Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:9 - ಕನ್ನಡ ಸತ್ಯವೇದವು J.V. (BSI)

9 ಆದಕಾರಣ ನಾನು ನಿಮ್ಮೊಂದಿಗೆ ಇನ್ನೂ ವ್ಯಾಜ್ಯವಾಡುವೆನು; ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯವಾಡುವೆನು ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದಕಾರಣ ನಾನು ನಿಮ್ಮೊಂದಿಗೆ ಇನ್ನೂ ವ್ಯಾಜ್ಯ ಮಾಡುವೆನು. ನಾನು ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯ ಮಾಡುವೆನು” ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 "ಆದಕಾರಣ ಸರ್ವೇಶ್ವರನಾದ ನಾನು ನಿಮ್ಮೊಡನೆ ಇನ್ನೂ ವ್ಯಾಜ್ಯಮಾಡುತ್ತೇನೆ; ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯವಾಡುವೆನು,” ಎನ್ನುತ್ತಾರೆ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಆದ್ದರಿಂದ ನಾನು ನಿಮ್ಮನ್ನು ಮತ್ತೊಮ್ಮೆ ಆಪಾದಿಸುವೆನು. ನಾನು ನಿಮ್ಮ ಮೊಮ್ಮಕ್ಕಳ ಮೇಲೂ ಆಪಾದಿಸುವೆನು” ಎನ್ನುತ್ತಾನೆ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಆದ್ದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯವಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಇದಲ್ಲದೆ ನಿಮ್ಮ ಮಕ್ಕಳ ಸಂಗಡ ವ್ಯಾಜ್ಯವಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:9
12 ತಿಳಿವುಗಳ ಹೋಲಿಕೆ  

ನೀನಾದರೆ - ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ತೊಲಗಿ ಹೋಗಿದೆ ನಿಶ್ಚಯ ಎಂದುಕೊಂಡಿದ್ದೀ; ನಾನು ಪಾಪಮಾಡಲಿಲ್ಲವೆಂದು ನೀನು ಹೇಳಿದ ಕಾರಣ, ಇಗೋ ನಾನು ನಿನಗೆ ನ್ಯಾಯತೀರಿಸುವೆನು.


ಬೆಟ್ಟಗಳೇ, ಯೆಹೋವನ ವ್ಯಾಜ್ಯವನ್ನು ಕೇಳಿರಿ! ಭೂವಿುಯ ಶಾಶ್ವತವಾದ ಅಸ್ತಿವಾರಗಳೇ, ಕಿವಿಗೊಡಿರಿ; ಯೆಹೋವನಿಗೆ ಆತನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಆತನು ಇಸ್ರಾಯೇಲಿನೊಂದಿಗೆ ವಿವಾದಿಸುತ್ತಾನೆ.


ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ


ನಿಮ್ಮ ತಾಯಿಯ ಸಂಗಡ ವಾದಿಸಿರಿ, ವಾದಿಸಿರಿ; ಅವಳು ನನ್ನ ಹೆಂಡತಿಯಲ್ಲ. ನಾನು ಅವಳ ಗಂಡನಲ್ಲ; ಅವಳು ಸೂಳೆತನವನ್ನು ತನ್ನ ಮುಖದಿಂದ, ವ್ಯಭಿಚಾರದ ಬೆಡಗನ್ನು ತನ್ನ ಸ್ತನಮಧ್ಯದಿಂದ ತೊಲಗಿಸಲಿ;


ಯೆಹೋವನು ಹೀಗನ್ನುತ್ತಾನೆ - ಏಕೆ ನನ್ನೊಡನೆ ವ್ಯಾಜ್ಯವಾಡುತ್ತೀರಿ? ನೀವೆಲ್ಲರೂ ನನಗೆ ದ್ರೋಹಿಗಳು.


ನನಗೆ ಜ್ಞಾಪಕಪಡಿಸು, ನಾವಿಬ್ಬರೂ ವಾದಿಸುವ; ನಿನ್ನ ಸದ್ಧರ್ಮವು ಗೊತ್ತಾಗುವಂತೆ ನಿನ್ನ ನ್ಯಾಯವನ್ನು ತೋರ್ಪಡಿಸು.


ಯೆಹೋವನು ವಾದಿಸುವದಕ್ಕೂ ಜನಗಳ ನ್ಯಾಯಾನ್ಯಾಯಗಳನ್ನು ನಿರ್ಣಯಿಸುವದಕ್ಕೂ ಎದ್ದು ನಿಂತಿದ್ದಾನೆ.


ನಾನಂತೂ ಆ ಮನುಷ್ಯನಿಗೂ ಅವನ ಕುಟುಂಬದವರಿಗೂ ವಿಮುಖನಾಗಿ ಅವನನ್ನು ಮಾತ್ರವಲ್ಲದೆ ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕನಿಗೆ ಸೇವೆಮಾಡಿದವರೆಲ್ಲರನ್ನೂ ಕುಲದಿಂದ ತೆಗೆದುಹಾಕುವೆನು.


ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ನೇವಿುಸುತ್ತಾನೆ.


ಇಸ್ರಾಯೇಲ್ಯರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದಹಾಕಿದ್ದಾನೆ. ಏಕಂದರೆ ಪ್ರೀತಿ ಸತ್ಯತೆ ದೇವಜ್ಞಾನಗಳು ದೇಶದಲ್ಲಿಲ್ಲ;


ಯಾಕೋಬನು ಗರ್ಭದಲ್ಲಿ ಅಣ್ಣನನ್ನು ವಂಚಿಸಿದನು; ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು