Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:8 - ಕನ್ನಡ ಸತ್ಯವೇದವು J.V. (BSI)

8 ಯಾಜಕರಿಗೆ ಯೆಹೋವನು ಎಲ್ಲಿ ಎಂಬ ವಿಚಾರವೇ ಇರಲಿಲ್ಲ, ಧರ್ಮೋಪದೇಶಕರು ನನ್ನನ್ನು ತಿಳಿಯಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್‍ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಸೇವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯಾಜಕರು, ‘ಸರ್ವೇಶ್ವರ ಸ್ವಾಮಿ ಎಲ್ಲಿ? ಎಂದು ವಿಚಾರಿಸಲೇ ಇಲ್ಲ. ಧರ್ಮಶಾಸ್ತ್ರಿಗಳು ನನ್ನನ್ನು ಅರಿತುಕೊಳ್ಳಲಿಲ್ಲ. ಪ್ರಜಾಪಾಲಕರು ನನಗೆ ದ್ರೋಹಮಾಡಿದರು. ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದನೆ ಮಾಡಿದರು. ನಿರರ್ಥಕವಾದುವುಗಳನ್ನು ಪೂಜಿಸಿದರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “‘ಯೆಹೋವನು ಎಲ್ಲಿ?’ ಎಂದು ಯಾಜಕರು ಕೇಳಲಿಲ್ಲ. ಧರ್ಮಶಾಸ್ತ್ರವನ್ನು ಬಲ್ಲವರು ನನ್ನನ್ನು ತಿಳಿಯಬಯಸಲಿಲ್ಲ. ಇಸ್ರೇಲರ ಜನನಾಯಕರು ನನ್ನ ವಿರೋಧಿಗಳಾದರು. ಪ್ರವಾದಿಗಳು ಸುಳ್ಳುದೇವರಾದ ಬಾಳನ ಹೆಸರಿನಿಂದ ಭವಿಷ್ಯವಾಣಿಯನ್ನು ನುಡಿದರು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯಾಜಕರು, ‘ಯೆಹೋವ ದೇವರು ಎಲ್ಲಿ?’ ಎಂದು ಕೇಳಲಿಲ್ಲ. ದೈವನಿಯಮವನ್ನು ಉಪದೇಶಿಸುವವರು ನನ್ನನ್ನು ತಿಳಿಯಲಿಲ್ಲ. ನಾಯಕರು ನನಗೆ ವಿರೋಧವಾಗಿ ದ್ರೋಹಮಾಡಿದರು. ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು. ಪ್ರಯೋಜನವಿಲ್ಲದವುಗಳನ್ನು ಹಿಂದಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:8
35 ತಿಳಿವುಗಳ ಹೋಲಿಕೆ  

ಕೆತ್ತಿದ ವಿಗ್ರಹವು ಏತಕ್ಕೆ? ರೂಪಿಸಿದವನು ಅದನ್ನೇಕೆ ಕೆತ್ತಬೇಕಾಗಿತ್ತು? ಸುಳ್ಳುಕಣಿಗಾಗಿ ಇಟ್ಟುಕೊಂಡ ಎರಕದ ಬೊಂಬೆಯಿಂದ ಪ್ರಯೋಜನವೇನು? ನಿರ್ಮಿಸಿದವನು ತನ್ನ ಕೈಕೆಲಸದ ಮೂಗಬೊಂಬೆಯಲ್ಲಿ ನಂಬಿಕೆಯಿಡುವದಕ್ಕೆ ಏನಾಧಾರ?


ಏಕಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ; ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ, ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ನಾಚಿಕೆಯನ್ನು ಹುಟ್ಟಿಸುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಕೆಡಿಸದೆ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಸಜ್ಜನರೆಂದು ಪ್ರತಿಮನುಷ್ಯನ ಮನಸ್ಸು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವದರಿಂದ ಇಂಥದನ್ನು ನಿಮಗೆ ಮಾಡುವರು.


ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟದರಿಂದ ಇನ್ನು ನನಗೆ ಯಾಜಕ ಸೇವೆಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು; ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ ನಾನು ನಿಮ್ಮ ಸಂತತಿಯವರನ್ನು ಮರೆಯುವೆನು.


ನಾನಂತು ಆತನನ್ನು ಬಲ್ಲೆನು; ಆತನನ್ನು ಅರಿಯೆನೆಂದು ಹೇಳಿದರೆ ನಿಮ್ಮ ಹಾಗೆ ಸುಳ್ಳುಗಾರನಾಗುವೆನು; ಆದರೆ ಆತನನ್ನು ತಿಳಿದಿದ್ದೇನೆ, ಆತನ ವಾಕ್ಯವನ್ನು ಕೈಕೊಂಡು ನಡೆಯುತ್ತೇನೆ.


ಅಯ್ಯೋ ಧರ್ಮೋಪದೇಶಕರೇ, ಜ್ಞಾನಕ್ಕೆ ಸಾಧನವಾದ ಬೀಗದ ಕೈಯನ್ನು ತೆಗೆದುಬಿಟ್ಟಿರಿ. ನೀವೂ ಒಳಕ್ಕೆ ಹೋಗಲಿಲ್ಲ; ಒಳಕ್ಕೆ ಹೋಗುತ್ತಿರುವವರಿಗೂ ಅಡ್ಡಿಮಾಡಿದಿರಿ ಅಂದನು.


ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಟ್ಟಾನು?


(ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ - ನಮ್ಮ ಪಿತೃಗಳು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ ಎಂದು ಅರಿಕೆ ಮಾಡುವರು.


ಬಹುಮಂದಿ ಮಂದೆಗಾರರು ನನ್ನ ತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವಾಸ್ತ್ಯವನ್ನು ತುಳಿದು ನನಗೆ ಇಷ್ಟವಾದ ಆ ಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ.


ಆಹಾ, ನೀವು ನಿಷ್ಪ್ರಯೋಜನವಾದ ಸುಳ್ಳುಮಾತುಗಳಲ್ಲಿ ಭರವಸವಿಟ್ಟಿದ್ದೀರಿ.


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲರಿಯರು.


ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನಗೆ ಬದಲಾಗಿ ಕೆಲಸಕ್ಕೆ ಬಾರದ್ದನ್ನು ಆರಿಸಿಕೊಂಡಿದ್ದಾರೆ.


ನಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿ ಕಾಡಾಗಿಯೂ ಹಳ್ಳಕೊಳ್ಳವಾಗಿಯೂ ನಿರ್ಜಲವಾಗಿಯೂ ಘೋರಾಂಧಕಾರವಾಗಿಯೂ ಯಾರೂ ಹಾದುಹೋಗದೆಯೂ ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡಿಸಿದ ಯೆಹೋವನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.


ಸಹಾಯವನ್ನೂ ಪ್ರಯೋಜನವನ್ನೂ ಮಾಡಲಾರದೆ ನಾಚಿಕೆಯನ್ನೂ ಅವಮಾನವನ್ನೂ ಉಂಟುಮಾಡುವ ವ್ಯರ್ಥವಾದ ಈ ಜನಾಂಗದ ವಿಷಯವಾಗಿ ಎಲ್ಲರೂ ಲಜ್ಜೆಪಡುವರು.


ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಮುಚ್ಚಿ ದಿವ್ಯದರ್ಶಿಗಳೆಂಬ ತಲೆಗಳಿಗೆ ಮುಸುಕು ಹಾಕಿದ್ದಾನಷ್ಟೆ.


ಈ [ನನ್ನ] ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ; ದೈವದರ್ಶನವಾಗುತ್ತಿರುವಾಗಲೂ ಓಲಾಡುತ್ತಾರೆ, ನ್ಯಾಯತೀರಿಸುತ್ತಿರುವಾಗಲೂ ಅತ್ತಿತ್ತ ತೂಗಾಡುತ್ತಾರೆ.


ಆಗ ಎಲೀಯನು ಅವರಿಗೆ - ಬಾಳನ ಪ್ರವಾದಿಗಳೆಲ್ಲರನ್ನೂ ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್‍ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.


ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ, ಅವರನ್ನು ಲಕ್ಷಿಸಲಿಲ್ಲ.


ಅವನು ತಿರಿಗಿ ಅವರಿಗೆ - ಯೆಹೋವನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಮಂದಿ ಇದ್ದಾರೆ.


ದೇವರಲ್ಲದವುಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ ರಕ್ಷಣೆಯೂ ಸಿಕ್ಕುವದಿಲ್ಲ. ಅವು ವ್ಯರ್ಥವಾದವುಗಳೇ.


ಏಲಿಯ ಮಕ್ಕಳು ಬಹುದುಷ್ಟರಾಗಿದ್ದರು; ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.


ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲ್ಯರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.


ಸ್ವಂತ ಹೃದಯದ ಹಟದಂತೆ ನಡೆದು ತಮ್ಮ ಪಿತೃಗಳು ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದ್ದರಿಂದ


ಆಗ ಅವರು - ಯೆರೆಮೀಯನಿಗೆ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದಷ್ಟೆ. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ ಎಂದುಕೊಂಡರು.


ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧವಸ್ತುಗಳನ್ನು ಹೊಲೆಮಾಡಿದ್ದಾರೆ; ಮೀಸಲಾದದ್ದಕ್ಕೂ ಮೀಸಲಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧಾಶುದ್ಧವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇವಿುಸಿದ ಸಬ್ಬತ್ ದಿನಗಳಿಗೆ ವಿಮುಖರಾಗಿದ್ದಾರೆ; ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.


ನರಪುತ್ರನೇ, ಇಸ್ರಾಯೇಲೆಂಬ ಮಂದೆಯ ಕುರುಬರಿಗೆ ಈ ದೈವೋಕ್ತಿಯನ್ನು ನುಡಿ, ನುಡಿದೇ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, ಸ್ವಂತ ಹೊಟ್ಟೆಯನ್ನು ಹೊರೆದುಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳ ಹೊಟ್ಟೆಯನ್ನು ನೋಡುವದು ಕುರುಬರ ಧರ್ಮವಲ್ಲವೆ.


ನನ್ನ ಸೃಷ್ಟಿಕರ್ತನಾದ ದೇವರು ಎಲ್ಲಿ, ಆತನು ರಾತ್ರಿಯಲ್ಲಿಯೂ ಕೀರ್ತನೆಗಳನ್ನು ಹಾಡಮಾಡುತ್ತಾನಲ್ಲಾ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು