Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:28 - ಕನ್ನಡ ಸತ್ಯವೇದವು J.V. (BSI)

28 ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ನಿನ್ನನ್ನುದ್ಧರಿಸಲು ಶಕ್ತರಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ಎಲೈ ಯೆಹೂದ ಜನರೇ, ನೀವು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿಮಗೆ ಕೇಡು ಸಂಭವಿಸಿದಾಗ ನಿಮ್ನನ್ನು ಉದ್ಧರಿಸಲು ಅವರು ಶಕ್ತರಾಗಿದ್ದರೆ ಎದ್ದುಬರಲಿ ! ನಿಮಗೆ ನಗರಗಳು ಎಷ್ಟಿವೆಯೋ ಅಷ್ಟೂ ದೇವರುಗಳು ಇದ್ದಾರೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸಲಿ, ನೀವು ಮಾಡಿದ ವಿಗ್ರಹಗಳು ಎಲ್ಲಿವೆ? ನೀವು ಕಷ್ಟದಲ್ಲಿದ್ದಾಗ ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸುವವೇ ಎಂಬುದನ್ನು ನೋಡೋಣ. ಯೆಹೂದದ ನಿವಾಸಿಗಳೇ, ನಿಮ್ಮಲ್ಲಿ ಎಷ್ಟು ಪಟ್ಟಣಗಳಿವೆಯೋ ಅಷ್ಟು ವಿಗ್ರಹಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:28
16 ತಿಳಿವುಗಳ ಹೋಲಿಕೆ  

ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು; ಯೆರೂಸಲೇವಿುನ ಬೀದಿಗಳೆಷ್ಟೋ ತುಚ್ಫದೇವತೆಯಾದ ಬಾಳನಿಗೆ ಹೋಮಮಾಡುವದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.


ತಪ್ಪಿಸಿಕೊಂಡ ಅನ್ಯಜನರೇ, ನೆರೆದು ಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ಬೊಂಬೆಯನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನಯಿಸುವವರು ಏನೂ ತಿಳಿಯದವರಾಗಿದ್ದಾರೆ.


ಯೆಹೋವನು ಅವರ ವಿಷಯದಲ್ಲಿ ಹೇಳುವದೇನಂದರೆ - ಅವರು ಪೂಜಿಸುತ್ತಿದ್ದ ದೇವರುಗಳು ಎಲ್ಲಿ ಹೋದರು? ಅವರು ಆಶ್ರಯಿಸಿಕೊಂಡಿದ್ದ ಶರಣನು ಎಲ್ಲಿದ್ದಾನೆ?


ಹೋಗಿ ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮ ಈ ಇಕ್ಕಟ್ಟಿನಲ್ಲಿ ಸಹಾಯ ಮಾಡಲಿ ಅಂದನು.


ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರಗದು, ಒಬ್ಬನು ಕೂಗಿಕೊಂಡರೂ ಉತ್ತರಕೊಟ್ಟು ಕಷ್ಟದಿಂದ ಅವನನ್ನು ಬಿಡಿಸಲಾರದು.


ಇಸ್ರಾಯೇಲು ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣು ಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂವಿುಯು ಎಷ್ಟು ಒಳ್ಳೆಯದೋ ಅಷ್ಟು ಒಳ್ಳೆಯ ವಿಗ್ರಹಸ್ತಂಭಗಳನ್ನು ಮಾಡಿಕೊಂಡಿದೆ.


ಒಟ್ಟಿಗೆ ಕುಗ್ಗಿ ಬೊಗ್ಗಿವೆ, ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ ತಾವೇ ಸೆರೆಗೆ ಹೋಗಿವೆ.


ಎಲೀಷನು ಇಸ್ರಾಯೇಲ್ಯರ ಅರಸನಿಗೆ - ನನಗೂ ನಿನಗೂ ಗೊಡವೆಯೇನು? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು ಎಂದು ಹೇಳಿದನು. ಅದಕ್ಕೆ ಇಸ್ರಾಯೇಲ್ಯರ ಅರಸನು - ಹಾಗನ್ನಬೇಡ; ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೋ ಅಂದನು.


ನನ್ನ ಜನರು ನನ್ನನ್ನು ಬಿಟ್ಟದ್ದು, ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದ್ದಕ್ಕೆ ಅಡ್ಡಬಿದ್ದದ್ದು, ಈ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.


ಆಗ ಯೆಹೂದದ ಪಟ್ಟಣಗಳವರೂ ಯೆರೂಸಲೇವಿುನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮರೆಹೊಕ್ಕು ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವದಿಲ್ಲ.


ಅಯ್ಯೋ, ಆ ದಿನವು ಘೋರವಾದದ್ದು, ಅದಕ್ಕೆ ಎಣೆಯಿಲ್ಲ; ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; ಆದರೂ ಅದರಿಂದ ಪಾರಾಗುವರು.


ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬಾರನು ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?


ಕೆತ್ತಿದ ವಿಗ್ರಹವು ಏತಕ್ಕೆ? ರೂಪಿಸಿದವನು ಅದನ್ನೇಕೆ ಕೆತ್ತಬೇಕಾಗಿತ್ತು? ಸುಳ್ಳುಕಣಿಗಾಗಿ ಇಟ್ಟುಕೊಂಡ ಎರಕದ ಬೊಂಬೆಯಿಂದ ಪ್ರಯೋಜನವೇನು? ನಿರ್ಮಿಸಿದವನು ತನ್ನ ಕೈಕೆಲಸದ ಮೂಗಬೊಂಬೆಯಲ್ಲಿ ನಂಬಿಕೆಯಿಡುವದಕ್ಕೆ ಏನಾಧಾರ?


ಮರಕ್ಕೆ ಎಚ್ಚತ್ತುಕೋ, ಜಡವಾದ ಕಲ್ಲಿಗೆ ಎದ್ದೇಳು ಎಂದು ಅಪ್ಪಣೆಕೊಡುವವನ ಗತಿಯನ್ನು ಅಯ್ಯೋ, ಏನು ಹೇಳಲಿ! ಇಂಥ ಬೊಂಬೆಯು ಬೋಧಿಸೀತೇ? ಇಗೋ, ಅದಕ್ಕೆ ಬೆಳ್ಳಿಬಂಗಾರವು ಹೊದಗಿಸಿದೆ, ಅದರೊಳಗೆ ಶ್ವಾಸವೇನೂ ಇಲ್ಲ.


ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ಇವುಗಳೇ ನಿನ್ನನ್ನುದ್ಧರಿಸಲಿ. ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವದು, ಬರೀ ಉಸಿರಾದರೂ ಒಯ್ಯುವದು. ನನ್ನನ್ನು ಆಶ್ರಯಿಸುವವನೋ ದೇಶವನ್ನನುಭವಿಸಿ ನನ್ನ ಪರಿಶುದ್ಧಪರ್ವತವನ್ನು ಬಾಧ್ಯವಾಗಿ ಹೊಂದುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು