ಯೆರೆಮೀಯ 2:7 - ಕನ್ನಡ ಸತ್ಯವೇದವು J.V. (BSI)7 ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರತಂದು ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆನು; ಆದರೆ ನೀವು ಪ್ರವೇಶಿಸಿ ಆ ನನ್ನ ದೇಶವನ್ನು ಹೊಲೆಮಾಡಿ ನನ್ನ ಸ್ವಾಸ್ತ್ಯವನ್ನು ಅಸಹ್ಯಪಡಿಸಿದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರೆತಂದು, ಅದರ ಫಲವನ್ನು ಮತ್ತು ಸಾರವನ್ನು ಅನುಭವಿಸುವ ಹಾಗೆ ಮಾಡಿದೆನು. ಆದರೆ ನೀವು ಆ ನನ್ನ ದೇಶವನ್ನು ಪ್ರವೇಶಿಸಿ, ಅದನ್ನು ಹೊಲೆ ಮಾಡಿ, ನನ್ನ ಸ್ವತ್ತನ್ನು ಅಸಹ್ಯಪಡಿಸಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾನು ನಿಮ್ಮನ್ನು ಫಲವತ್ತಾದ ನಾಡಿಗೆ ಕರೆತಂದೆ. ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆ. ಆದರೆ ನೀವು ಒಳನುಗ್ಗಿ ಬಂದು ಆ ನನ್ನ ನಾಡನ್ನು ಹೊಲೆಮಾಡಿದಿರಿ; ಆ ನನ್ನ ಸೊತ್ತನ್ನು ಅಸಹ್ಯಪಡಿಸಿದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ನಾನು ನಿಮ್ಮನ್ನು ಅನೇಕ ಅಮೂಲ್ಯವಸ್ತುಗಳಿಂದ ಕೂಡಿದ ಫಲವತ್ತಾದ ಭೂಮಿಗೆ ಕರೆದುತಂದೆ. ಅಲ್ಲಿ ಬೆಳೆಯುವ ಫಲಗಳನ್ನು ತಿನ್ನಲಿ ಎಂಬ ಉದ್ದೇಶದಿಂದ ನಾನು ಕರೆದುತಂದೆ. ಆದರೆ ನೀವು ಬಂದು ನನ್ನ ಭೂಮಿಯನ್ನು ಹೊಲಸು ಮಾಡಿದಿರಿ. ನಾನು ಆ ಭೂಮಿಯನ್ನು ನಿಮಗೆ ಕೊಟ್ಟೆ, ಆದರೆ ನೀವು ಅದನ್ನು ಕೆಟ್ಟ ಸ್ಥಳವನ್ನಾಗಿ ಮಾಡಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾನು ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಸಾರವನ್ನೂ, ಮೇಲನ್ನೂ ತಿನ್ನುವ ಹಾಗೆ ಕರೆದುಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸೊತ್ತನ್ನು ಅಸಹ್ಯ ಮಾಡಿದಿರಿ. ಅಧ್ಯಾಯವನ್ನು ನೋಡಿ |