Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:18 - ಕನ್ನಡ ಸತ್ಯವೇದವು J.V. (BSI)

18 ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್‍ನದಿಯ ನೀರನ್ನು ಕುಡಿಯಬೇಕಾದದ್ದೇನು? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? [ಯೂಫ್ರೇಟೀಸ್] ನದಿಯ ಜಲವನ್ನು ಪಾನಮಾಡಬೇಕಾದದ್ದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್ ನದಿಯ ನೀರನ್ನು ಕುಡಿಯ ಅವಶ್ಯಕತೆ ಇತ್ತೆ? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡುವ ಅವಶ್ಯಕತೆ ಇತ್ತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನೈದ್ ನದಿಯ ನೀರನ್ನು ಕುಡಿಯಲು ಈಜಿಪ್ಟಿನ ದಾರಿಯನ್ನು ಹಿಡಿದದ್ದರಿಂದ ನಿನಗೆ ಬಂದ ಲಾಭವಾದರೂ ಏನು? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡಲು ಅಸ್ಸೀರಿಯ ಮಾರ್ಗದಲ್ಲಿ ಹೆಜ್ಜೆಯಿಟ್ಟಿದ್ದರಿಂದ ನಿನಗೆ ಬಂದ ಲಾಭವಾದರೂ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೂದದ ಜನರೇ, ಅದರ ಬಗ್ಗೆ ಯೋಚಿಸಿರಿ. ಇದರಿಂದ ನಿಮಗೆ ಈಜಿಪ್ಟಿಗೆ ಹೋಗಲು ಸಹಾಯವಾಯಿತೇ? ನೈಲ್ ನದಿಯ ನೀರನ್ನು ಕುಡಿಯಲು ಈಜಿಪ್ಟಿಗೆ ಹೋಗುವುದೇಕೆ? ಅವರ ನದಿಯ ನೀರನ್ನು ಕುಡಿಯಲು ಅಸ್ಸೀರಿಯಕ್ಕೆ ಹೋಗುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಈಗ ಶೀಹೋರಿನ ನೀರು ಕುಡಿಯುವುದಕ್ಕಾಗಿ ಈಜಿಪ್ಟಿನ ದಾರಿಯಲ್ಲಿ ನಿನಗೇನು ಕೆಲಸ? ಯೂಫ್ರೇಟೀಸ್ ನದಿಯ ನೀರು ಕುಡಿಯುವುದಕ್ಕಾಗಿ ಅಸ್ಸೀರಿಯದ ದಾರಿಯಲ್ಲಿ ನಿನಗೇನು ಕೆಲಸ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:18
18 ತಿಳಿವುಗಳ ಹೋಲಿಕೆ  

ಎಫ್ರಾಯೀಮು ಬುದ್ಧಿವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ;


ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಅತ್ತಿತ್ತ ಹೋಗುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.


ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸಪಡುತ್ತಾರೆ; ಆದರೆ ಇಸ್ರಾಯೇಲ್ಯರ ಸದಮಲಸ್ವಾವಿುಯ ಕಡೆಗೆ ದೃಷ್ಟಿಯಿಡುವದಿಲ್ಲ, ಯೆಹೋವನನ್ನು ಆಶ್ರಯಿಸುವದಿಲ್ಲ;


ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ವ್ರಣವನ್ನು ಗುಣಪಡಿಸಲಾರನು.


ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಬಹುಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಇವನು ಸಮೃದ್ಧನಾಗಿಯೇ ಇರುವನೋ? ಇಂಥಾ ಕೃತ್ಯಗಳನ್ನು ನಡಿಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?


ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಕೋವರದಲ್ಲಿ ಕಾದುಕೊಂಡಿದ್ದೇವಲ್ಲಾ.


ಆಗ ಕರ್ತನು ಯೂಫ್ರೇಟೀಸ್ ನದಿಯ ಆಚೆಗಿರುವ ಅಶ್ಶೂರದ ರಾಜನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ [ಯೆಹೂದದ] ತಲೆಯನ್ನೂ ಕಾಲಕೂದಲನ್ನೂ ಬೋಳಿಸುವನು; ಅದು ಗಡ್ಡವನ್ನು ಸಹ ತೆಗೆದುಬಿಡುವದು.


ವಿಶಾಲವಾದ ಸಾಗರದ ಮೇಲೆ ತಂದ ಶೀಹೋರಿನ ಧಾನ್ಯದಿಂದಲೂ ನೈಲಿನ ಬೆಳೆಯಿಂದಲೂ ಆದಾಯ ಹೊಂದಿದ [ನಿಮ್ಮ ನಗರಿಯು] ಅನೇಕ ಜನಾಂಗಗಳಿಗೆ ಲಾಭಕರವಾಗಿತ್ತು.


ಮತ್ತು ಇಷ್ಟೂ ಸಾಲದೆಂದು ಅಶ್ಯೂರ್ಯರೊಂದಿಗೂ ಹಾದರಮಾಡಿದಿ; ಹೌದು, ಅವರೊಡನೆ ಹಾದರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.


ಆ ಕಾಲದಲ್ಲಿ ಅರಸನಾದ ಆಹಾಜನು ತನಗೆ ಸಹಾಯಮಾಡಬೇಕೆಂದು ಅಶ್ಶೂರದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು.


ದ್ರೋಹಿಯಾದ ಮಗಳೇ, ಎಂದಿನವರೆಗೆ ಅತ್ತಿತ್ತ ಅಲೆದಾಡುವಿ? ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಉಂಟುಮಾಡಿದ್ದಾನೆ ನೋಡು, ಹೆಂಗಸು ಗಂಡಸನ್ನು ಕಾಪಾಡುವಳು.


ಹೇಗಾದರೂ ಹೊಟ್ಟೆ ತುಂಬ ಅನ್ನ ತಿಂಬೋಣ ಎಂದು ಐಗುಪ್ತ್ಯರಿಗೂ ಅಶ್ಶೂರ್ಯರಿಗೂ ಅಧೀನರಾದೆವು.


ಈ ವಿಪತ್ತುಗಳು ನಿನಗೆ ಸಂಭವಿಸುವದಕ್ಕೆ ನೀನು ಜನಾಂಗಗಳನ್ನು ಮೋಹಿಸಿ ಅವರ ಬೊಂಬೆಗಳಿಂದ ನಿನ್ನನ್ನು ಹೊಲಸು ಮಾಡಿಕೊಂಡದ್ದೇ ಕಾರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು