Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:31 - ಕನ್ನಡ ಸತ್ಯವೇದವು J.V. (BSI)

31 ನೀವು ಎಂಥಾ ದುರ್ವಂಶ! ಯೆಹೋವನ ಮಾತನ್ನು ನೋಡಿರಿ, ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ ಗಾಢಾಂಧಕಾರದ ಪ್ರದೇಶವಾಗಿಯೂ ಪರಿಣವಿುಸಿದ್ದೆನೋ? ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು ಎಂದು ನನ್ನ ಜನರು ಹೇಳುವದು ಹೇಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಇಸ್ರಯೇಲ್ ಜನರೇ, ದುಷ್ಟಸಂತತಿಯವರೇ, ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿರಿ : ನಾನು ನಿಮಗೆ ಬೆಂಗಾಡಾಗಿಯೂ ಗಾಢಾಂಧಕಾರವಾಗಿಯೂ ಪರಿಣಮಿಸಿದ್ದೇನೊ? ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ; ನಿನ್ನ ಬಳಿಗೆ ಇನ್ನು ಬಾರೆವು’ ಎಂದು ನನ್ನ ಜನರಾದ ನೀವು ಹೇಳುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? ನಾನು ಗಾಢಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? ನನ್ನ ಜನರು, ‘ನಮಗೆ ಇಷ್ಟವಾದ ಮಾರ್ಗವನ್ನು ಅನುಸರಿಸಲು ನಾವು ಸ್ವತಂತ್ರರಾಗಿದ್ದೇವೆ. ಯೆಹೋವನೇ, ನಾವು ಪುನಃ ನಿನ್ನಲ್ಲಿಗೆ ಬರುವದಿಲ್ಲ’ ಎಂದು ಹೇಳುತ್ತಾರೆ. ಅವರು ಹಾಗೆ ಏಕೆ ಹೇಳುತ್ತಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಇಸ್ರಾಯೇಲರೇ, ನೀವು ಯೆಹೋವ ದೇವರ ವಾಕ್ಯವನ್ನು ಗಮನಿಸಿರಿ: “ನಾನು ಇಸ್ರಾಯೇಲಿನ ಮರುಭೂಮಿಯಾದೆನೋ? ಗಾಡಾಂಧಕಾರದ ದೇಶವಾದೆನೋ? ನನ್ನ ಜನರು, ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ, ನಾವು ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವುದಿಲ್ಲ,’ ಎಂದು ಹೇಳುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:31
26 ತಿಳಿವುಗಳ ಹೋಲಿಕೆ  

ಆದರೆ ಯೆಶುರೂನು ಚೆನ್ನಾಗಿ ತಿಂದು ಕೊಬ್ಬಿ ಅಗಡಾಗಿ ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿತು.


ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಮ್ಮ ಸಹಾಯವಿಲ್ಲದೆ ಅರಸರಾದಿರಿ. ನೀವು ನಿಜವಾಗಿ ಅರಸರಾಗಿದ್ದರೆ ನನಗೆ ಎಷ್ಟೋ ಆನಂದವಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಅರಸರಾಗಿರುತ್ತಿದ್ದೆವು.


ಯೆಹೋವನು ದನಿಗೈದು ಪಟ್ಟಣದ ಕಡೆಗೆ ಕೂಗುತ್ತಾನೆ; (ನಿನ್ನ ನಾಮದಲ್ಲಿ ಭಯಭಕ್ತಿಯಿಡುವದು ಸುಜ್ಞಾನವೇ;) [ಬೀಸುವ] ದಂಡಕ್ಕೆ ಕಿವಿಗೊಡಿರಿ, ಅದನ್ನು ನೇವಿುಸಿದವನು ಯಾವನೆಂದು ತಿಳಿದುಕೊಳ್ಳಿರಿ.


ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮುಂಚೆ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕಂಡುಬಂದ ದೈವೋಕ್ತಿಗಳು.


ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ಹೊಟ್ಟೆತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು.


ನಾನು ರಹಸ್ಯದಲ್ಲಿ ನುಡಿದವನಲ್ಲ, ತಮೋಲೋಕದೊಳಗಿಂದ ಮಾತಾಡಿದವನಲ್ಲ, ಶೂನ್ಯವನ್ನೋ ಎಂಬಂತೆ ನನ್ನನ್ನು ಹುಡುಕಿರಿ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೇ ಆಡುತ್ತೇನೆ.


ಹಾಗಾಗದೆ ಹೊಟ್ಟೆತುಂಬಿದವನಾದರೆ ಯೆಹೋವನು ಯಾರೋ ಎಂದು ನಿನ್ನನ್ನು ತಿರಸ್ಕರಿಸೇನು; ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೇನು.


ಅವರು - ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾವನು ಎಂದು ಹೇಳಿಕೊಳ್ಳುತ್ತಾರಲ್ಲಾ.


ಯೆಹೋವನು ವಿಚಾರಿಸುವದಿಲ್ಲ ಎಂದು ದುಷ್ಟನು ಸೊಕ್ಕಿನ ಮುಖದಿಂದ ಹೇಳಿಕೊಂಡು ದೇವರಿಲ್ಲವೆಂಬದಾಗಿ ಸದಾ ಯೋಚಿಸುತ್ತಾನೆ.


ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ - ಜನರು ದೇವರಾದ ಯೆಹೋವನಿಗೋಸ್ಕರ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗೆ ಸಮೃದ್ಧಿಯನ್ನನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ ಅಂದನು.


ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವದು ಎಂದು ಹೇಳಿದನು.


ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು ಕಣ್ಣಿಗಳನ್ನು ಕಿತ್ತು ನಾನು ಸೇವೆ ಮಾಡುವದಿಲ್ಲವೆಂದು ಅಂದುಕೊಳ್ಳುತ್ತಿದ್ದೀ; ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಸೂಳೆಯಾಗಿ ನಡೆದಿದ್ದೀ.


ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ; ಆದರೆ ನೀನು - ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು ಅಂದುಕೊಂಡಿದ್ದೀ.


[ಇಸ್ರಾಯೇಲ್ಯರೇ,] ನಿಮ್ಮನ್ನು ಹುಟ್ಟಿಸಿದ ತಂದೆಯಂತಿರುವ ಶರಣನನ್ನು ನೀವು ನೆನಸಲಿಲ್ಲ; ಹೆತ್ತ ತಾಯಿಯಂತಿರುವ ದೇವರನ್ನು ಮರೆತುಬಿಟ್ಟಿರಿ.


ಫರೋಹನು ಅವನನ್ನು - ನನ್ನ ಬಳಿಯಲ್ಲಿ ನಿನಗೇನು ಕೊರತೆಯಾಯಿತು? ಸ್ವದೇಶಕ್ಕೆ ಹೋಗಬೇಕೆಂದು ಯಾಕೆ ಆಶಿಸುತ್ತೀ ಎಂದು ಕೇಳಲು ಅವನು - ಏನೂ ಕೊರತೆಯಾಗಿರುವದಿಲ್ಲ; ಆದರೂ ನನಗೆ ಹೋಗುವದಕ್ಕೆ ಅಪ್ಪಣೆಯಾಗಬೇಕು ಎಂದು ಉತ್ತರಕೊಟ್ಟನು.


ಆದರೆ ಇವರೇ ದೇವರನ್ನು ಕುರಿತು - ನಮ್ಮಿಂದ ತೊಲಗಿ ಹೋಗು, ನಿನ್ನ ಮಾರ್ಗಗಳ ತಿಳುವಳಿಕೆಯೇ ನಮಗೆ ಬೇಡ ಎಂದೂ


ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತಾಡುವೆನು; ಯೆಹೋವನ ಮಾರ್ಗವೂ ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು ಅಂದುಕೊಂಡೆನು. ಆದರೆ ಈ ದೊಡ್ಡ ಮನುಷ್ಯರು ಒಮ್ಮನವಾಗಿ [ತಮ್ಮ ಹೆಗಲ] ನೊಗವನ್ನು ಮುರಿದು ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.


ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವದು, ಕಾಡಿನ ತೋಳವು ಕೊಳ್ಳೆಮಾಡುವದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವದು; ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.


ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ಬೊಂಬೆಗಳ ನಿವಿುತ್ತ ನನ್ನನ್ನು ತೊರೆದದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲಿ ಸಿಕ್ಕಿಸಿ ಹಿಡಿಯುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು