Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:5 - ಕನ್ನಡ ಸತ್ಯವೇದವು J.V. (BSI)

5 ಯೆಹೋವನು ಹೀಗನ್ನುತ್ತಾನೆ, ನಿಮ್ಮ ಪಿತೃಗಳು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡದರಿಂದ ವ್ಯರ್ಥಾಚಾರವನ್ನು ಅನುಸರಿಸಿ ತಾವೇ ವ್ಯರ್ಥರಾಗಿ ನನ್ನನ್ನು ಬಿಟ್ಟು ದೂರವಾದರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡು, ವ್ಯರ್ಥಾಚರಣೆಯನ್ನು ಅನುಸರಿಸಿ ತಾವೇ ಅಯೋಗ್ಯರಾಗಿ ನನ್ನನ್ನು ಬಿಟ್ಟು ದೂರವಾದರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ನಿಮ್ಮ ಪಿತೃಗಳು ನನ್ನಲ್ಲಿ ಯಾವ ಕೊರತೆಯನ್ನು ಕಂಡು ನನ್ನಿಂದ ದೂರವಾದರು? ಅವರು ವ್ಯರ್ಥಾಚಾರಗಳನ್ನು ಅನುಸರಿಸುತ್ತಾ ತಾವೇ ವ್ಯರ್ಥವಾಗಿಬಿಟ್ಟರು !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಹೀಗೆನ್ನುತ್ತಾನೆ: “ನಾನು ನಿಮ್ಮ ಪೂರ್ವಿಕರಿಗೆ ಅನ್ಯಾಯ ಮಾಡಿದೆನೇ? ಅದಕ್ಕಾಗಿ ಅವರು ನನ್ನನ್ನು ತಿರಸ್ಕರಿಸಿದರೇ? ನಿಮ್ಮ ಪೂರ್ವಿಕರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿ ತಾವು ಸಹ ನಿಷ್ಪ್ರಯೋಜಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ, ವ್ಯರ್ಥವಾಗುವ ಹಾಗೆ ನನ್ನಲ್ಲಿ ಏನು ತಪ್ಪನ್ನು ಕಂಡಿದ್ದಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:5
24 ತಿಳಿವುಗಳ ಹೋಲಿಕೆ  

ಆತನು ತಮ್ಮ ಪಿತೃಗಳಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿ ವಾಕ್ಯಗಳನ್ನೂ ತಿರಸ್ಕರಿಸಿ ವಿುಥ್ಯಾದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು; ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ ಅವರನ್ನು ಅನುಸರಿಸಿದರು;


ಯಾಕಂದರೆ ದೇವರ ವಿಷಯವಾಗಿ ಅವರಿಗೆ ತಿಳುವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಘನಪಡಿಸಲಿಲ್ಲ; ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ವಿಚಾರ ಮಾಡಿಮಾಡಿ ಫಲ ಕಾಣಲಿಲ್ಲ; ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಯಿತು.


ಸುಳ್ಳು ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ಕರುಣಾನಿಧಿಯನ್ನು ತೊರೆದುಬಿಡುವರು.


ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ.


ವಿಗ್ರಹ ಕೆತ್ತುವವರೆಲ್ಲಾ ಮಟ್ಟಮಾಯವೇ; ಅವರ ಇಷ್ಟದ ಬೊಂಬೆಗಳು ಯಾತಕ್ಕೂ ಬಾರವು; ಬೊಂಬೆಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ; ನಾಚಿಕೆಗೆ ಗುರಿಯಾಗುವರು.


ದೇವರಲ್ಲದವುಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ ರಕ್ಷಣೆಯೂ ಸಿಕ್ಕುವದಿಲ್ಲ. ಅವು ವ್ಯರ್ಥವಾದವುಗಳೇ.


ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಹುರುಡು ಹುಟ್ಟಿಸುವೆನು. ಅವರು ಅಚೇತನ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.


ಜನರೇ, ನೀವು ಮಾಡುವದು ಇದೇನು? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.


ನೀವು ಎಂಥಾ ದುರ್ವಂಶ! ಯೆಹೋವನ ಮಾತನ್ನು ನೋಡಿರಿ, ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ ಗಾಢಾಂಧಕಾರದ ಪ್ರದೇಶವಾಗಿಯೂ ಪರಿಣವಿುಸಿದ್ದೆನೋ? ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು ಎಂದು ನನ್ನ ಜನರು ಹೇಳುವದು ಹೇಗೆ.


ಈ ಜನರು ಮಾತಿನಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಮನಸ್ಸು ನನಗೆ ದೂರವಾಗಿದೆ.


ನರಪುತ್ರನೇ, ನಿನ್ನ ಸಹೋದರರು, ನಿನ್ನ ಅಣ್ಣತಮ್ಮಂದಿರು, ನಿನ್ನ ನೆಂಟರು ಅಂತು ಯೆರೂಸಲೇವಿುನವರು ಇಸ್ರಾಯೇಲ್ ವಂಶದವರಲ್ಲಿ ಯಾರಯಾರನ್ನು - ಯೆಹೋವನ ಬಳಿಯಿಂದ ದೂರವಾಗಿ ತೊಲಗಿರಿ, ಈ ದೇಶವು ನಮಗೇ ಸ್ವಾಸ್ತ್ಯವಾಗಿ ಸಿಕ್ಕಿದೆ ಎಂದು ಹೀನೈಸಿದರೋ ಅವರೆಲ್ಲರೂ ಉಳಿದಿದ್ದಾರಲ್ಲಾ.


ಜನಾಂಗಗಳ ವ್ಯರ್ಥವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವಾ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು; ನೀನು ಇವುಗಳನ್ನೆಲ್ಲಾ ನಡಿಸುವವನಾಗಿದ್ದೀಯಷ್ಟೆ.


ನೀನು ಅವರನ್ನು ನಾಟಿದ್ದೀ, ಅವರು ಬೇರೂರಿ ಬೆಳೆದು ಹಣ್ಣುಬಿಟ್ಟಿದ್ದಾರೆ; ನೀನು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.


ಅವರೆಲ್ಲರೂ ಪಶುಪ್ರಾಯರು, ಮಂದರು; ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.


ಮತ್ತು ಯೆಹೋವನು - ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ;


ಧರ್ಮಕ್ಕೆ ದೂರರಾದ ಹಟಗಾರರೇ, ನನ್ನ ಮಾತಿಗೆ ಕಿವಿಗೊಡಿರಿ;


ಯಾಕೋಬನ ಮನೆತನವೇ, ಇಸ್ರಾಯೇಲ್ ವಂಶದ ಸಕಲ ಗೋತ್ರಗಳೇ, ಯೆಹೋವನ ವಾಕ್ಯವನ್ನು ಕೇಳಿರಿ;


ಆಹಾ, ನನ್ನ ಪ್ರಜೆಯೆಂಬಾಕೆಯು - ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. [ಅದಕ್ಕೆ ಯೆಹೋವನು - ] ಇವರು ತಮ್ಮ ವಿಗ್ರಹಗಳಿಂದಲೂ ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ [ಅನ್ನುತ್ತಾನೆ].


ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ಬೊಂಬೆಗಳ ನಿವಿುತ್ತ ನನ್ನನ್ನು ತೊರೆದದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲಿ ಸಿಕ್ಕಿಸಿ ಹಿಡಿಯುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು