ಯೆರೆಮೀಯ 20:5 - ಕನ್ನಡ ಸತ್ಯವೇದವು J.V. (BSI)5 ಮತ್ತು ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ ಆದಾಯವನ್ನೂ ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬೆಲಿಗೆ ತೆಗೆದುಕೊಂಡು ಹೋಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ, ಆದಾಯವನ್ನೂ ಮತ್ತು ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿ, ನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬಿಲೋನಿಗೆ ತೆಗೆದುಕೊಂಡು ಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅಷ್ಟು ಮಾತ್ರವಲ್ಲ, ಈ ನಗರದ ಎಲ್ಲ ಆಸ್ತಿಯನ್ನೂ ಆದಾಯವನ್ನೂ ಸಂಪತ್ತನ್ನೂ ಹಾಗು ಜುದೇಯದ ಅರಸರ ಸಕಲ ನಿಧಿನಿಕ್ಷೇಪಗಳನ್ನೂ ಇವರ ಶತ್ರುಗಳ ಕೈವಶಮಾಡುವೆನು. ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬಿಲೋನಿಗೆ ತೆಗೆದುಕೊಂಡು ಹೋಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಸಂಪತ್ತನ್ನು ಸಂಗ್ರಹಿಸಿ ಸಿರಿವಂತರಾಗಲು ಜೆರುಸಲೇಮಿನ ಜನರು ಬಹಳ ಕಷ್ಟಪಟ್ಟು ದುಡಿದರು. ಆದರೆ ನಾನು ಅದೆಲ್ಲವನ್ನು ಅವರ ವೈರಿಗಳಿಗೆ ಒಪ್ಪಿಸುವೆನು. ಜೆರುಸಲೇಮಿನ ರಾಜನ ಬಳಿ ಅನೇಕ ನಿಧಿನಿಕ್ಷೇಪಗಳಿವೆ. ಆದರೆ ನಾನು ಆ ನಿಧಿನಿಕ್ಷೇಪಗಳನ್ನೆಲ್ಲಾ ವೈರಿಗೆ ಒಪ್ಪಿಸುತ್ತೇನೆ. ವೈರಿಯು ಅವುಗಳನ್ನು ಬಾಬಿಲೋನ್ ದೇಶಕ್ಕೆ ತೆಗೆದುಕೊಂಡು ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ, ಅದರ ಎಲ್ಲಾ ನಿಧಿನಿಕ್ಷೇಪಗಳನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ, ಯೆಹೂದದ ಅರಸರ ಎಲ್ಲಾ ಭಂಡಾರಗಳನ್ನೂ ಅವರ ಶತ್ರುಗಳ ಕೈಗೆ ಒಪ್ಪಿಸುವೆನು. ಅವರು ಅವುಗಳನ್ನು ಸುಲಿದುಕೊಂಡು, ತೆಗೆದುಕೊಂಡು ಬಾಬಿಲೋನಿಗೆ ಒಯ್ಯುವರು. ಅಧ್ಯಾಯವನ್ನು ನೋಡಿ |