Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನು [ನನಗೆ] ಹೀಗೆ ಅಪ್ಪಣೆಕೊಟ್ಟನು - ನೀನು ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಈ ಮಾತನ್ನು ಅಲ್ಲಿ ಹೇಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ನನಗೆ ಹೀಗೆ ಅಪ್ಪಣೆಕೊಟ್ಟನು, “ನೀನು ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಈ ಮಾತನ್ನು ಅಲ್ಲಿ ಹೇಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ನನಗೆ ಹೀಗೆ ಎಂದು ಆಜ್ಞೆಮಾಡಿದರು: “ನೀನು ಜುದೇಯದ ಅರಸನ ಮನೆಗೆ ಹೋಗು. ಅಲ್ಲಿ ಈ ಮಾತನ್ನು ಹೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಹೇಳಿದನು: “ಯೆರೆಮೀಯನೇ, ರಾಜನ ಅರಮನೆಗೆ ಹೋಗು. ಯೆಹೂದದ ರಾಜನ ಬಳಿಗೆ ಹೋಗಿ ಅಲ್ಲಿ ಈ ಸಂದೇಶವನ್ನು ಸಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಹೀಗೆ ಹೇಳುತ್ತಾನೆ: “ಯೆಹೂದದ ಅರಸನ ಮನೆಗೆ ಇಳಿದು ಹೋಗಿ, ಅಲ್ಲಿ ಈ ವಾಕ್ಯವನ್ನು ಹೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:1
15 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು - ಯೆಹೋವನ ಮಾತನ್ನು ಆಲಿಸು - ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು;


ಯೋಹಾನನು ಹೆರೋದನಿಗೆ - ನಿನ್ನ ಅಣ್ಣನ ಹೆಂಡತಿಯನ್ನು ಇಟ್ಟುಕೊಂಡಿರುವದು ಧರ್ಮವಲ್ಲವೆಂದು ಹೇಳುತ್ತಿದ್ದನು.


ಆದರೆ ಬೇತೇಲಿನಲ್ಲಿ ಇನ್ನು ಪ್ರವಾದನೆಮಾಡಬೇಡ; ಇದು ರಾಜಕೀಯ ಪವಿತ್ರಾಲಯ, ಇದು ಅರಮನೆ ಎಂದು ಹೇಳಲು


ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ವಿುಚ್ಪದಲ್ಲಿ ಉರುಲಾಗಿಯೂ ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.


ಯೆಹೂದದ ಅರಸನ ಮನೆತನದ ವಿಷಯವಾಗಿ ಯೆಹೋವನು ಹೇಳಿರುವ ಈ ಮಾತನ್ನು ಕೇಳಿರಿ -


ಯೆಹೋವನು ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.


ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಇವನ ಹತ್ತಿರ ಬಂದು ಹೇಳಿದ್ದೇನಂದರೆ - ಒಂದು ಊರಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಇನ್ನೊಬ್ಬನು ಬಡವನು.


ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರಿಯೆಂಬ ವನಕ್ಕೆ ಬೆಂಕಿಹಚ್ಚುವೆನು, ಅದು ಸುತ್ತುಮುತ್ತಣದನ್ನೆಲ್ಲಾ ನುಂಗಿಬಿಡುವದು.


ದಾವೀದನ ಸಿಂಹಾಸನಾರೂಢನಾದ ಯೆಹೂದದ ಅರಸನೇ, ಯೆಹೋವನ ಮಾತನ್ನು ಕೇಳು; ನಿನ್ನ ಸೇವಕರೂ ಈ ಬಾಗಿಲುಗಳಲ್ಲಿ ಸೇರುವ ನಿನ್ನ ಪ್ರಜೆಗಳೂ ಕೇಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು