ಭೂಲೋಕದವರಿಗೆಲ್ಲಾ ತಿಳಿದು ಬರುವದು;


ನನ್ನ ಪ್ರಜೆಗಳಲ್ಲಿ ಉಳಿದಿರುವವರನ್ನು ತಳ್ಳಿಬಿಟ್ಟು ಶತ್ರುಗಳ ಕೈಗೆ ಒಪ್ಪಿಸುವೆನು. ಅವರ ಎಲ್ಲಾ ಶತ್ರುಗಳು ಬಂದು ಅವರನ್ನು ಸುಲಿದು ಸೂರೆಮಾಡುವರು.


ಹೀಗಿರುವದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕಾಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವದು, ವಿವೇಕಿಗಳ ವಿವೇಕವು ಅಡಗುವದು ಎಂದು ಹೇಳಿದನು.


ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ವ್ಯಾಧಿಖಡ್ಗಕ್ಷಾಮಗಳಿಂದ ಹತಶೇಷರಾದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು; ಅವನು ಅವರನ್ನು ಕರುಣಿಸದೆ ಕನಿಕರಪಡದೆ ಉಳಿಸದೆ ಕತ್ತಿಯಿಂದ ಸಂಹರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು