Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 21:5 - ಕನ್ನಡ ಸತ್ಯವೇದವು J.V. (BSI)

5 ನಾನೇ ಕೋಪರೋಷ ಮಹಾಕ್ರೋಧಭರಿತನಾಗಿ ಶಿಕ್ಷಾಹಸ್ತದಿಂದಲೂ ಭುಜಪರಾಕ್ರಮದಿಂದಲೂ ನಿಮಗೆ ವಿರುದ್ಧವಾಗಿ ಯುದ್ಧಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನೇ ಕೋಪ, ರೋಷ, ಮಹಾಕ್ರೋಧಭರಿತನಾಗಿ ಶಿಕ್ಷಾಹಸ್ತದಿಂದಲೂ ಮತ್ತು ಭುಜಪರಾಕ್ರಮದಿಂದಲೂ ನಿಮ್ಮ ವಿರುದ್ಧವಾಗಿ ಯುದ್ಧಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಾನೇ ನಿಮಗೆ ವಿರುದ್ಧವಾಗಿ ಕಡುಕೋಪದಿಂದ, ರೋಷಾವೇಶದಿಂದ, ಕ್ರೋಧಭರಿತನಾಗಿ, ಚಾಚಿದ ಕೈಯಿಂದಲೂ ಭುಜಪರಾಕ್ರಮದಿಂದಲೂ ಯುದ್ಧಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೂದಿಗಳಾದ ನಿಮ್ಮ ವಿರುದ್ಧ ನಾನೇ ಕಾದಾಡುತ್ತೇನೆ. ನಾನು ನನ್ನ ಬಲಿಷ್ಠವಾದ ಕೈಗಳಿಂದ ನಿಮ್ಮ ವಿರುದ್ಧ ಹೋರಾಡುತ್ತೇನೆ. ನಿಮ್ಮ ಮೇಲೆ ನನಗೆ ಬಹಳ ಕೋಪ ಬಂದಿದೆ; ಅದಕ್ಕಾಗಿ ನನ್ನ ಬಲಿಷ್ಠವಾದ ತೋಳಿನಿಂದ ನಾನು ನಿಮ್ಮ ಸಂಗಡ ಯುದ್ಧ ಮಾಡುತ್ತೇನೆ. ನಾನು ನಿಮ್ಮ ವಿರುದ್ಧ ಬಹಳ ರಭಸದಿಂದ ಯುದ್ಧಮಾಡಿ ನನಗೆ ಎಷ್ಟು ಕೋಪ ಬಂದಿದೆ ಎಂಬುದನ್ನು ತೋರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನೇ ಚಾಚಿದ ಕೈಯಿಂದಲೂ, ಬಲವಾದ ತೋಳಿನಿಂದಲೂ, ಕೋಪದಿಂದಲೂ, ಉಗ್ರದಿಂದಲೂ, ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 21:5
21 ತಿಳಿವುಗಳ ಹೋಲಿಕೆ  

ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮನನ್ನು ದುಃಖಪಡಿಸಿದರು; ಆದದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ಹೀಗಿರಲು ಯೆಹೋವನು ತನ್ನ ಜನರಲ್ಲಿ ಉರಿಗೊಂಡು ಅವರ ಮೇಲೆ ಕೈಯೆತ್ತಿ ಅವರನ್ನು ಹೊಡೆದು ಬಿಡುವನು; ಆಗ ಬೆಟ್ಟಗಳು ನಡಗುವವು, ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈಯೆತ್ತಿಯೇ ಇರುವದು.


ನಾನು ಮಾಡಿದ ವಾಗ್ದಾನವನ್ನು ನೆನಸಿಕೊಂಡೆನು. ಆದದರಿಂದ ನೀನು ಇಸ್ರಾಯೇಲ್ಯರಿಗೆ [ನನ್ನ ಹೆಸರಿನಲ್ಲಿ] ಹೇಳಬೇಕಾದದ್ದೇನಂದರೆ - ನಾನು ಯೆಹೋವನು; ಐಗುಪ್ತ್ಯರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸಗಳನ್ನು ನಾನು ತಪ್ಪಿಸಿ ಅವರಲ್ಲಿ ನಿಮಗಿರುವ ದಾಸತ್ವವನ್ನು ತೊಲಗಿಸಿ ನನ್ನ ಕೈ ಚಾಚಿ ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.


ಎಲೈ, ಕರ್ತನಾದ ಯೆಹೋವನೇ! ಆಹಾ, ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.


ಅವರ ಹೆಂಡತಿ, ಮನೆ, ಹೊಲಗದ್ದೆ ಇವೆಲ್ಲಾ ಅನ್ಯರ ಪಾಲಾಗುವವು; ದೇಶದ ನಿವಾಸಿಗಳ ಮೇಲೆ ಕೈಮಾಡುವೆನಷ್ಟೆ ಎಂದು ಯೆಹೋವನು ಹೇಳಿದ್ದಾನೆ.


ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮು ಮನಸ್ಸೆಯನ್ನು ತಿಂದು ಬಿಡುತ್ತದೆ, ಈ ಎರಡೂ ಯೆಹೂದಕ್ಕೆ ವಿರುದ್ಧವಾಗಿವೆ. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸನು, ಅವರಲ್ಲಿನ ಅನಾಥರನ್ನೂ ವಿಧವೆಯರನ್ನೂ ಕರುಣಿಸನು; ಪ್ರತಿಯೊಬ್ಬನೂ ಭ್ರಷ್ಟನೂ ದುಷ್ಟನೂ ಆಗಿದ್ದಾನೆ; ಎಲ್ಲರ ಬಾಯೂ ನೀಚವಾಗಿ ಮಾತಾಡುತ್ತದೆ. ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ನಾನು ಕೈಯೆತ್ತಿ ನಿನ್ನನ್ನೂ ನಿನ್ನ ಪ್ರಜೆಗಳನ್ನೂ ಅಂಟುರೋಗದಿಂದ ಸಾಯಿಸಬಹುದಾಗಿತ್ತು; ಆಗ ನೀನು ಈವರೆಗೆ ಭೂವಿುಯಲ್ಲಿ ಇರದಂತೆ ನಿರ್ಮೂಲವಾಗುತ್ತಿದ್ದಿ.


ಇಗೋ, ನಾನು ಕೋಪರೋಷ ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಕೈದಿಗಳ [ಕಾಲ] ಕೆಳಗೆ ಮುದುರಿಕೊಂಡು ಹತರಾದವರ ಕೆಳಗೆ ಬಿದ್ದಿರುವದೇ ಇವರ ಗತಿ! ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ಇವರು ಇಸ್ರಾಯೇಲ್ಯರನ್ನು ಬಾಯಿತೆರೆದು ನುಂಗಿದ್ದಾರೆ. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ಬೇರೆ ಯಾವ ದೇವರಾದರೂ ಮನಶ್ಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವದಕ್ಕೆ ಪ್ರಯತ್ನಿಸಿದ್ದುಂಟೋ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣಿಗೆದುರಾಗಿ ನಡಿಸಿದನಲ್ಲಾ.


ಎಚ್ಚರಿಕೆಯಾಗಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು.


ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪರೋಷಗಳು ಅಪಾರವಾಗಿವೆ ಎಂದು ಅಪ್ಪಣೆಕೊಟ್ಟನು.


ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದುಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಡುತ್ತಿದ್ದರು.


ಆತನು ಶತ್ರುವಿನ ಮೇಲೆತ್ತಿದ ಬಲಗೈಯನ್ನು ಹಿಂದೆಗೆದು ಇಸ್ರಾಯೇಲಿನ ಕೊಂಬನ್ನು ರೋಷಾಗ್ನಿಯಿಂದ ತೀರಾ ಕಡಿದುಹಾಕಿ ಸುತ್ತುಮುತ್ತಲೂ ನುಂಗುವ ಅಗ್ನಿಜ್ವಾಲೆಯಂತೆ ಯಾಕೋಬನ್ನು ದಹಿಸಿ ಬಿಟ್ಟಿದ್ದಾನೆ.


ಇಗೋ, ನಾನೇ ನಿನಗೆ ವಿರುದ್ಧನಾಗಿದ್ದೇನೆ, ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು; ಇದು ಕರ್ತನಾದ ಯೆಹೋವನ ನುಡಿ.


ಇಸ್ರಾಯೇಲಿನ ಪರ್ವತಗಳ ಮೇಲೆ ನುಗ್ಗಿಸಿ ನಿನ್ನ ಎಡಗೈಯೊಳಗಿಂದ ಬಿಲ್ಲನ್ನು ಹೊಡೆದುಹಾಕಿ ನಿನ್ನ ಬಲಗೈಯೊಳಗಿಂದ ಬಾಣಗಳನ್ನು ಉದುರಿಸಿಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು