ಯೆರೆಮೀಯ 20:12 - ಕನ್ನಡ ಸತ್ಯವೇದವು J.V. (BSI)12 ಹೃದಯವನ್ನೂ ಅಂತರಿಂದ್ರಿಯವನ್ನೂ ಪರೀಕ್ಷಿಸಿ ಶಿಷ್ಟರನ್ನು ಶೋಧಿಸುವ ಸೇನಾಧೀಶ್ವರನಾದ ಯೆಹೋವನೇ, ನೀನು ನನ್ನ ಹಿಂಸಕರಿಗೆ ಕೊಡುವ ಪ್ರತಿಫಲವನ್ನು ನನ್ನ ಕಣ್ಣು ನೋಡಲಿ; ನಿನಗೇ ನನ್ನ ವ್ಯಾಜ್ಯವನ್ನು ಅರಿಕೆ ಮಾಡಿದ್ದೇನಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರೀಕ್ಷಿಸಿ ಶಿಷ್ಟರನ್ನು ಶೋಧಿಸುವ ಸೇನಾಧೀಶ್ವರನಾದ ಯೆಹೋವನೇ, ನೀನು ನನ್ನ ಹಿಂಸಕರಿಗೆ ಕೊಡುವ ಪ್ರತಿಫಲವನ್ನು ನನ್ನ ಕಣ್ಣು ನೋಡಲಿ; ನಿನಗೇ ನನ್ನ ವ್ಯಾಜ್ಯವನ್ನು ಅರಿಕೆಮಾಡಿದ್ದೇನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸರ್ವಶಕ್ತರಾದ ಸರ್ವೇಶ್ವರಾ, ನೀವು ಸತ್ಪುರುಷರನ್ನು ಪರಿಶೋಧಿಸುವವರು ಅಂತರಿಂದ್ರಿಯಗಳನ್ನೂ ಅಂತರಾಳವನ್ನೂ ವೀಕ್ಷಿಸುವವರು. ನನ್ನ ವ್ಯಾಜ್ಯವನ್ನು ನಿಮಗೆ ಅರಿಕೆಮಾಡಿರುವೆನು ನನ್ನ ಹಿಂಸಕರಿಗೆ ನೀವು ವಿಧಿಸುವ ಪ್ರತಿದಂಡನೆಯನ್ನು ನಾನು ನೋಡುವಂತೆ ಮಾಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಸರ್ವಶಕ್ತನಾದ ಯೆಹೋವನೇ, ನೀನು ಒಳ್ಳೆಯವರನ್ನು ಪರೀಕ್ಷಿಸುವೆ. ನೀನು ಒಬ್ಬ ವ್ಯಕ್ತಿಯ ಹೃದಯವನ್ನು ಮತ್ತು ಬುದ್ಧಿಯನ್ನು ಆಳವಾಗಿ ಪರೀಕ್ಷಿಸಿನೋಡುವೆ. ನಾನು ಅವರ ವಿರುದ್ಧ ನನ್ನ ಅಭಿಪ್ರಾಯಗಳನ್ನು ನಿನಗೆ ತಿಳಿಸಿದ್ದೇನೆ. ನೀನು ಅವರಿಗೆ ತಕ್ಕ ಶಿಕ್ಷೆಯನ್ನು ವಿಧಿಸಿರುವದನ್ನು ನನ್ನ ಕಣ್ಣುಗಳು ನೋಡಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಓ ಸೇನಾಧೀಶ್ವರ ಯೆಹೋವ ದೇವರೇ, ನೀತಿವಂತರನ್ನು ಪರಿಶೋಧಿಸುವವರೇ, ಅಂತರಿಂದ್ರಿಯಗಳನ್ನೂ, ಹೃದಯವನ್ನೂ ನೋಡುವವರೇ, ನೀವು ಅವರಿಗೆ ಪ್ರತಿದಂಡನೆ ಮಾಡುವುದನ್ನು ನಾನು ನೋಡುವಂತೆ ಮಾಡಿ. ಏಕೆಂದರೆ, ನಿಮಗೆ ನನ್ನ ವ್ಯಾಜ್ಯವನ್ನು ತಿಳಿಯಮಾಡಿದ್ದೇನೆ. ಅಧ್ಯಾಯವನ್ನು ನೋಡಿ |