Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:18 - ಕನ್ನಡ ಸತ್ಯವೇದವು J.V. (BSI)

18 ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು ಹೀಗನ್ನುತ್ತಾನೆ - ಅಯ್ಯೋ, ಅಣ್ಣಾ, ಅಯ್ಯೋ, ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವದಿಲ್ಲ; ಅಯ್ಯೋ, ನಮ್ಮೊಡೆಯಾ, ಅಕಟಾ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು. “ಅಯ್ಯೋ ಅಣ್ಣಾ, ಅಯ್ಯೋ ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವುದಿಲ್ಲ; ಅಯ್ಯೋ ನಮ್ಮೊಡೆಯಾ, ಅಯ್ಯೋ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದಕಾರಣ ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಸರ್ವೇಶ್ವರ ಹೀಗೆನ್ನುತ್ತಾರೆ: “ಇವನಿಗಾಗಿ ಯಾರೂ ‘ಅಯ್ಯೋ ಸೋದರಸೋದರಿಯೇ’ ಎಂದು ಗೋಳಾಡರು ‘ಅಯ್ಯೋ ನಮ್ಮೊಡೆಯಾ, ರಾಜಾಧಿರಾಜ’ ಎಂದು ಪ್ರಲಾಪಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೋಷೀಯನ ಮಗನಾದ ಯೆಹೋಯಾಕೀಮನಿಗೆ ಯೆಹೋವನು ಹೀಗೆ ಹೇಳುವನು, “ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಗೋಳಾಡುವದಿಲ್ಲ. ಅವರು ಒಬ್ಬರಿಗೊಬ್ಬರು, ‘ನನ್ನ ಸೋದರನೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ, ನನ್ನ ಸೋದರಿಯೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ’ ಎಂದು ಹೇಳುವದಿಲ್ಲ. ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಅಳುವದಿಲ್ಲ. ಅವರು ಅವನ ಬಗ್ಗೆ ‘ಒಡೆಯನೇ, ನನ್ನ ರಾಜನೇ, ನನಗೆ ತುಂಬಾ ದುಃಖವಾಗಿದೆ’ ಎಂದು ಹೇಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದ್ದರಿಂದ ಯೋಷೀಯನ ಮಗ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅವರು ಅವನನ್ನು ಕುರಿತು ಗೋಳಾಡಿ, ‘ಅಯ್ಯೋ, ನನ್ನ ಸಹೋದರನೇ, ಅಯ್ಯೋ, ನನ್ನ ಸಹೋದರಿಯೇ,’ ಎಂದು ಅನ್ನುವುದಿಲ್ಲ. ‘ಅಯ್ಯೋ, ದೊರೆಯೇ, ಅಯ್ಯೋ, ಅವನ ವೈಭವವೇ,’ ಎಂದು ಅವನನ್ನು ಕುರಿತು ಗೋಳಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:18
17 ತಿಳಿವುಗಳ ಹೋಲಿಕೆ  

ಈ ದೇಶದಲ್ಲಿನ ದೊಡ್ಡವರೂ ಅಲ್ಪರೂ ಸಾಯುವರು; ಅವರನ್ನು ಯಾರೂ ಹೂಣಿಡರು, ಅವರಿಗಾಗಿ ಯಾರೂ ಗೋಳಾಡರು, ಗಾಯ ಮಾಡಿಕೊಳ್ಳರು, ತಲೆಬೋಳಿಸಿಕೊಳ್ಳರು;


ತನ್ನ ಊರಿಗೆ ತೆಗೆದುಕೊಂಡು ಬಂದು ತನ್ನ ಶ್ಮಶಾನಭೂವಿುಯಲ್ಲಿ ಅದನ್ನು ಸಮಾಧಿ ಮಾಡಿದನು. ಅವರು - ಅಯ್ಯೋ, ನನ್ನ ಸಹೋದರನೇ, ಎಂದು ಗೋಳಾಡಿದರು.


ಸತ್ತವನಿಗಾಗಿ ಅಳಬೇಡಿರಿ, ಬಡುಕೊಳ್ಳಬೇಡಿರಿ; ಸೆರೆಯಾದವನಿಗೇ ಬಿಕ್ಕಿಬಿಕ್ಕಿ ಅಳಿರಿ; ಅವನು ಇನ್ನು ಹಿಂದಿರುಗನು, ಜನ್ಮಭೂವಿುಯನ್ನು ನೋಡನು.


ಅವರು ಘೋರಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಹೂಣಿಡರು; ಅವರು ಭೂವಿುಯ ಮೇಲೆ ಗೊಬ್ಬರವಾಗುವರು; ಖಡ್ಗವೂ ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂವಿುಯ ಜಂತುಗಳಿಗೂ ಆಹಾರವಾಗುವವು.


ನಿನಗಿಂತ ಮುಂಚಿನ ನಿನ್ನ ಪಿತೃಗಳಾದ ಅರಸರಿಗೆ ಧೂಪಹಾಕಿದ ಪ್ರಕಾರ ನಿನಗೂ ಹಾಕುವರು; ಅಯ್ಯೋ, ಪ್ರಭುವೇ ಎಂದು ನಿನಗಾಗಿ ಗೋಳಾಡುವರು; ನಾನೇ ನುಡಿದಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.


ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತಗಳನ್ನು ಹಾಡುವದು ಇಸ್ರಾಯೇಲ್ಯರಲ್ಲಿ ಒಂದು ಪದ್ಧತಿಯಾಯಿತು.


ಯೋನಾತಾನನೇ, ನನ್ನ ಸಹೋದರನೇ, ನಿನಗೋಸ್ಕರ ನನ್ನಲ್ಲಿ ಬಹು ಸಂಕಟವುಂಟಾಗಿದೆ; ನೀನು ನನಗೆ ಬಹುಮನೋಹರನಾಗಿದ್ದಿ. ನನ್ನ ಮೇಲಿದ್ದ ನಿನ್ನ ಪ್ರೀತಿಯು ಆಶ್ಚರ್ಯಕರವಾದದ್ದೇ ಸರಿ; ಅದು ಸತೀಪ್ರೇಮಕ್ಕಿಂತ ಶ್ರೇಷ್ಠವಾದದ್ದು.


ಯೆಹೋವನ ಆಲಯದಲ್ಲಿದ್ದ ಅಶೇರವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇವಿುನ ಹೊರಗಿರುವ ಕಿದ್ರೋನ್‍ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಡಿಸಿ ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಕನಿಷ್ಠಜನರ ಶ್ಮಶಾನದಲ್ಲಿ ಹಾಕಿಸಿದನು.


ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ರೂಮದವಳೂ ಪೆದಾಯನ ಮಗಳೂ ಆದ ಜೆಬೂದಾ ಎಂಬಾಕೆಯು ಅವನ ತಾಯಿ.


ಅವನು ಪಿತೃಗಳ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಖೀನನು ಅರಸನಾದನು.


ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಅವನನ್ನು ಎಲ್ಲಿಗೆ ಸೆರೆಯೊಯ್ದರೋ ಅಲ್ಲೇ ಸಾಯುವನು, ಈ ದೇಶವನ್ನು ಇನ್ನು ಕಾಣನು ಎಂಬದೇ.


ಯೋಷೀಯನ ಮಕ್ಕಳು - ಚೊಚ್ಚಲನು ಯೋಹಾನಾನ್; ಎರಡನೆಯವನು ಯೆಹೋಯಾಕೀಮ್; ಮೂರನೆಯವನು ಚಿದ್ಕೀಯ; ನಾಲ್ಕನೆಯವನು ಶಲ್ಲೂಮ್.


ಯೆಹೂದದ ಅರಸನ ಮನೆತನದ ವಿಷಯವಾಗಿ ಯೆಹೋವನು ಹೇಳಿರುವ ಈ ಮಾತನ್ನು ಕೇಳಿರಿ -


ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ - ಇವನ ಸಂತಾನದಲ್ಲಿ ಯಾವನೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ ರಾತ್ರಿಯ ಚಳಿಗೂ ಈಡಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು