ಯೆರೆಮೀಯ 2:35 - ಕನ್ನಡ ಸತ್ಯವೇದವು J.V. (BSI)35 ನೀನಾದರೆ - ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ತೊಲಗಿ ಹೋಗಿದೆ ನಿಶ್ಚಯ ಎಂದುಕೊಂಡಿದ್ದೀ; ನಾನು ಪಾಪಮಾಡಲಿಲ್ಲವೆಂದು ನೀನು ಹೇಳಿದ ಕಾರಣ, ಇಗೋ ನಾನು ನಿನಗೆ ನ್ಯಾಯತೀರಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ನೀನಾದರೋ, “ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ನಿಶ್ಚಯವಾಗಿ ತೊಲಗಿಹೋಗಿದೆ” ಎಂದುಕೊಂಡಿದ್ದಿ; “ನಾನು ಪಾಪಮಾಡಲಿಲ್ಲ” ಎಂದು ನೀನು ಹೇಳಿದ ಕಾರಣ, ಇಗೋ, ನಾನು ನಿನಗೆ ನ್ಯಾಯ ತೀರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 “ನೀವಾದರೋ, ‘ನಾವು ನಿರ್ದೋಷಿಗಳು, ಸರ್ವೇಶ್ವರನ ಕೋಪ ನಮ್ಮ ಮೇಲಿಂದ ತೊಲಗಿಹೋಗಿದೆ, ಇದು ನಿಶ್ಚಯ’ ಎಂದುಕೊಂಡಿದ್ದೀರಿ. ‘ನಾವು ಪಾಪಮಾಡಿಲ್ಲ’ ಎಂದು ನೀವು ಹೇಳಿದ ಕಾರಣ ನಿಮ್ಮನ್ನು ನ್ಯಾಯತೀರ್ಪಿಗೆ ಗುರಿಮಾಡಿಯೇ ತೀರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆದರೆ ನೀನು, ‘ನಾನು ತಪ್ಪು ಮಾಡಿಲ್ಲ. ದೇವರು ನನ್ನ ಮೇಲೆ ಕೋಪಗೊಂಡಿಲ್ಲ’ ಎಂದು ಹೇಳುತ್ತಿರುವೆ. ಆದ್ದರಿಂದ ನೀನು ಸುಳ್ಳು ಹೇಳಿದ ಅಪರಾಧಿಯೆಂದು ನಾನು ನಿನಗೆ ತೀರ್ಪುನೀಡುತ್ತೇನೆ. ಏಕೆಂದರೆ ‘ನಾನು ಯಾವ ತಪ್ಪೂ ಮಾಡಿಲ್ಲ’ ಎಂದು ನೀನು ಹೇಳಿಕೊಳ್ಳುತ್ತಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆದರೂ ನೀನು, ‘ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ದೇವರ ಕೋಪವು ನನ್ನನ್ನು ಬಿಟ್ಟು ತಿರುಗುವುದು,’ ಎಂದು ಹೇಳುತ್ತೀ. ನೀನು, ‘ನಾನು ಪಾಪಮಾಡಲಿಲ್ಲ’ ಎಂದು ಹೇಳುವುದರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು. ಅಧ್ಯಾಯವನ್ನು ನೋಡಿ |