ಯೆರೆಮೀಯ 22:14 - ಕನ್ನಡ ಸತ್ಯವೇದವು J.V. (BSI)14 ಆಹಾ, ನಾನು ವಿಸ್ತಾರವಾದ ಅರಮನೆಯನ್ನೂ ವಿಶಾಲವಾದ ಮಹಡಿಗಳನ್ನೂ ಕಟ್ಟಿಸಿಕೊಳ್ಳುವೆನು ಎಂದು ಹೇಳಿ ಅಗಲಗಲವಾದ ಕಿಟಕಿಗಳನ್ನಿಡಿಸಿ [ಒಳಗೆ ಗೋಡೆಗೆಲ್ಲಾ] ದೇವದಾರಿನ ಹಲಿಗೆಗಳನ್ನು ಹೊದಿಸಿ ಕಿರಿಮಂಜಿಯ ಬಣ್ಣವನ್ನು ಬಳಿಸಿಕೊಳ್ಳುವವನ ಪಾಡನ್ನು ಏನು ಹೇಳಲಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಹಾ, “ನಾನು ವಿಸ್ತಾರವಾದ ಅರಮನೆಯನ್ನೂ ವಿಶಾಲವಾದ ಮಹಡಿಗಳನ್ನೂ ಕಟ್ಟಿಸಿಕೊಳ್ಳುವೆನು” ಎಂದು ಹೇಳಿ, ಅಗಲಗಲವಾದ ಕಿಟಕಿಗಳನ್ನಿಡಿಸಿ, ಒಳಗೆ ಗೋಡೆಗೆಲ್ಲಾ ದೇವದಾರಿನ ಹಲಗೆಗಳನ್ನು ಹೊದಿಸಿ, ಕಿರಿಮಂಜಿಯ ಬಣ್ಣವನ್ನು ಬಳಿಸಿಕೊಳ್ಳುವವನ ಪಾಡನ್ನು ಏನು ಹೇಳಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ‘ಸವಿಸ್ತಾರವಾದ ಅರಮನೆ ನಿರ್ಮಿಸಿಕೊಳ್ಳುವೆನು ವಿಶಾಲವಾದ ಮಹಡಿ ಕಟ್ಟಿಸಿಕೊಳ್ಳುವೆನು’ ಎನ್ನುವನಿಗೆ ಧಿಕ್ಕಾರ ! ಅವನು ಅಗಲಗಲವಾದ ಕಿಟಕಿಗಳನ್ನಿಡಿಸಿಕೊಳ್ಳುತ್ತಾನೆ ಅವುಗಳಿಗೆ ಕೆಂಪು ಬಣ್ಣವನ್ನೂ ಬಳಿಸಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಯೆಹೋಯಾಕೀಮನು, ‘ನಾನೇ ಒಂದು ದೊಡ್ಡ ಅರಮನೆಯನ್ನು ಕಟ್ಟಿಸುತ್ತೇನೆ. ನಾನು ಮಹಡಿಯ ಮೇಲೆ ದೊಡ್ಡದೊಡ್ಡ ಕೋಣೆಗಳನ್ನು ಕಟ್ಟಿಸುತ್ತೇನೆ’ ಎಂದು ಹೇಳುತ್ತಾನೆ. ಅವನು ದೊಡ್ಡದೊಡ್ಡ ಕಿಟಕಿಗಳುಳ್ಳ ಮನೆಯನ್ನು ಕಟ್ಟಿಸುತ್ತಾನೆ. ದೇವದಾರಿನ ಹಲಗೆಗಳನ್ನು ಹೊದಿಸುತ್ತಾನೆ. ಅದಕ್ಕೆ ಕೆಂಪು ಬಣ್ಣವನ್ನು ಬಳಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವನು, ‘ನಾನು ವಿಸ್ತಾರವಾದ ಅರಮನೆಯನ್ನೂ, ವಿಶಾಲವಾದ ಕೊಠಡಿಗಳನ್ನೂ ಕಟ್ಟಿಸಿಕೊಳ್ಳುವೆನೆಂದು ಹೇಳಿ.’ ಕಿಟಕಿಗಳನ್ನು ಕೊರೆದು, ದೇವದಾರಿನ ಹಲಗೆಗಳನ್ನು ಹಾಕಿ, ಕೆಂಪು ಬಣ್ಣವನ್ನು ಹಚ್ಚುವವನಿಗೂ ಕಷ್ಟ! ಅಧ್ಯಾಯವನ್ನು ನೋಡಿ |