ಯೆರೆಮೀಯ 21:9 - ಕನ್ನಡ ಸತ್ಯವೇದವು J.V. (BSI)9 ಪಟ್ಟಣದಲ್ಲಿ ನಿಲ್ಲುವವನು ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವನು; ನಿಮ್ಮನ್ನು ಮುತ್ತುವ ಕಸ್ದೀಯರನ್ನು ಮರೆಹೊಗಲು ಪಟ್ಟಣವನ್ನು ಬಿಡುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವನು. ನಿಮ್ಮನ್ನು ಮುತ್ತುವ ಕಸ್ದೀಯರನ್ನು ಮೊರೆಹೋಗಲು ಪಟ್ಟಣವನ್ನು ಬಿಡುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಗರದಲ್ಲೆ ನಿಲ್ಲುವವನು ಖಡ್ಗ - ಕ್ಷಾಮ - ವ್ಯಾಧಿಗಳಿಂದ ಸಾಯುವನು. ನಿಮಗೆ ಮುತ್ತಿಗೆ ಹಾಕುತ್ತಿರುವ ಬಾಬಿಲೋನಿಯಾದವರಿಗೆ ಮರೆಹೋಗಲು ನಗರವನ್ನು ಬಿಡುವವನು ಬದುಕುವನು. ತನ್ನ ಪ್ರಾಣವನ್ನಾದರು ಬಾಚಿಕೊಂಡು ಹೋಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಜೆರುಸಲೇಮಿನಲ್ಲಿ ಉಳಿಯುವವನು ಮರಣಹೊಂದುವನು. ಆತನು ಖಡ್ಗದಿಂದಾಗಲಿ ಹಸಿವಿನಿಂದಾಗಲಿ ಭಯಂಕರವಾದ ರೋಗದಿಂದಾಗಲಿ ಮಡಿಯುವನು. ಆದರೆ ಜೆರುಸಲೇಮಿನಿಂದ ಹೊರಗೆ ಬಾಬಿಲೋನಿನ ಸೈನಿಕರಿಗೆ ಶರಣಾಗತನಾದವನು ಬದುಕುವನು. ಆ ಸೈನಿಕರು ನಗರವನ್ನು ಮುತ್ತಿದ್ದಾರೆ. ಯಾರೂ ನಗರದಲ್ಲಿ ಆಹಾರವನ್ನು ತರುವಂತಿಲ್ಲ. ಆದರೆ ನಗರವನ್ನು ಬಿಟ್ಟು ಹೊರಗೆ ಹೋದವರು ಬದುಕುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಈ ಪಟ್ಟಣದಲ್ಲಿ ನಿಲ್ಲುವವನು ಖಡ್ಗದಿಂದಲೂ, ಕ್ಷಾಮದಿಂದಲೂ, ವ್ಯಾಧಿಯಿಂದಲೂ ಸಾಯುವನು. ಆದರೆ ಹೊರಗೆ ಹೋಗಿ, ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರುವವನು ಬದುಕುವನು. ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು. ಅಧ್ಯಾಯವನ್ನು ನೋಡಿ |