Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:21 - ಕನ್ನಡ ಸತ್ಯವೇದವು J.V. (BSI)

21 ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೇಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷೇಬಳ್ಳಿಯ ಕೆಟ್ಟ ರೆಂಬೆಗಳಾದದ್ದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷಿಬಳ್ಳಿಯ ಕೆಟ್ಟರೆಂಬೆಗಳಂತೆ ಆಗಲು ಕಾರಣವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷೀಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೂದವೇ, ನಾನು ನಿನ್ನನ್ನು ಅತ್ಯುತ್ತಮ ದ್ರಾಕ್ಷಾಲತೆಯಂತೆ ನೆಟ್ಟೆ. ನೀನು ಒಳ್ಳೆಯ ಬೀಜದಂತಿದ್ದಿ. ನೀನು ಕೆಟ್ಟ ಫಲಗಳನ್ನು ಫಲಿಸುವ ಬೇರೆ ದ್ರಾಕ್ಷಿಯ ಬಳ್ಳಿಯಾದದ್ದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅತ್ಯುತ್ತಮ ಬೀಜದಿಂದ ಬೆಳೆದ ಉತ್ಕೃಷ್ಟ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷಿಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:21
27 ತಿಳಿವುಗಳ ಹೋಲಿಕೆ  

ನನ್ನ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೇನು ಮಾಡಬೇಕಾಗಿತ್ತು? ಅದು [ಒಳ್ಳೇ] ದ್ರಾಕ್ಷೆಯನ್ನು ಕೊಡುವದೆಂದು ನಾನು ನಿರೀಕ್ಷಿಸುತ್ತಿರಲು ಏಕೆ ಹೊಲಸುಹಣ್ಣನ್ನು ಬಿಟ್ಟಿತು?


ನೀನು ಅವರನ್ನು ನಿನ್ನ ಸ್ವಕೀಯ ದೇಶವಾಗಿರುವ ಬೆಟ್ಟದ ಸೀಮೆಗೆ ತಂದು ಸ್ಥಾಪಿಸುವಿ. ಯೆಹೋವನೇ, ನೀನು ಸ್ವಂತ ನಿವಾಸಕ್ಕಾಗಿ ಏರ್ಪಡಿಸಿಕೊಂಡಿರುವ ಸ್ಥಾನವಾಗಿಯೂ ಕರ್ತನೇ, ನೀನು ಸಿದ್ಧಪಡಿಸಿಕೊಂಡಿರುವ ಪವಿತ್ರಾಲಯವಾಗಿಯೂ ಇರುವಲ್ಲಿಗೆ ಅವರನ್ನು ಬರಮಾಡುವಿ.


ನಾನೇ ನಿಜವಾದ ದ್ರಾಕ್ಷೇಬಳ್ಳಿ. ನನ್ನ ತಂದೆ ತೋಟಗಾರನು.


ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ ನಮ್ಮ ಪಿತೃಗಳನ್ನೇ ನೆಲೆಗೊಳ್ಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.


ನೀನು ಐಗುಪ್ತದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು ಜನಾಂಗಗಳನ್ನು ಹೊರಗೆ ಹಾಕಿ ಅದನ್ನು ನೆಟ್ಟಿ.


ಆತನು ನಿಮ್ಮ ಪಿತೃಗಳನ್ನು ಪ್ರೀತಿಸಿ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೂ ಆದುಕೊಂಡು


ಅದೇನಂದರೆ - ಒಬ್ಬ ಮನುಷ್ಯನು ಒಂದು ದ್ರಾಕ್ಷೆಯ ತೋಟವನ್ನು ಮಾಡಿ ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.


ಆಗ ಯೇಸು ಅವರ ಕೂಡ ಸಾಮ್ಯರೂಪವಾಗಿ ಮಾತಾಡುವದಕ್ಕೆ ತೊಡಗಿ - ಒಬ್ಬ ಮನುಷ್ಯನು ಒಂದು ದ್ರಾಕ್ಷೆಯ ತೋಟವನ್ನು ಮಾಡಿ ಸುತ್ತಲು ಬೇಲಿಹಾಕಿಸಿ ದ್ರಾಕ್ಷೆಯ ಆಲೆಗಾಗಿ ಒಂದು ಗುಂಡಿಯನ್ನು ತೆಗಿಸಿ ಹೂಡೆಯನ್ನು ಕಟ್ಟಿಸಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋದನು.


ಅವರು ಸೊದೋಮ್ಯರೆಂಬ ದ್ರಾಕ್ಷಾಲತೆಯ ಒಂದು ಬಳ್ಳಿಯಾಗಿದ್ದಾರೆ; ಅದು ಗೊಮೋರ ಪಟ್ಟಣದ ತೋಟಗಳಲ್ಲಿ ಬೆಳೆಯುವ ಜಾತಿ. ಅದರ ಹಣ್ಣಿನ ಗೊಂಚಲು ವಿಷ;


ಮತ್ತೊಂದು ಸಾಮ್ಯವನ್ನು ಕೇಳಿರಿ - ಒಬ್ಬ ಮನೆಯ ಯಜಮಾನನಿದ್ದನು. ಅವನು ಒಂದು ದ್ರಾಕ್ಷೇತೋಟವನ್ನು ಮಾಡಿ ಅದರ ಸುತ್ತಲೂ ಬೇಲಿಹಾಕಿಸಿ ಅದರಲ್ಲಿ ದ್ರಾಕ್ಷೆಯ ಆಲೆಯನ್ನು ಮಾಡಿಸಿ ಹೂಡೆಯನ್ನು ಕಟ್ಟಿಸಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋದನು.


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,


ಅಯ್ಯೋ, ಸುವ್ರತೆಯಾಗಿದ್ದ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ನೆಲೆಯಾಗಿದ್ದಾಳೆ.


ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ, ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು ನೆನಪುಮಾಡಿಕೊಳ್ಳಿರಿ.


ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವನು ಇಸ್ರಾಯೇಲ್ಯರಿಗೋಸ್ಕರ ನಡಿಸಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲ್ಯರು ಯೆಹೋವನನ್ನು ಸೇವಿಸುತ್ತಿದ್ದರು.


ಅಕಟಾ, ಬಂಗಾರವು ಎಷ್ಟೋ ಮಸಕಾಯಿತು! ಚೊಕ್ಕ ಚಿನ್ನವು ಕಂದಾಗಿದೆಯಲ್ಲಾ. ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದು ಬಿಟ್ಟಿವೆ.


ಅವನು ಯಾಕೋಬನಿಗೆ - ಇನ್ನು ಮೇಲೆ ನೀನು ಯಾಕೋಬನೆನ್ನಿಸಿಕೊಳ್ಳುವದಿಲ್ಲ; ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದ್ದರಿಂದ ನಿನಗೆ ಇಸ್ರಾಯೇಲೆಂದು ಹೆಸರುಂಟಾಗುವದು ಎಂದು ಹೇಳಿದನು.


ಅವನು ತನ್ನ ಪುತ್ರಪೌತ್ರರಿಗೆ - ನೀವು ನ್ಯಾಯನೀತಿಗಳನ್ನು ನಡಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆದುಕೊಂಡೆನಲ್ಲಾ; ಅವನು ಹೀಗೆ ಮಾಡುವದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವದು ಅಂದುಕೊಂಡನು.


ಆ ದಿನದಲ್ಲಿ [ಹೀಗೆ ಗಾನ ಮಾಡುವರು] - ಇಗೋ, ವಿಹಾರದ ತೋಟ, ಇದನ್ನು ಕುರಿತು ಹಾಡಿರಿ;


ಇಸ್ರಾಯೇಲ್ ವಂಶವೂ ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡದ್ದರಿಂದ ನಿನ್ನನ್ನು ನಾಟಿದ ಸೇನಾಧೀಶ್ವರನಾದ ಯೆಹೋವನು ನಿನಗೆ ಕೆಡುಕಾಗಲಿ ಎಂದು ಶಪಿಸಿದ್ದಾನೆ.


ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ ಅದು ಬೇರು ಬಿಟ್ಟು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.


ಚೀಯೋನೆಂಬ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ; ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.


ಯೆಹೋವನು ನಿನಗೆ ಸುಂದರಫಲದಿಂದ ಅಂದವಾದ ಹಚ್ಚನೆಯ ಒಲೀವಮರವೆಂದು ಹೆಸರಿಟ್ಟಿದ್ದನು; ಆ ಮರಕ್ಕೆ ಬೆಂಕಿಯಿಕ್ಕಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ.


ನರಪುತ್ರನೇ, ದ್ರಾಕ್ಷೆಯ ಗಿಡವು ವಿುಕ್ಕ ಗಿಡಗಳಿಗಿಂತ ಏನು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು