ಯೆರೆಮೀಯ 20:6 - ಕನ್ನಡ ಸತ್ಯವೇದವು J.V. (BSI)6 ಪಷ್ಹೂರನೇ, ನೀನೋ ನಿನ್ನ ಮನೆಯವರೆಲ್ಲರೊಡನೆ ಸೆರೆಗೆ ಹೋಗುವಿ; ನೀನೂ ನಿನ್ನ ವಿುಥ್ಯಾ ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಸ್ನೇಹಿತರೂ ಬಾಬೆಲಿಗೆ ಸೇರಿ ಅಲ್ಲೇ ಸತ್ತು ಮಣ್ಣಾಗುವಿರಿ ಎಂದು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಪಷ್ಹೂರನೇ, ನೀನೋ ನಿನ್ನ ಮನೆಯವರೆಲ್ಲರೊಡನೆ ಸೆರೆಗೆ ಹೋಗುವಿ. ನೀನೂ ಮತ್ತು ನಿನ್ನ ಮಿಥ್ಯಾ ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಸ್ನೇಹಿತರೂ ಬಾಬಿಲೋನಿಗೆ ಸೇರಿ ಅಲ್ಲೇ ಸತ್ತು ಮಣ್ಣಾಗುವಿರಿ” ಎಂದು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಪಷ್ಹೂರನೇ ಕೇಳು, ನೀನು ನಿನ್ನ ಮನೆಯ ಎಲ್ಲರೊಡನೆ ಸೆರೆಗೆ ಹೋಗುವೆ. ನೀನು ಮತ್ತು ನಿನ್ನ ಸುಳ್ಳು ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಗೆಳೆಯರೂ ಬಾಬಿಲೋನಿಗೆ ಸೇರಿ ಅಲ್ಲೆ ಸತ್ತು ಮಣ್ಣಾಗುವಿರಿ’.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಪಷ್ಹೂರನೇ, ನಿನ್ನನ್ನೂ ನಿನ್ನ ಮನೆಯಲ್ಲಿರುವವರೆಲ್ಲರನ್ನೂ ಬಲವಂತವಾಗಿ ಬಾಬಿಲೋನ್ ದೇಶಕ್ಕೆ ಸೆರೆ ಒಯ್ಯಲಾಗುವುದು. ನೀನು ಬಾಬಿಲೋನ್‌ನಲ್ಲಿ ಮರಣಹೊಂದುವೆ; ನಿನ್ನನ್ನು ಆ ಪರದೇಶದಲ್ಲಿಯೇ ಹೂಳಲಾಗುವುದು. ನೀನು ನಿನ್ನ ಸ್ನೇಹಿತರಿಗೆ ಸುಳ್ಳುಬೋಧನೆಯನ್ನು ಮಾಡಿದೆ. ಹೀಗಾಗುವುದಿಲ್ಲವೆಂದು ನೀನು ಹೇಳಿದೆ. ಆದರೆ ನಿನ್ನೆಲ್ಲ ಸ್ನೇಹಿತರು ಸಹ ಸತ್ತು ಬಾಬಿಲೋನಿನಲ್ಲಿ ಹೂಳಲ್ಪಡುವರು.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಪಷ್ಹೂರನೇ, ನೀನೂ, ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ. ಬಾಬಿಲೋನಿಗೆ ಹೋಗಿ ಅಲ್ಲಿಯೇ ಸಾಯುವೆ. ಅಲ್ಲಿಯೇ ಸಮಾಧಿಯಾಗುವೆ. ನಿನಗೂ, ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವುದು.’ ” ಅಧ್ಯಾಯವನ್ನು ನೋಡಿ |