Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:37 - ಕನ್ನಡ ಸತ್ಯವೇದವು J.V. (BSI)

37 ಅಲ್ಲಿಂದಲೂ ತಲೆಯ ಮೇಲೆ ಕೈಯಿಟ್ಟುಕೊಂಡು ಹೊರಡುವಿ; ಏಕಂದರೆ ನಿನ್ನ ಭರವಸಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಸಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅಲ್ಲಿಂದಲೂ ತಲೆಯ ಮೇಲೆ ಕೈಹೊತ್ತುಕೊಂಡು ಹೊರಡುವಿ; ಏಕೆಂದರೆ ನಿನ್ನ ಭರವಸೆಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಕೈಗೂಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅಲ್ಲಿಂದಲೂ ನಿರಾಶೆಯಿಂದ ತಲೆಯ ಮೇಲೆ ಕೈಹೊತ್ತು ಹೊರಡುವಿರಿ. ನೀವು ಯಾರಲ್ಲಿ ನಂಬಿಕೆಯಿಟ್ಟಿದ್ದಿರೋ ಅವರನ್ನು ಸರ್ವೇಶ್ವರನಾದ ನಾನು ನಿರಾಕರಿಸಿದ್ದೇನೆ. ಅವರಿಂದ ನಿಮ್ಮ ಕಾರ್ಯ ಕೈಗೂಡದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಕೊನೆಗೆ ನೀನು ಈಜಿಪ್ಟನ್ನು ಬಿಡುವೆ, ನಾಚಿಕೆಯಿಂದ ತಲೆಯ ಮೇಲೆ ಕೈಯಿಟ್ಟುಕೊಂಡು ಹೊರಡುವೆ. ನೀನು ಆ ದೇಶಗಳನ್ನು ನಂಬಿರುವೆ, ಆದರೆ ಆ ದೇಶಗಳಿಂದ ನಿನಗೆ ಯಾವ ಅನುಕೂಲವೂ ಆಗದು. ಯೆಹೋವನು ಆ ದೇಶಗಳನ್ನು ನಿರಾಕರಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟು ಹೋಗುವೆ. ಏಕೆಂದರೆ ಯೆಹೋವ ದೇವರು ನೀನು ಭರವಸೆ ಇಟ್ಟವುಗಳನ್ನು ತಿರಸ್ಕರಿಸಿದ್ದಾರೆ, ಅವುಗಳ ಮುಖಾಂತರ ನಿನ್ನ ಕಾರ್ಯ ಸಫಲವಾಗುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:37
16 ತಿಳಿವುಗಳ ಹೋಲಿಕೆ  

ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು ನಿಲುವಂಗಿಯನ್ನು ಹರಿದುಕೊಂಡು ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು.


ಯೆಹೋವನು ಹೀಗನ್ನುತ್ತಾನೆ - ಮಾನವಮಾತ್ರದವರಲ್ಲಿ ಭರವಸವಿಟ್ಟು ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ತನು.


ಆ ಅರಸನು ಚಿದ್ಕೀಯನನ್ನು ಬಾಬೆಲಿಗೆ ಒಯ್ದುಕೊಂಡುಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು; ನೀವು ಕಸ್ದೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬದಾಗಿ ಏಕೆ ನುಡಿಯುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದ್ದನು.


ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಅತ್ತಿತ್ತ ಹೋಗುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.


ಕೈದಿಗಳ [ಕಾಲ] ಕೆಳಗೆ ಮುದುರಿಕೊಂಡು ಹತರಾದವರ ಕೆಳಗೆ ಬಿದ್ದಿರುವದೇ ಇವರ ಗತಿ! ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿರುತ್ತಾನೆ; ನಿಮಗೆ ವಿರೋಧವಾಗಿ ಆರ್ಭಟದಿಂದ ಊದತಕ್ಕ ತುತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿರುತ್ತಾರೆ. ಇಸ್ರಾಯೇಲ್ಯರೇ, ನಿಮ್ಮ ಪಿತೃಗಳ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಸಫಲರಾಗಲಿಕ್ಕಿಲ್ಲ ಎಂದು ಕೂಗಿ ಹೇಳಿದನು.


ಆದರೆ ಮೋಶೆ ಅವರಿಗೆ - ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ; ಇದು ಕೈಗೂಡುವದಿಲ್ಲ;


ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರಿಗೆ ಕಳುಹಿಸುತ್ತಾರೆ; ಅವರು ಕೊಳಗಳಿಗೆ ಹೋದಾಗ ನೀರು ಕಾಣುವದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ; ಆಶೆಗೆಟ್ಟು ನಾಚಿಕೆಪಟ್ಟು ಮೋರೆ ಮುಚ್ಚಿಕೊಳ್ಳುತ್ತಾರೆ.


ದೇಶದಲ್ಲಿ ಮಳೆಯಿಲ್ಲದೆ ಭೂವಿುಯು ಬಿರುಕುಬಿಟ್ಟಿರುವದರಿಂದ ರೈತರು ನಾಚಿಕೆಪಟ್ಟು ಮೋರೆಮುಚ್ಚಿಕೊಳ್ಳುತ್ತಾರೆ.


ಯೆಹೋವನು ಇಂತೆನ್ನುತ್ತಾನೆ - ಇವನನ್ನು ಮಕ್ಕಳಿಲ್ಲದವನು, ವ್ಯರ್ಥಜನ್ಮದವನು ಎಂದು ಪಟ್ಟಿಯಲ್ಲಿ ಬರೆಯಿರಿ; ಇವನ ಸಂತಾನದಲ್ಲಿ ಇನ್ನು ಮೇಲೆ ಯಾವನೂ ದಾವೀದನ ಸಿಂಹಾಸನದಲ್ಲಿ ಕೂತು ಯೆಹೂದವನ್ನು ಆಳಿ ಬಾಳನು.


ಆಗ ದಾವೀದನು ಅವನಿಗೆ - ನೀನು ಈ ಹೊತ್ತು ಇಲ್ಲೇ ಇರು, ನಾಳೆ ನಿನ್ನನ್ನು ಕಳುಹಿಸುತ್ತೇನೆ ಎಂದು ಆಜ್ಞಾಪಿಸಿದನು. ಆದದರಿಂದ ಊರೀಯನು ಆ ದಿನ ಯೆರೂಸಲೇವಿುನಲ್ಲೇ ಇದ್ದನು.


ಮೃತ್ಯುವಿನಿಂದ ನೀವು ಪಡೆದುಕೊಂಡ ಒಡಂಬಡಿಕೆಯು ಸಾಗದು, ಪಾತಾಳದೊಡನೆ ನೀವು ಮಾಡಿಕೊಂಡ ಒಪ್ಪಂದವು ನಿಲ್ಲದು; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ನಿಮ್ಮನ್ನು ತುಳಿದುಬಿಡುವದು.


[ಚೀಯೋನ್ ಯುವತಿಯೇ,] ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೋ! ಬಾಷಾನಿನಲ್ಲಿ ಮೊರೆಯಿಡು, ಅಬಾರೀವಿುನಲ್ಲಿ ಅರಚಿಕೋ! ನಿನ್ನ ವಿುಂಡರೆಲ್ಲಾ ಹಾಳಾಗಿ ಹೋದರಲ್ಲಾ.


ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಕೋವರದಲ್ಲಿ ಕಾದುಕೊಂಡಿದ್ದೇವಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು