ಯೆರೆಮೀಯ 2:25 - ಕನ್ನಡ ಸತ್ಯವೇದವು J.V. (BSI)25 ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ; ಆದರೆ ನೀನು - ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು ಅಂದುಕೊಂಡಿದ್ದೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 “ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ” ಎಂದೆನು, ಆದರೆ ನೀನು, “ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು” ಅಂದುಕೊಂಡಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಾನು, ‘ಅನ್ಯದೇವತೆಗಳನ್ನು ಅರಸಿ ಓಡಬೇಡ, ನಿನ್ನ ಪಾದರಕ್ಷೆ ಸವೇದೀತು, ನಿನ್ನ ಗಂಟಲು ಸೊರಗೀತು’ ಎಂದೆ. ನೀನೋ, ‘ಆ ಮಾತು ಆಶಾದಾಯಕವಲ್ಲ, ಅದನ್ನು ಕೇಳಲಾಗದು; ಅನ್ಯದೇವತೆಗಳ ಮೇಲೆ ಮೋಹಗೊಂಡಿದ್ದೇನೆ. ಅವರನ್ನೇ ಹಿಂಬಾಲಿಸುತ್ತೇನೆ’ ಎಂದೆ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೆಹೂದವೇ, ವಿಗ್ರಹಗಳ ಬೆನ್ನುಹತ್ತಿ ಹೋಗುವದನ್ನು ನಿಲ್ಲಿಸು! ಆ ಅನ್ಯದೇವರುಗಳ ಬಗ್ಗೆ ನಿನ್ನಲ್ಲಿರುವ ಬಯಕೆಯನ್ನು ತೊರೆದುಬಿಡು. ಆದರೆ ನೀನು ‘ಹಾಗೆ ಮಾಡಿದರೆ ಪ್ರಯೋಜನವೇನು? ನಾನು ಅವುಗಳನ್ನು ಬಿಡಲಾರೆ. ನಾನು ಆ ಅನ್ಯದೇವರುಗಳನ್ನು ಪ್ರೀತಿಸುತ್ತೇನೆ. ನಾನು ಅವುಗಳನ್ನು ಪೂಜಿಸಬಯಸುತ್ತೇನೆ’ ಎಂದು ಹೇಳುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದರೆ ನಾನು, ‘ನಿನ್ನ ಕಾಲು ಸವೆಯದಂತೆಯೂ, ನಿನ್ನ ಗಂಟಲು ಆರದಂತೆಯೂ ತಡೆದುಕೋ,’ ಎಂದೆನು. ಆದರೆ ನೀನು, ‘ಇಲ್ಲ, ನಿರೀಕ್ಷೆ ಇಲ್ಲ, ನಾನು ಅನ್ಯದೇವರುಗಳನ್ನು ಪ್ರೀತಿಸುತ್ತೇನೆ, ಅವುಗಳ ಹಿಂದೆ ನಾನು ಹೋಗುತ್ತೇನೆ,’ ಎಂದು ಹೇಳಿದೆ. ಅಧ್ಯಾಯವನ್ನು ನೋಡಿ |