ಯೆರೆಮೀಯ 2:3 - ಕನ್ನಡ ಸತ್ಯವೇದವು J.V. (BSI)3 ಇಸ್ರಾಯೇಲು ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾದರು ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇಸ್ರಾಯೇಲ್ ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾಗುವರು. ಇದು ಯೆಹೋವನು ನುಡಿ.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ಎಲೈ ಇಸ್ರಯೇಲ್, ನೀನು ನನಗೆ ಮೀಸಲಾದವಳು, ನನ್ನ ಬೆಳೆಯ ಪ್ರಥಮ ಫಲ. ಯಾರು ಯಾರು ಅದನ್ನು ತಿಂದರೋ ಅವರು ದ್ರೋಹಿಗಳು, ಕೇಡಿಗೆ ಗುರಿಯಾದವರು, ಎನ್ನುತ್ತಾರೆ ಸರ್ವೇಶ್ವರ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಇಸ್ರೇಲಿನ ಜನರು ಯೆಹೋವನಿಗೆ ಒಂದು ಪವಿತ್ರವಾದ ಕಾಣಿಕೆಯಾಗಿದ್ದರು. ಅವರು ಯೆಹೋವನ ಬೆಳೆಯ ಪ್ರಥಮ ಫಲವಾಗಿದ್ದರು. ಇಸ್ರೇಲಿನ ಜನರನ್ನು ಪೀಡಿಸಲು ಪ್ರಯತ್ನಿಸಿದವರನ್ನು ಯಾರಾದರೂ ಆಗಿರಲಿ, ದೋಷಿಗಳೆಂದು ನಿರ್ಣಯಿಸಲಾಗುತ್ತಿತ್ತು. ಆ ಕೆಟ್ಟ ಜನರಿಗೆ ಕೇಡಾಗುತ್ತಿತ್ತು.’” ಇದು ಯೆಹೋವನ ಸಂದೇಶ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇಸ್ರಾಯೇಲು ಯೆಹೋವ ದೇವರಿಗೆ ಪರಿಶುದ್ಧವೂ, ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿದೆ ಅವಳನ್ನು ತಿಂದು ಬಿಟ್ಟವರೆಲ್ಲರೂ ಅಪರಾಧಿಗಳಾಗುವರು. ಅವರಿಗೆ ಕೇಡು ಬರುವುದು,’ ” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |