Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:15 - ಕನ್ನಡ ಸತ್ಯವೇದವು J.V. (BSI)

15 ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧೆಯುಳ್ಳವನಾಗಿರುವದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧಿಸುವುದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿ ನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು; ಆಗ ಅವನಿಗೆ ನೆಮ್ಮದಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದೇವದಾರಿನ ಕೆಲಸದಲ್ಲಿ, ಬೇರೆಯವರನ್ನು ಮೀರಿಸುವುದರಲ್ಲಿ ಅಡಗಿದೆಯೇ ನಿನ್ನ ದೊರೆತನದ ಹಿರಿಮೆ? ನಿನ್ನ ತಂದೆ ಎಷ್ಟೇ ಕುಡಿದರೂ ತಿಂದರೂ ನ್ಯಾಯನೀತಿಯನ್ನು ಪಾಲಿಸುತ್ತಿದ್ದನಲ್ಲವೆ? ಆಗ ಅವನಿಗೆ ಎಲ್ಲವು ನೆಮ್ಮದಿಯಾಗಿತ್ತಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಯೆಹೋಯಾಕೀಮನೇ, ನಿನ್ನ ಮನೆಯಲ್ಲಿ ದೇವದಾರಿನ ಮರವನ್ನು ಬಹಳವಾಗಿ ಇಟ್ಟುಕೊಳ್ಳುವದರಿಂದ ನೀನು ದೊಡ್ಡ ರಾಜನಾಗುವದಿಲ್ಲ. ನಿನ್ನ ತಂದೆಯಾದ ಯೋಷೀಯನು ಅನ್ನಪಾನೀಯಗಳಿಂದ ತೃಪ್ತಿಪಟ್ಟುಕೊಳ್ಳುತ್ತಿದ್ದನು. ಅವನು ನೀತಿ ಮತ್ತು ನ್ಯಾಯ ಸಮ್ಮತವಾದದ್ದನ್ನು ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಹೆಚ್ಚು ಹೆಚ್ಚು ದೇವದಾರುಗಳನ್ನು ಹೊಂದಲು ಅದು ನಿಮ್ಮನ್ನು ರಾಜನನ್ನಾಗಿಸುತ್ತದೆಯೇ? ನಿನ್ನ ತಂದೆ ಉಂಡು, ಕುಡಿದು ನ್ಯಾಯವನ್ನೂ, ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾಗಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:15
33 ತಿಳಿವುಗಳ ಹೋಲಿಕೆ  

ಯೆಹೋವನ ಕಡೆಗೆ ತಿರುಗಿಕೊಂಡು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಬಲದಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಯೋಷೀಯನಿಗೆ ಸಮಾನನಾದ ಅರಸನು ಮುಂಚೆಯೂ ತರುವಾಯವೂ ಇರಲಿಲ್ಲ.


ಶಿಷ್ಟರಿಗೆ ಶುಭವೇ ಎಂದು ಹೇಳಿರಿ, ಅವರು ತಮ್ಮ ಸುಕೃತಫಲವನ್ನು ಅನುಭವಿಸುವರಷ್ಟೆ.


ದೇಶವೇ, ನಿನ್ನ ರಾಜನು ಕುಲೀನನಾಗಿದ್ದು ಪ್ರಭುಗಳು ಅಮಲನ್ನೊಲ್ಲದೆ ಶಕ್ತಿಗೊಳ್ಳುವೆವೆಂದು ಸರಿಯಾದ ಸಮಯದಲ್ಲಿ ಊಟಕ್ಕೆ ಕುಳಿತರೆ ನಿನಗೆ ಭಾಗ್ಯವೇ ಸರಿ.


ರಾಜನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ಧರ್ಮದಿಂದ ಸ್ಥಿರವಾಗುವದು.


ನ್ಯಾಯಪಾಲಕನಾದ ರಾಜನು ದೇಶವನ್ನು ವೃದ್ಧಿಗೆ ತರುವನು; ಅನ್ಯಾಯವಾಗಿ ತೆರಿಗೆಯನ್ನು ಕಸಕೊಳ್ಳುವವನು ದೇಶವನ್ನು ನಾಶಮಾಡುವನು.


ಅವನು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಿಕನಾದ ದಾವೀದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾದನು.


ನಮ್ಮ ದೇವರಾದ ಯೆಹೋವನ ಮಾತು ಹಿತವಾಗಲಿ ಅಹಿತವಾಗಲಿ ಆತನ ಸನ್ನಿಧಿಯಲ್ಲಿ ವಿಚಾರಿಸುವದಕ್ಕೆ ನಿನ್ನನ್ನು ಕಳುಹಿಸುವ ನಾವು ಅದನ್ನು ಕೈಕೊಳ್ಳುವೆವು; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಿದರೆ ನಮಗೆ ಶುಭವಾಗುವದಷ್ಟೆ ಎಂಬದಾಗಿ ಹೇಳಿದರು.


ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ ಮುಂಜಾನೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ.


ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.


ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಆತನು ಇಸ್ರಾಯೇಲ್ಯರನ್ನು ಸದಾ ಪ್ರೀತಿಸುವವನಾಗಿರುವದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇವಿುಸಿದ್ದಾನೆ ಎಂದು ಹೇಳಿದಳು.


ದಾವೀದನು ಇಸ್ರಾಯೇಲ್ಯರೆಲ್ಲರ ಅರಸನಾಗಿ ಎಲ್ಲಾ ಪ್ರಜೆಗಳಿಗೂ ಧರ್ಮತಪ್ಪದೆ ನ್ಯಾಯತೀರಿಸುತ್ತಿದ್ದನು.


ಹೀಗಿರಲಾಗಿ ನೀವು ಉಂಡರೂ ಕುಡಿದರೂ ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಘನತೆಗಾಗಿ ಮಾಡಿರಿ.


ಅವರು ದಿನಾಲು ಏಕಮನಸ್ಸಿನಿಂದ ದೇವಾಲಯದಲ್ಲಿ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ ಸರಲ ಹೃದಯದಿಂದಲೂ ಊಟಮಾಡುತ್ತಾ ಇದ್ದರು;


ಹೇಗೂ ಒಳಗಿರುವಂಥದನ್ನು ದಾನಾಕೊಡಿರಿ; ಆಗ ಸಕಲವೂ ನಿಮಗೆ ಶುದ್ಧವಾಗಿರುವದು.


ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಿಕೆಯನ್ನು ಚಿಗುರಿಸುವೆನು; ಅವನು ರಾಜನಾಗಿ ಆಳುತ್ತಾ ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ ದೇಶದಲ್ಲಿ ನೀತಿನ್ಯಾಯಗಳನ್ನು ನಿರ್ವಹಿಸುವನು.


ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು ಹೀಗನ್ನುತ್ತಾನೆ - ಅಯ್ಯೋ, ಅಣ್ಣಾ, ಅಯ್ಯೋ, ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವದಿಲ್ಲ; ಅಯ್ಯೋ, ನಮ್ಮೊಡೆಯಾ, ಅಕಟಾ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು.


ಯೆಹೋವನು ಹೀಗನ್ನುತ್ತಾನೆ - ನೀತಿನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ; ವಿದೇಶಿ, ಅನಾಥ, ವಿಧವೆ, ಇವರಿಗೆ ಯಾವ ಅನ್ಯಾಯವನ್ನೂ ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸದಿರಿ.


ಇವನಿಗೆ ಆಶ್ರಯವು ಗಿರಿದುರ್ಗ, ಅನ್ನವು ಉಚಿತವಾಗಿ ಒದಗುವದು, ನೀರೂ ನಿಸ್ಸಂದೇಹ.


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬದನ್ನೂ ಕಂಡುಕೊಂಡೆನು.


ಬಾಯಿ ತೆರೆದು ಧರ್ಮವನ್ನು ನಡಿಸು, ದೀನದರಿದ್ರರಿಗೆ ನ್ಯಾಯವನ್ನು ತೀರಿಸು.


ರಾಜನ ಕೃಪಾಸತ್ಯತೆಗಳು ಅವನನ್ನು ಕಾಯುವವು; ಅವನ ಕರುಣೆಯೇ ಅವನ ಸಿಂಹಾಸನಕ್ಕೆ ಆಧಾರ.


ಅವನು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಿಕನಾದ ದಾವೀದನ ಮಾರ್ಗದಲ್ಲೇ ಯೆಹೋವನ ಚಿತ್ತಾನುಸಾರವಾಗಿ ನಡೆದನು.


ಯೋಷೀಯನ ಮಕ್ಕಳು - ಚೊಚ್ಚಲನು ಯೋಹಾನಾನ್; ಎರಡನೆಯವನು ಯೆಹೋಯಾಕೀಮ್; ಮೂರನೆಯವನು ಚಿದ್ಕೀಯ; ನಾಲ್ಕನೆಯವನು ಶಲ್ಲೂಮ್.


ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.


ನೀವು ನಿಮ್ಮ ನಡತೆಯನ್ನೂ ಕೃತ್ಯಗಳನ್ನೂ ಸಂಪೂರ್ಣವಾಗಿ ತಿದ್ದಿಕೊಂಡು ಕಕ್ಷಿಪ್ರತಿಕಕ್ಷಿಗಳಿಗೆ ಕೇವಲ ನ್ಯಾಯವನ್ನೇ ತೀರಿಸಿ


ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೇವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ ವೇಷಹಾಕಿಕೊಂಡು ಅವನೊಡನೆ ಕಾದುವದಕ್ಕೆ ಮೆಗಿದ್ದೋ ಬೈಲಿಗೆ ಹೋದನು.


ಅವು ಶೋಕಗೀತಗ್ರಂಥದಲ್ಲಿ ಬರೆದಿರುತ್ತವೆ. ಯೋಷೀಯನ ಉಳಿದ ಚರಿತ್ರೆಯೂ ಯೆಹೋವನ ಧರ್ಮಶಾಸ್ತ್ರಾನುಸಾರವಾದ ಅವನ ಭಕ್ತಿಕಾರ್ಯಗಳೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು