Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 21:8 - ಕನ್ನಡ ಸತ್ಯವೇದವು J.V. (BSI)

8 ಮತ್ತು ಈ ಜನರಿಗೆ ಹೀಗೆ ಹೇಳು ಎಂದು ಯೆಹೋವನು ನನಗೆ ಅಪ್ಪಣೆಕೊಟ್ಟಿದ್ದಾನೆ. ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಜೀವಿಸುವ ಮಾರ್ಗವನ್ನೂ ಸಾಯುವ ಮಾರ್ಗವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ನೀನು ಈ ಜನರಿಗೆ ಹೀಗೆ ಹೇಳು” ಎಂದು ಯೆಹೋವನು ನನಗೆ ಅಪ್ಪಣೆಕೊಟ್ಟಿದ್ದಾನೆ. ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಜೀವಿಸುವ ಮಾರ್ಗವನ್ನೂ ಮತ್ತು ಸಾಯುವ ಮಾರ್ಗವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಇದೂ ಅಲ್ಲದೆ ಸರ್ವೇಶ್ವರ ಈ ಜನರಿಗೆ ಹೀಗೆಂದು ತಿಳಿಸಲು ನನಗೆ ಆಜ್ಞಾಪಿಸಿದ್ದಾರೆ: ‘ಇಗೋ ಜೀವದ ಮಾರ್ಗವನ್ನು ಮತ್ತು ಸಾವಿನ ಮಾರ್ಗವನ್ನು ನಿಮ್ಮ ಮುಂದೆ ತೆರೆದಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಜೆರುಸಲೇಮಿನ ಜನರಿಗೆ ಇದನ್ನು ಸಹ ಹೇಳಿರಿ. ಯೆಹೋವನು ಹೀಗೆನ್ನುತ್ತಾನೆ, ‘ನಾನು ನಿಮಗೆ ಜೀವವನ್ನಾಗಲಿ ಮರಣವನ್ನಾಗಲಿ ಆರಿಸಿಕೊಳ್ಳಲು ಅವಕಾಶ ಕೊಟ್ಟಿದ್ದೇನೆ ಎಂಬುದನ್ನು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಈ ಜನಕ್ಕೆ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಜೀವದ ಮಾರ್ಗವನ್ನೂ, ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 21:8
6 ತಿಳಿವುಗಳ ಹೋಲಿಕೆ  

ನಾನು ಜೀವಮರಣಗಳನ್ನೂ ಆಶೀರ್ವಾದಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮ್ಯಾಕಾಶಗಳು ಸಾಕ್ಷಿಗಳಾಗಿರಲಿ. ಆದದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆದುಕೊಳ್ಳಿರಿ;


ನೋಡಿರಿ; ನಾನು ಜೀವಶುಭಗಳನ್ನೂ ಮರಣಾಶುಭಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ.


ನೋಡಿರಿ, ಈ ಹೊತ್ತು ನಾನು ಆಶೀರ್ವಾದವನ್ನೂ ಶಾಪವನ್ನೂ ನಿಮ್ಮ ಮುಂದೆ ಇಡುತ್ತಾ ಇದ್ದೇನೆ.


ಧರ್ಮಮಾರ್ಗದಿಂದ ಜೀವಲಾಭವು; ಆ ಸುಪಥಮಾರ್ಗವು ಅಮರಣವೇ.


ಯೆರೆಮೀಯನು ಚಿದ್ಕೀಯನಿಗೆ - ಸೇನಾಧೀಶ್ವರ ಸ್ವಾವಿುಯೂ ಇಸ್ರಾಯೇಲ್ಯರ ದೇವರೂ ಆದ ಯೆಹೋವನು ಇಂತೆನ್ನುತ್ತಾನೆ - ನೀನು ಬಾಬೆಲಿನ ಅರಸನ ಸರದಾರರನ್ನು ಮರೆಹೊಕ್ಕರೆ ನಿನ್ನ ಪ್ರಾಣವುಳಿಯುವದು, ಈ ಪಟ್ಟಣವೂ ಬೆಂಕಿಯಿಂದ ಸುಡದು, ನೀನೂ ನಿನ್ನ ಮನೆತನದವರೂ ಬದುಕುವಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು