Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:30 - ಕನ್ನಡ ಸತ್ಯವೇದವು J.V. (BSI)

30 ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ತಿದ್ದುಪಾಟಾಗಲಿಲ್ಲ; ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನಾನು ನಿಮ್ಮನ್ನು ದಂಡಿಸಿದ್ದು ವ್ಯರ್ಥವಾಯಿತು, ನೀವು ತಿದ್ದುಕೊಳ್ಳಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ಕತ್ತಿಗೆ ತುತ್ತಾಗಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ಯೆಹೂದದ ಜನರೇ ನಾನು ನಿಮ್ಮನ್ನು ಶಿಕ್ಷಿಸಿದೆ, ಆದರೆ ಅದರಿಂದ ಪ್ರಯೋಜನವಾಗಲಿಲ್ಲ. ಶಿಕ್ಷಿಸಿದರೂ ನೀವು ಹಿಂತಿರುಗಿ ಬರಲಿಲ್ಲ. ನಿಮ್ಮಲ್ಲಿಗೆ ಬಂದ ಪ್ರವಾದಿಗಳನ್ನು ನೀವು ಕತ್ತಿಯಿಂದ ಕೊಂದುಹಾಕಿದಿರಿ. ನೀವು ಅಪಾಯಕಾರಿಯಾದ ಸಿಂಹದಂತಿದ್ದು ಪ್ರವಾದಿಗಳನ್ನು ಕೊಂದುಹಾಕಿದಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ನಾನು ನಿಮ್ಮ ಜನರನ್ನು ದಂಡಿಸಿದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ. ನಿಮ್ಮ ಸ್ವಂತ ಖಡ್ಗವು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:30
30 ತಿಳಿವುಗಳ ಹೋಲಿಕೆ  

ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವದಕ್ಕೂ ನಿನ್ನ ಕಡೆಗೆ ತಿರುಗಿಸುವದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದುಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ಆ ಯೆಹೂದ್ಯರು ಕರ್ತನಾದ ಯೇಸುವನ್ನೂ ಪ್ರವಾದಿಗಳನ್ನೂ ಕೊಂದರು, ನಮ್ಮನ್ನೂ ಅಟ್ಟಿಬಿಟ್ಟರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ;


ಪ್ರವಾದಿಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿ ಸ್ವರೂಪನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


ಏಕೆ ದ್ರೋಹವನ್ನು ಹೆಚ್ಚಿಸಿ ಹೆಚ್ಚಿಸಿ ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ,


ಆದಕಾರಣ ನೀನು ಅವರಿಗೆ - ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ ಶಿಕ್ಷಿತರಾಗದೆ ಇರುವ ಜನವು ಇದೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ ಎಂದು ಹೇಳು.


ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.


ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರಮಾಡಿಕೊಳ್ಳದೆ ಈ ಉಪದ್ರವಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.


ಅದು ದೈವೋಕ್ತಿಗೆ ಕಿವಿಗೊಡಲಿಲ್ಲ, ಶಿಕ್ಷಣೆಗೆ ಒಳಪಡಲಿಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ.


ನಿನ್ನ ಪುಂಡಾಟವು ಅಸಹ್ಯವಾಗಿರುವದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ ಶುದ್ಧಿಯಾಗದೆ ಇರುವಿ.


ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವದನ್ನು ಕೇಳೇ ಕೇಳಿದ್ದೇನೆ - ನೀನು ನನ್ನನ್ನು ಶಿಕ್ಷಿಸಿದ್ದೀ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು; ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.


ಅವರು ದೇವಪ್ರೇಷಿತರನ್ನು ಗೇಲಿಮಾಡಿ ಆತನ ಮಾತುಗಳನ್ನು ತುಚ್ಫೀಕರಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ ಆತನ ಕೋಪಾಗ್ನಿಯು ಆತನ ಪ್ರಜೆಯ ಮೇಲೆ ಉರಿಯಹತ್ತಿತು, ಅದರ ತಾಪವು ಆರಿಹೋಗಲೇ ಇಲ್ಲ.


ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.


ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.


ಅದಕ್ಕೆ ಅವನು - ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲ್ಯರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ, ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ ಎಂದು ಉತ್ತರಕೊಟ್ಟನು.


ಅವನು ಅದಕ್ಕೆ - ಸೇನಾಧೀಶ್ವರನಾದ ದೇವರೇ, ಯೆಹೋವನೇ, ಇಸ್ರಾಯೇಲ್ಯರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ, ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ ಎಂದು ಉತ್ತರಕೊಟ್ಟನು.


ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.


ಐಗುಪ್ತದಲ್ಲಿ ಪ್ರಕಟಿಸಿರಿ, ವಿುಗ್ದೋಲ್, ತಹಪನೇಸ್, ನೋಫ್ ಎಂಬೀ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ - [ಐಗುಪ್ತವೇ,] ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ ಎಂದು ಸಾರಿರಿ.


ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕಪ್ರವಾದಿಗಳ ಪಾಪದೋಷಗಳಿಂದಲೇ ಈ ಗತಿ ಬಂತು.


ನರಪುತ್ರನೇ, ಆ ನಾಡಿಗೆ ಹೀಗೆ ಹೇಳು - ದೇವರ ಕೋಪದ ಈ ದಿನದಲ್ಲಿ ನೀನು ಶುದ್ಧಿಯಾಗದ ದೇಶ, ಮಳೆಯಿಲ್ಲದ ದೇಶ.


ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು