Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 20:10 - ಕನ್ನಡ ಸತ್ಯವೇದವು J.V. (BSI)

10 ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು ಎಂದು ಬಹುಜನರು ಗುಸುಗುಟ್ಟುವದನ್ನು ಕೇಳಿದ್ದೇನೆ, ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತಸ್ನೇಹಿತರೆಲ್ಲರೂ ಇವನು ಎಡವಿಬೀಳಲಿ ಎಂದು ನನ್ನನ್ನು ಹೊಂಚಿನೋಡುತ್ತಾ - ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು” ಎಂದು ಬಹು ಜನರು ಗುಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತ ಸ್ನೇಹಿತರೆಲ್ಲರೂ “ಇವನು ಎಡವಿ ಬೀಳಲಿ” ಎಂದು ನನ್ನನ್ನು ಹೊಂಚಿನೋಡುತ್ತಾ, “ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ಅನೇಕರ ಚಾಡಿಯನ್ನು ಕೇಳಿದೆನು. “ಸುತ್ತಲೂ ಭಯವಿದೆ. ಅವನನ್ನು ಖಂಡಿಸಿರಿ! ಅವನನ್ನು ಖಂಡಿಸೋಣ!” ನನ್ನ ಆಪ್ತರೆಲ್ಲರೂ ನಾನು ಕುಂಟುವುದನ್ನು ನೋಡಿಕೊಳ್ಳುತ್ತಾ ಒಂದು ವೇಳೆ ಅವನು ಮೋಸಗೊಂಡಾನು. “ಆಗ ನಾವು ಅವನನ್ನು ಗೆದ್ದು, ಅವನಲ್ಲಿ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 20:10
35 ತಿಳಿವುಗಳ ಹೋಲಿಕೆ  

ನಾನು ಯಾವನನ್ನು ನಂಬಿದ್ದೆನೋ ಯಾವನು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ ಅಂಥ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.


ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳಸಂಚು ಮಾಡುತ್ತಿದ್ದಾರೆ; ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದವೆ; ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ.


ಅಪಸಾಕ್ಷಿಯಿಂದ ತಪ್ಪು ಹೊರಿಸುವವರೂ ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ ನ್ಯಾಯವಂತನ ನ್ಯಾಯವನ್ನು ಸುಮ್ಮಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲಾ ನಿರ್ಮೂಲರಾಗುವರು.


ಆಗ ಅವರು - ಯೆರೆಮೀಯನಿಗೆ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದಷ್ಟೆ. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ ಎಂದುಕೊಂಡರು.


ಇದಲ್ಲದೆ ಇವರು ಈಗ ನನ್ನ ಮೇಲೆ ಹೊರಿಸುವ ತಪ್ಪುಗಳನ್ನು ನಿಜವೆಂದು ನಿನಗೆ ತೋರಿಸಲಾರರು.


ನಿನ್ನಲ್ಲಿ ಚಾಡಿಕೋರರು ರಕ್ತಹರಿಸಿದ್ದಾರೆ; ನಿನ್ನವರು ಗುಡ್ಡಗಳ ಮೇಲೆ [ಯಜ್ಞಶೇಷವನ್ನು] ತಿಂದಿದ್ದಾರೆ; ನಿನ್ನ ಮಧ್ಯದಲ್ಲಿ ದುರಾಚಾರಗಳನ್ನು ನಡಿಸಿದ್ದಾರೆ.


ಊರ ಹೊರಗೆ ಹೋಗಬೇಡಿರಿ, ದಾರಿಯಲ್ಲಿ ನಡೆಯಬೇಡಿರಿ; ಶತ್ರುವಿನ ಕತ್ತಿಯಿದೆ, ಸುತ್ತುಮುತ್ತಲು ದಿಗಿಲು.


ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ; ಚಾಡಿಗಾರನು ಜ್ಞಾನಹೀನ.


ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಕ್ಕೂ ಒಪ್ಪಿಸಬೇಕೆಂದು ಹೊಂಚಿನೋಡುವವರಾಗಿ ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ಹಿಡಿಯುವದಕ್ಕೆ [ಆತನ ಬಳಿಗೆ] ಕಳುಹಿಸಿದರು.


ನನ್ನ ಆಪ್ತವಿುತ್ರರೆಲ್ಲರೂ ನನ್ನನ್ನು ನೋಡಿ ಹೇಸಿಕೊಳ್ಳುತ್ತಾರೆ; ನನ್ನ ಪ್ರೀತಿಪಾತ್ರರು ಸಹ ನನ್ನ ಮೇಲೆ ತಿರುಗಿಬಿದ್ದಿದ್ದಾರೆ.


ಅಹಾಬನು ಎಲೀಯನನ್ನು ಕಂಡು ಅವನನ್ನು - ನನ್ನ ವೈರಿಯೇ, ನೀನು ನನ್ನನ್ನು ಕಂಡುಕೊಂಡಿಯಾ ಎಂದು ಕೇಳಲು ಅವನು - ಹೌದು, ಕಂಡುಕೊಂಡೆನು; ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.


ಆಕೆಯು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ ಎಂದು ಹೇಳಿಕಳುಹಿಸಿದಳು.


ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.


ಸಭಿಕರು ಈ ಮಾತನ್ನು ಕೇಳಿ ರೌದ್ರವಾಗಿ ಅವರನ್ನು ಕೊಲ್ಲಿಸಬೇಕೆಂದು ಯೋಚಿಸಿದರು;


ಸಿಂಹಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ಬೆಂಕಿಕಾರುವ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಶಸ್ತ್ರಬಾಣಗಳು; ನಾಲಿಗೆಗಳು ಹದವಾದ ಕತ್ತಿಗಳೇ.


ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ ಎಂದು ಹೇಳಿರಿ ಎಂಬದಾಗಿ ಆಜ್ಞಾಪಿಸಿದನು.


ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು - ಅರಸನು ಹಾಗನ್ನದಿರಲಿ ಅಂದನು.


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು; ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.


ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನಗೆ - ನಮ್ಮ ಕೈಯಿಂದ ನೀನು ಸಾಯಬಾರದಾಗಿದ್ದರೆ ಯೆಹೋವನ ಹೆಸರೆತ್ತಿ ಪ್ರವಾದಿಸಬೇಡ ಎಂದು ನಿನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವ ಅನಾತೋತಿನವರ ವಿಷಯದಲ್ಲಿ ನನ್ನ ತೀರ್ಮಾನವು ಇದೇ -


ಮರುದಿನ ಪಷ್ಹೂರನು ಯೆರೆಮೀಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ ಹೀಗೆ ಹೇಳಿದನು - ಯೆಹೋವನು ನಿನ್ನ ಹೆಸರನ್ನು ಪಷ್ಹೂರ್ ಎಂದು ಹೇಳದೆ ಮಾಗೋರ್ ವಿುಸ್ಸಾಬೀಬ್ ಎಂದು ಹೇಳಿದ್ದಾನೆ.


ಬೆನ್ಯಾಮೀನಿನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆಕೊಡುತ್ತಿದ್ದು ಪ್ರವಾದಿಯಾದ ಆ ಯೆರೆಮೀಯನನ್ನು ಹಿಡಿದು ನೀನು ಕಸ್ದೀಯರನ್ನು ಮರೆಹೊಗಲು ಹೋಗುತ್ತಿದ್ದೀ ಎಂದು ಹೇಳಿದನು.


ಹೀಗಿರಲು ಮುಖ್ಯಾಧಿಕಾರಿಗಳೂ ದೇಶಾಧಿಪತಿಗಳೂ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು; ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ ಯಾವ ತಪ್ಪನ್ನೂ ಕಾಣಲಾರದೆ ಹೋದರು; ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ ಅಕ್ರಮವಾಗಲಿ ಸಿಕ್ಕಲಿಲ್ಲ.


ನಾನಾದರೋ ಯೆಹೋವನೇ, ನಿನ್ನಲ್ಲೇ ಭರವಸವಿಟ್ಟಿದ್ದೇನೆ; ನೀನೇ ನನ್ನ ದೇವರೆಂದು ಹೇಳಿಕೊಂಡಿದ್ದೇನೆ.


ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಮುಯ್ಯಿತೀರಿಸುವೆನು.


ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು