Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:21 - ಕನ್ನಡ ಸತ್ಯವೇದವು J.V. (BSI)

21 ನಾನು ನಿನ್ನ ನೆಮ್ಮದಿಯಲ್ಲಿ ನಿನ್ನೊಡನೆ ಮಾತಾಡಿದಾಗ ಕೇಳಲೊಲ್ಲೆನು ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವದು ನಿನಗೆ ಬಾಲ್ಯದಿಂದಲೇ ಅಭ್ಯಾಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾನು ನೆಮ್ಮದಿಯಲ್ಲಿ ನಿನ್ನೊಡನೆ ಮಾತನಾಡಿದಾಗ “ನಾನು ಕೇಳುವುದಿಲ್ಲ” ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವುದು ನಿನಗೆ ಬಾಲ್ಯದಿಂದಲೇ ಅಭ್ಯಾಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನೀನು ನೆಮ್ಮದಿಯಾಗಿದ್ದ ಕಾಲದಲ್ಲಿ ನಿನ್ನೊಡನೆ ಮಾತಾಡಿದೆ ಆದರೆ ನೀನು, “ಕೇಳಲೊಲ್ಲೆ” ಎಂದು ಹೇಳಿಬಿಟ್ಟೆ. ನನ್ನ ಮಾತಿಗೆ ಕಿವಿಗೊಡದಿರುವುದು ನಿನಗೆ ಬಾಲ್ಯದಿಂದಲೆ ವಾಡಿಕೆ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಯೆಹೂದವೇ, ನೀನು ಸುರಕ್ಷಿತಳಾಗಿರುವೆ ಎಂದು ನೀನು ಭಾವಿಸಿಕೊಂಡಿರುವೆ. ಆದರೆ ನಾನು ನಿನಗೆ ಎಚ್ಚರಿಕೆಯನ್ನು ಕೊಟ್ಟೆ. ಹೌದು, ನಾನೇ ಎಚ್ಚರಿಕೆಯನ್ನು ಕೊಟ್ಟೆ, ಆದರೆ ನೀನು ಅದನ್ನು ಕಿವಿಗೆ ಹಾಕಿಕೊಳ್ಳಲು ಒಪ್ಪಲಿಲ್ಲ. ನಿನ್ನ ಬಾಲ್ಯದಿಂದಲೂ ನೀನು ಹೀಗೆಯೇ ಮಾಡಿದೆ. ಯೆಹೂದವೇ, ನಿನ್ನ ಬಾಲ್ಯದಿಂದಲೂ ನೀನು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿನ್ನ ಏಳಿಗೆಗೆ ನಿನ್ನ ಸಂಗಡ ಮಾತನಾಡಿದೆನು. ಆದರೆ ನೀನು, ‘ನಾನು ಕೇಳುವುದಿಲ್ಲ,’ ಎಂದೆ. ನನ್ನ ಮಾತಿಗೆ ಕಿವಿಗೊಡದೆ ಇರುವುದೇ ನಿನ್ನ ಯೌವನದ ರೀತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:21
35 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ ವಂಶವೂ ಯೆಹೂದ ವಂಶವೂ ತಮ್ಮ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ; ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ. ಇದು ಯೆಹೋವನ ನುಡಿ.


ನಾವು ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ; ನಮ್ಮ ದೇವರಾದ ಯೆಹೋವನಿಗೆ ನಾವೂ ನಮ್ಮ ಪಿತೃಗಳೂ ನಮ್ಮ ಚಿಕ್ಕತನದಿಂದ ಈಗಿನವರೆಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ ಎಂದು ಮೊರೆಯಿಡುತ್ತಾರೆ.


ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನು, ಆಗರ್ಭದ್ರೋಹಿ ಎನಿಸಿಕೊಂಡವನು ಎಂದು ನಾನು ತಿಳಿದುಕೊಂಡಿದ್ದೆನಷ್ಟೆ.


ಹಾಗಾಗದೆ ಹೊಟ್ಟೆತುಂಬಿದವನಾದರೆ ಯೆಹೋವನು ಯಾರೋ ಎಂದು ನಿನ್ನನ್ನು ತಿರಸ್ಕರಿಸೇನು; ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೇನು.


ಅವರಾದರೋ ನನ್ನ ಮಾತನ್ನು ಕೇಳಲೊಲ್ಲದೆ ನನ್ನ ಮೇಲೆ ತಿರುಗಿಬಿದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಟುಬಿಡಲಿಲ್ಲ. ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಅಂದುಕೊಂಡೆನು.


ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ - ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ ನಿಮ್ಮ ಪಿತೃಗಳಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಯೆಹೋವನು ಹೀಗೆ ನುಡಿಯುತ್ತಾನೆ - ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವವು, ಆ ಸನ್ಮಾರ್ಗವು ಎಲ್ಲಿ ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವದು (ಎಂದು ನಾನು ಅಪ್ಪಣೆಕೊಟ್ಟಾಗ) ಅದರಲ್ಲಿ ನಾವು ನಡೆಯುವದೇ ಇಲ್ಲವೆಂದರು.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ ನನ್ನನ್ನು ರೇಗಿಸುವ ನೈವೇದ್ಯವನ್ನವರ್ಪಿಸಿ ಸುಗಂಧಹೋಮಮಾಡಿ ಪಾನದ್ರವ್ಯವನ್ನು ಸುರಿದು ಒಪ್ಪಿಸುತ್ತಿದ್ದರು.


ಆ ಸಂತಾನದವರಾದರೋ ನನ್ನ ಮೇಲೆ ತಿರುಗಿಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಕೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಕೈಕೊಂಡು ನಡಿಸಲಿಲ್ಲ; ನಾನು ನೇವಿುಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿದರು; ಆದದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಅಂದುಕೊಂಡೆನು.


ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿಬಿದ್ದರು. ಕೈಕೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇವಿುಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಅವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು ಅಂದುಕೊಂಡೆನು.


ನೀವು ಎಂಥಾ ದುರ್ವಂಶ! ಯೆಹೋವನ ಮಾತನ್ನು ನೋಡಿರಿ, ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ ಗಾಢಾಂಧಕಾರದ ಪ್ರದೇಶವಾಗಿಯೂ ಪರಿಣವಿುಸಿದ್ದೆನೋ? ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು ಎಂದು ನನ್ನ ಜನರು ಹೇಳುವದು ಹೇಗೆ.


ಯೆಹೋವನು ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.


ಯಾಕಂದರೆ ನೀವು ಹಟಹಿಡಿದು ಆಜ್ಞೆಗೆ ಒಳಗಾಗದವರೆಂಬದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀರಿ; ನಾನು ಹೋದ ತರುವಾಯ ನೀವು ತಿರುಗಿ ಬೀಳುವದು ಮತ್ತಷ್ಟು ನಿಶ್ಚಯ.


ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಯೆಹೋವನ ಆಜ್ಞೆಯನ್ನು ಉಲ್ಲಂಘಿಸುವವರೇ.


ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದಿರಿ.


ನಮ್ಮ ಯೌವನಾರಭ್ಯ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆಂದು ಇಸ್ರಾಯೇಲು ಹೇಳಲಿ.


ನಮ್ಮ ಪಿತೃಗಳು ದುಡಿದದ್ದನ್ನೂ ಅವರ ದನಕುರಿಗಳನ್ನೂ ಅವರ ಗಂಡು ಹೆಣ್ಣು ಮಕ್ಕಳನ್ನೂ ಬಾಳ್ ದೇವತೆಯು ನಮ್ಮ ಬಾಲ್ಯಾರಭ್ಯ ನುಂಗುತ್ತಾ ಬಂದಿದೆ.


ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಹಟದಂತೆ ನಡೆದು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ಈ ಪಟ್ಟಣದವರೂ ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು ಎಂದು ಸಮಸ್ತ ಜನರಿಗೆ ಸಾರಿದನು.


ಮೋವಾಬು ಚಿಕ್ಕತನದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.


ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ ನೆಮ್ಮದಿಯಾಗಿಯೂ ಇದ್ದು ದಕ್ಷಿಣಪ್ರಾಂತದಲ್ಲಿಯೂ ಇಳಕಲಿನ ಪ್ರದೇಶದಲ್ಲಿಯೂ ಪ್ರಜೆಯು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಬಾರದೋ?


ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ; ಆದರೆ ನೀನು - ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು ಅಂದುಕೊಂಡಿದ್ದೀ.


ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳಿಕೆಯ ಹದಿಮೂರನೆಯ ವರುಷದಿಂದ ಈ ದಿನದವರೆಗೆ, ಇಪ್ಪತ್ತುಮೂರು ವರುಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸುತ್ತಿದ್ದಾನೆ; ಅದನ್ನು ನಿಮಗೆ ಸಾವಕಾಶಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.


ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಸಾವಕಾಶಮಾಡದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಯೆಹೋವನು ಇಂತೆನ್ನುತ್ತಾನೆ - ನೀವು ನನ್ನ ಕಡೆಗೆ ಕಿವಿಗೊಡದೆ ನಿಮ್ಮ ಕೈ ಕೆಲಸದ ಬೊಂಬೆಗಳಿಂದ ನನ್ನನ್ನು ಕೆಣಕಿ ನಿಮಗೆ ಕೇಡನ್ನು ತಂದುಕೊಂಡಿದ್ದೀರಿ.


ಹೀಗಿರಲು ಸೇನಾಧೀಶ್ವರನಾದ ಯೆಹೋವನ ಈ ನುಡಿಯನ್ನು ಕೇಳಿರಿ - ನೀವು ನನ್ನ ಮಾತುಗಳನ್ನು ಕೇಳದ ಕಾರಣ


ಅದು ದೈವೋಕ್ತಿಗೆ ಕಿವಿಗೊಡಲಿಲ್ಲ, ಶಿಕ್ಷಣೆಗೆ ಒಳಪಡಲಿಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು