Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 21:1 - ಕನ್ನಡ ಸತ್ಯವೇದವು J.V. (BSI)

1 ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಯಾಜಕ ಮಾಸೇಯನ ಮಗನಾದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ, ಯಾಜಕನು ಮಾಸೇಯನ ಮಗನು ಆದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅರಸ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನು ಹಾಗು ಯಾಜಕ ಮಾಸೇಯನ ಮಗನಾದ ಜೆಫನ್ಯನನ್ನು ಯೆರೆಮೀಯನ ಬಳಿಗೆ ದೂತರನ್ನಾಗಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನಿಂದ ಯೆರೆಮೀಯನಿಗೆ ಈ ಸಂದೇಶ ಬಂದಿತು. ಯೆಹೂದದ ರಾಜನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನಾದ ಯಾಜಕ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿದಾಗ ಈ ಸಂದೇಶ ಬಂದಿತು. ಪಷ್ಹೂರ ಮತ್ತು ಚೆಫನ್ಯರು ಯೆರೆಮೀಯನಿಗೆ ರಾಜನ ಸಂದೇಶವನ್ನು ತಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಸನಾದ ಚಿದ್ಕೀಯನು ಮಲ್ಕೀಯನ ಮಗ ಪಷ್ಹೂರನನ್ನೂ, ಮಾಸೇಯನ ಮಗನಾದ ಯಾಜಕನಾದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 21:1
20 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ, ಇವರ ಮೂಲಕ - ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನೀನು ಯೆರೂಸಲೇವಿುನಲ್ಲಿರುವ ಎಲ್ಲಾ ಜನರಿಗೂ ಯಾಜಕನಾದ ಮಾಸೇಯನ ಮಗನಾಗಿರುವ ಚೆಫನ್ಯನಿಗೂ ಸಮಸ್ತ ಯಾಜಕರಿಗೂ ನಿನ್ನ ಹೆಸರಿನ ಮೇಲೆ ಕಳುಹಿಸಿದ ಕಾಗದದಲ್ಲಿ -


ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಮಂದಿ ದ್ವಾರಪಾಲಕರು,


ಯೆರೆಮೀಯನು ಸಮಸ್ತ ಜನರಿಗೆ - ಯೆಹೋವನು ಇಂತೆನ್ನುತ್ತಾನೆ - ಪಟ್ಟಣದಲ್ಲಿ ನಿಲ್ಲುವವನು ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ದೀಯರನ್ನು ಮರೆಹೊಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗಿ ಬದುಕುವನು;


ಯೋಷೀಯನ ಮಗನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದದೇಶದ ಪಟ್ಟಕ್ಕೆ ತರಲ್ಪಟ್ಟು ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದಾಗ


ಯೆರೋಹಾಮನ ಮಗನಾದ ಅದಾಯ ಇವರೂ ಇವರ ಸಹೋದರರೂ. ಯೆರೋಹಾಮನು ಪಶ್ಹೂರನ ಮಗನು; ಇವನು ಮಲ್ಕೀಯನ ಮಗನು; ಇವನು ಮಾಸೈಯ ಮಗನು; ಇವನು ಅದೀಯೇಲನ ಮಗನು; ಇವನು ಯಹ್ಜೇರನ ಮಗನು; ಇವನು ಮೆಷುಲ್ಲಾಮನ ಮಗನು; ಇವನು ಮೆಷಿಲ್ಲೇಮೋತನ ಮಗನು; ಇವನು ಇಮ್ಮೇರನ ಮಗನು.


ಇವರೂ ದೇವಾಲಯದ ಸೇವೆ ನಡಿಸುತ್ತಿದ್ದ ಇವರ ಬಂಧುಗಳೂ ಎಂಟುನೂರಿಪ್ಪತ್ತೆರಡು ಮಂದಿ. ಇವರಲ್ಲದೆ ಅದಾಯನೆಂಬವನು ಇನ್ನೊಬ್ಬನು. ಇವನು ಯೆರೋಹಾಮನ ಮಗನು; ಇವನು ಪೆಲಲ್ಯನ ಮಗನು; ಇವನು ಅವ್ಚಿುೕಯ ಮಗನು; ಇವನು ಜೆಕರ್ಯನ ಮಗನು; ಇವನು ಪಷ್ಹೂರನ ಮಗನು; ಇವನು ಮಲ್ಕೀಯನ ಮಗನು.


ಯೋಷೀಯನ ಮಕ್ಕಳು - ಚೊಚ್ಚಲನು ಯೋಹಾನಾನ್; ಎರಡನೆಯವನು ಯೆಹೋಯಾಕೀಮ್; ಮೂರನೆಯವನು ಚಿದ್ಕೀಯ; ನಾಲ್ಕನೆಯವನು ಶಲ್ಲೂಮ್.


ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ ಕನ್ಯೆಯರನ್ನೂ ಮುದುಕರನ್ನೂ ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.


ಯಾಜಕನಾದ ಚೆಫನ್ಯನು ಈ ಕಾಗದವನ್ನು ಪ್ರವಾದಿಯಾದ ಯೆರೆಮೀಯನ ಮುಂದೆ ಓದಿದನಂತರ


ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನನ್ನನ್ನು ವಿಚಾರಿಸುವದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ - ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವದು.


ಅರಸನಾದ ಚಿದ್ಕೀಯನು ಅವನನ್ನು ಕರತರಿಸಿ ಯೆಹೋವನಿಂದ ದೈವೋಕ್ತಿಯು ದೊರೆಯಿತೋ ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು - ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿ ಬೀಳುವಿ ಅಂದನು.


ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಯೆಹೋವನ ಆಲಯದ ಮೂರನೆಯ ಬಾಗಿಲಿಗೆ ಕರತರಿಸಿ - ನಾನು ನಿನ್ನನ್ನು ಒಂದು ಕೇಳುವೆನು, ನನಗೆ ಸ್ವಲ್ಪವೂ ಮರೆಮಾಡಬೇಡ ಎನ್ನಲು


ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥವಾಕ್ಯಗಳಿಗೆ ಕಿವಿಗೊಡದೆಯೂ ಅವುಗಳನ್ನು ಕೈಕೊಳ್ಳದೆಯೂ ಹೋದದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದದರಿಂದ ನೀವು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥವಾಕ್ಯಗಳ ವಿಷಯವಾಗಿ ವಿಚಾರಿಸಿರಿ ಎಂದು ಆಜ್ಞಾಪಿಸಿದನು.


ಯೆಹೋವನ ಆಲಯಕ್ಕೆ ಕರೆದು ಇಗ್ದಲ್ಯನ ಮಗನೂ ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು