Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:36 - ಕನ್ನಡ ಸತ್ಯವೇದವು J.V. (BSI)

36 ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಅತ್ತಿತ್ತ ಹೋಗುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಪ್ರಯತ್ನಿಸುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟೆಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ನಿಮ್ಮ ಮಾರ್ಗವನ್ನು ಕೈಬಿಟ್ಟು ಎಷ್ಟು ಸುಲಭವಾಗಿ ಅತ್ತಿತ್ತ ಓಡಾಡುತ್ತೀರಿ! ಅಸ್ಸೀರಿಯದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿರೋ ಹಾಗೆಯೇ ಈಜಿಪ್ಟಿನ ವಿಷಯವಾಗಿಯೂ ಆಶಾಭಂಗಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ನಿನ್ನ ವಿಚಾರಗಳನ್ನು ಬದಲಾಯಿಸುವದು ನಿನಗೆ ಸುಲಭ. ಅಸ್ಸೀರಿಯಾ ನಿನ್ನನ್ನು ನಿರಾಶೆಗೊಳಿಸಿತು. ಆಗ ನೀನು ಅಸ್ಸೀರಿಯರನ್ನು ಬಿಟ್ಟು ಈಜಿಪ್ಟಿನ ಸಹಾಯವನ್ನು ಕೇಳಿದೆ, ಈಜಿಪ್ಟ್ ನಿನ್ನನ್ನು ನಿರಾಶೆಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ನಿನ್ನ ಮಾರ್ಗವನ್ನು ಬೇರೆ ಮಾಡಿಕೊಳ್ಳುವಷ್ಟು ಏಕೆ ಬಹಳವಾಗಿ ತಿರುಗಾಡುತ್ತೀ? ಅಸ್ಸೀರಿಯದ ನಿಮಿತ್ತ ನಾಚಿಕೆ ಪಟ್ಟ ಹಾಗೆ ಈಜಿಪ್ಟಿನ ನಿಮಿತ್ತವೂ ನಾಚಿಕೆಪಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:36
22 ತಿಳಿವುಗಳ ಹೋಲಿಕೆ  

ದ್ರೋಹಿಯಾದ ಮಗಳೇ, ಎಂದಿನವರೆಗೆ ಅತ್ತಿತ್ತ ಅಲೆದಾಡುವಿ? ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಉಂಟುಮಾಡಿದ್ದಾನೆ ನೋಡು, ಹೆಂಗಸು ಗಂಡಸನ್ನು ಕಾಪಾಡುವಳು.


ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ವ್ರಣವನ್ನು ಗುಣಪಡಿಸಲಾರನು.


ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣ ಗಾಳಿಯೇ; ಅದು ಮೋಸವನ್ನೂ ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡಿಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು [ಕಾಣಿಕೆಯಾಗಿ] ಕಳುಹಿಸುತ್ತದೆ.


ನನಗೆ ಮುಡಚಟ್ಟಾಗಲಿಲ್ಲ, ಅನ್ಯದೇವತೆಗಳನ್ನು ನಾನು ಹಿಂಬಾಲಿಸಲಿಲ್ಲವೆಂದು ಹೇಗೆ ಹೇಳುತ್ತೀ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ಕೆಲಸವನ್ನು ಮನಸ್ಸಿಗೆ ತಂದುಕೋ, ತನ್ನ ಜಾಡೆಗಳನ್ನು ತಾರುಮಾರು ಮಾಡುವ ವೇಗವಾದ ಹೆಣ್ಣು ಒಂಟೆಯಂತಿದ್ದೀ.


ಆ ಕಾಲದಲ್ಲಿ ಅರಸನಾದ ಆಹಾಜನು ತನಗೆ ಸಹಾಯಮಾಡಬೇಕೆಂದು ಅಶ್ಶೂರದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು.


ಅಶ್ಶೂರವು ನಮ್ಮನ್ನು ರಕ್ಷಿಸುವದೆಂದು ನಂಬೆವು; [ಐಗುಪ್ತದ] ಕುದುರೆಗಳನ್ನು ಹತ್ತೆವು; ನಮ್ಮ ಕೈಕೆಲಸದ ಬೊಂಬೆಗಳಿಗೆ - ನೀವು ನಮ್ಮ ದೇವರುಗಳು ಎಂದು ಇನ್ನು ಹೇಳೆವು; ನೀನೇ ಅನಾಥರನ್ನು ಕರುಣಿಸುವಿ ಎಂಬದಾಗಿ ಅರಿಕೆಮಾಡಿಕೊಳ್ಳಿರಿ.


ಅದು ಜಗಳಗಂಟ ಮಹಾರಾಜನಿಗೆ ಕಾಣಿಕೆಯಾಗಿ ಅಶ್ಶೂರಕ್ಕೆ ಒಯ್ಯಲ್ಪಡುವದು; ಎಫ್ರಾಯೀವಿುಗೆ ಅವಮಾನವಾಗುವದು, ಇಸ್ರಾಯೇಲು ತಾನು ಸಂಕಲ್ಪಿಸಿಕೊಂಡ ವಿಷಯವಾಗಿ ನಾಚಿಕೆಪಡುವದು.


ಎಫ್ರಾಯೀಮು ಬುದ್ಧಿವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ;


[ಐಗುಪ್ತವೇ,] ಇಸ್ರಾಯೇಲ್ಯರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರೆಲ್ಲರ ಹೆಗಲನ್ನು ಚುಚ್ಚಿದಿ; ಊರಿಕೊಳ್ಳಲು ನೀನು ಒಡೆದು ಅವರೆಲ್ಲರ ನಡುವಿಗೆ ನಡುಕವನ್ನು ಉಂಟುಮಾಡಿದಿ.


ಹೇಗಾದರೂ ಹೊಟ್ಟೆ ತುಂಬ ಅನ್ನ ತಿಂಬೋಣ ಎಂದು ಐಗುಪ್ತ್ಯರಿಗೂ ಅಶ್ಶೂರ್ಯರಿಗೂ ಅಧೀನರಾದೆವು.


ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಕೋವರದಲ್ಲಿ ಕಾದುಕೊಂಡಿದ್ದೇವಲ್ಲಾ.


ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನನ್ನನ್ನು ವಿಚಾರಿಸುವದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ - ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವದು.


ಕಾಮವನ್ನು ತೀರಿಸಿಕೊಳ್ಳಬೇಕೆಂದು ಎಷ್ಟೋ ಮುಂದರಿದಿದ್ದೀ! ಆದಕಾರಣ ನಿನ್ನ ದುರಭ್ಯಾಸಗಳಿಗೆ ನಿನ್ನ ನಡತೆಯನ್ನು ಒಗ್ಗಿಸಿಕೊಂಡಿದ್ದೀ.


ನೀನು ಐಗುಪ್ತದ ದಾರಿಯಲ್ಲಿ ನಡೆದದ್ದೇಕೆ? ನೈಲ್‍ನದಿಯ ನೀರನ್ನು ಕುಡಿಯಬೇಕಾದದ್ದೇನು? ಅಶ್ಶೂರದ ಮಾರ್ಗದಲ್ಲಿ ಹೆಜ್ಜೆಯಿಟ್ಟದ್ದೇಕೆ? [ಯೂಫ್ರೇಟೀಸ್] ನದಿಯ ಜಲವನ್ನು ಪಾನಮಾಡಬೇಕಾದದ್ದೇನು?


ಆಗ [ನನ್ನ ಜನರು] ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿವಿುತ್ತವಾಗಿಯೂ ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.


ನಿನ್ನ ಅವಮಾನದ ಸುದ್ದಿಯು ಜನಾಂಗಗಳಿಗೆ ಕೇಳಬಂದಿದೆ, ನಿನ್ನ ಕೂಗಾಟವು ಲೋಕದಲ್ಲೆಲ್ಲಾ ತುಂಬಿದೆ; ವೀರನು ವೀರನನ್ನು ಎಡವಿ ಇಬ್ಬರೂ ಬಿದ್ದಿದ್ದಾರೆ.


ಮತ್ತು ಇಷ್ಟೂ ಸಾಲದೆಂದು ಅಶ್ಯೂರ್ಯರೊಂದಿಗೂ ಹಾದರಮಾಡಿದಿ; ಹೌದು, ಅವರೊಡನೆ ಹಾದರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.


[ಚೀಯೋನ್ ಯುವತಿಯೇ,] ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೋ! ಬಾಷಾನಿನಲ್ಲಿ ಮೊರೆಯಿಡು, ಅಬಾರೀವಿುನಲ್ಲಿ ಅರಚಿಕೋ! ನಿನ್ನ ವಿುಂಡರೆಲ್ಲಾ ಹಾಳಾಗಿ ಹೋದರಲ್ಲಾ.


ನಿನ್ನನ್ನು ಅಟ್ಟಿಕೊಂಡು ಹೋಗುವ ಕುರುಬರನ್ನು ಗಾಳಿಯು ಅಟ್ಟಿಬಿಡುವದು; ನಿನ್ನ ವಿುಂಡರು ಸೆರೆಹೋಗುವರು; ಆಗ ನಿನ್ನ ಸಕಲ ದುಷ್ಕೃತ್ಯಗಳ ನಿವಿುತ್ತ ನೀನು ಆಶಾಭಂಗಪಟ್ಟು ಅವಮಾನಕ್ಕೀಡಾಗುವದು ಖಂಡಿತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು