ಯೆರೆಮೀಯ 2:34 - ಕನ್ನಡ ಸತ್ಯವೇದವು J.V. (BSI)34 ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವದನ್ನು ಕಂಡೆನೆಂಬ ನೆವ ನಿನಗಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ [ನಿನ್ನನ್ನು ದಂಡಿಸುವೆನು]. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಇದಲ್ಲದೆ, ನಿರ್ದೋಷಿಗಳಾದ ದೀನದಲಿತರ ಪ್ರಾಣರಕ್ತ ನಿಮ್ಮ ಬಟ್ಟೆಗೆ ಅಂಟಿಕೊಂಡಿದೆ! ‘ಇವರು ಕನ್ನ ಕೊರೆಯುವುದನ್ನು ಕಂಡೆವು’ ಎಂದು ನೀವು ನೆವ ಹೇಳುವಂತಿಲ್ಲ. ನಿಮ್ಮ ಈ ಎಲ್ಲ ದುರಭ್ಯಾಸಗಳ ನಿಮಿತ್ತ ದಂಡಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ನಿನ್ನ ಕೈಗಳ ಮೇಲೆ ರಕ್ತದ ಕಲೆ ಇದೆ. ಅದು ನಿರ್ದೋಷಿಗಳಾದ ಬಡವರ ರಕ್ತ. ಅವರು ನಿನ್ನ ಕೈಗೆ ಸಿಕ್ಕಿಹಾಕಿಕೊಂಡ ಕಳ್ಳರಾಗಿರಲಿಲ್ಲ. ಆದರೂ ನೀನು ಅವರನ್ನು ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನ್ನು ಮಾಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡವರ ರಕ್ತವು ಸಿಕ್ಕಿದೆ. ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೀ. ಅಧ್ಯಾಯವನ್ನು ನೋಡಿ |