ಯೆರೆಮೀಯ 22:11 - ಕನ್ನಡ ಸತ್ಯವೇದವು J.V. (BSI)11 ಯೆಹೂದದ ಅರಸನಾದ ಯೋಷೀಯನ ಮಗನೂ ತನ್ನ ತಂದೆಯಾದ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಯೆಹೋವನು ಹೇಳುವದೇನಂದರೆ - ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬಾರನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೂದದ ಅರಸನಾದ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಯೆಹೋವನು ಹೇಳುವುದೇನೆಂದರೆ, “ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಜುದೇಯದ ಅರಸನಾದ ಯೋಷೀಯನ ಮಗನೂ ತನ್ನ ತಂದೆ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಹಾಗು ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಸರ್ವೇಶ್ವರ ಹೇಳುವುದು ಏನೆಂದರೆ: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೋಷೀಯನ ಮಗನಾದ ಯೋಹಾಜನ (ಶಲ್ಲೂಮನ) ಬಗ್ಗೆ ಯೆಹೋವನು ಹೀಗೆಂದನು: (ಶಲ್ಲೂಮನು ತನ್ನ ತಂದೆಯಾದ ಯೋಷೀಯನ ಮರಣಾನಂತರ ರಾಜನಾದನು.) “ಯೋಹಾಜನು ಜೆರುಸಲೇಮಿನಿಂದ ಹೊರಟುಹೋದನು. ಅವನು ಮತ್ತೆಂದಿಗೂ ಜೆರುಸಲೇಮಿಗೆ ಹಿಂದಿರುಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೂದದ ಅರಸನಾದ ಯೋಷೀಯನ ಮಗನು ತನ್ನ ತಂದೆಯಾದ ಯೋಷೀಯನಿಗೆ ಬದಲಾಗಿ ಆಳಿದವನೂ, ಈ ಸ್ಥಳದಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬರುವುದೇ ಇಲ್ಲ. ಅಧ್ಯಾಯವನ್ನು ನೋಡಿ |