Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:22 - ಕನ್ನಡ ಸತ್ಯವೇದವು J.V. (BSI)

22 ನಿನ್ನನ್ನು ಅಟ್ಟಿಕೊಂಡು ಹೋಗುವ ಕುರುಬರನ್ನು ಗಾಳಿಯು ಅಟ್ಟಿಬಿಡುವದು; ನಿನ್ನ ವಿುಂಡರು ಸೆರೆಹೋಗುವರು; ಆಗ ನಿನ್ನ ಸಕಲ ದುಷ್ಕೃತ್ಯಗಳ ನಿವಿುತ್ತ ನೀನು ಆಶಾಭಂಗಪಟ್ಟು ಅವಮಾನಕ್ಕೀಡಾಗುವದು ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಿನ್ನನ್ನು ಅಟ್ಟಿಕೊಂಡು ಹೋಗುವ ಕುರುಬರನ್ನು ಗಾಳಿಯು ಅಟ್ಟಿಬಿಡುವುದು. ನಿನ್ನೊಂದಿಗೆ ವ್ಯಭಿಚಾರ ಮಾಡಿದವರು ಸೆರೆಹೋಗುವರು; ಆಗ ನಿನ್ನ ಸಕಲ ದುಷ್ಕೃತ್ಯಗಳ ನಿಮಿತ್ತ ನೀನು ಆಶಾಭಂಗಪಟ್ಟು ಅವಮಾನಕ್ಕೀಡಾಗುವುದು ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಿನ್ನನ್ನು ಅಟ್ಟಿ ಮೇಯಿಸುವ ಕುರುಬರನ್ನು ಗಾಳಿ ಅಟ್ಟಿಸಿಕೊಂಡು ಹೋಗುವುದು. ನಿನ್ನ ಮಿಂಡರನ್ನು ಸೆರೆಹಿಡಿದುಕೊಂಡು ಹೋಗುವರು. ಆಗ ಖಂಡಿತವಾಗಿ ನೀನು ಆಶಾಭಂಗಪಡುವೆ ನಿನ್ನ ದುಷ್ಕೃತ್ಯಗಳ ನಿಮಿತ್ತ ಅವಮಾನಕ್ಕೀಡಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೂದವೇ, ನನ್ನ ದಂಡನೆಯು ಒಂದು ಬಿರುಗಾಳಿಯಂತೆ ಬರುವುದು. ಅದು ನಿನ್ನ ಎಲ್ಲಾ ಕುರುಬರನ್ನು (ನಾಯಕರನ್ನು) ಹಾರಿಸಿಕೊಂಡು ಹೋಗುವುದು. ಯಾವುದಾದರೂ ಬೇರೆ ಜನಾಂಗ ನಿನಗೆ ಸಹಾಯಮಾಡಬಹುದೆಂದು ನೀನು ಭಾವಿಸಿಕೊಂಡಿರುವೆ. ಆದರೆ ಆ ಜನಾಂಗಗಳನ್ನೂ ಸೋಲಿಸಲಾಗುವುದು. ಆಗ ನಿನಗೆ ನಿಜವಾಗಿಯೂ ಆಶಾಭಂಗವಾಗುವುದು. ನೀನು ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಿನ್ನ ಕುರುಬರನ್ನೆಲ್ಲಾ ಗಾಳಿ ಅಟ್ಟಿಸಿಕೊಂಡು ಹೋಗುವುದು. ನಿನ್ನ ಜೊತೆಗಾರರು ಸೆರೆಗೆ ಹೋಗುವರು. ನಿಶ್ಚಯವಾಗಿ ಆಗ ನಿನ್ನ ಎಲ್ಲಾ ಕೆಟ್ಟತನದ ನಿಮಿತ್ತ ನಿನಗೆ ನಾಚಿಕೆಯೂ, ಅವಮಾನವೂ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:22
24 ತಿಳಿವುಗಳ ಹೋಲಿಕೆ  

ಮಂದೆಯನ್ನು ಕಾಯದೆ ಬಿಟ್ಟುಬಿಟ್ಟ ತರವಲ್ಲದ ಕುರುಬನ ಗತಿಯನ್ನು ಏನುಹೇಳಲಿ! ಖಡ್ಗವು ಅವನ ತೋಳಿಗೂ ಬಲಗಣ್ಣಿಗೂ ತಾಕುವದು; ಅವನ ತೋಳು ತೀರಾ ಒಣಗಿಹೋಗುವದು, ಅವನ ಬಲಗಣ್ಣು ಪೂರಾ ಮೊಬ್ಬಾಗುವದು.


ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವದು, ಅದರ ಒರತೆಯು ಒಣಗುವದು; [ಶತ್ರುವು] ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಗೊಂಬುವನು.


ಬಹುಮಂದಿ ಮಂದೆಗಾರರು ನನ್ನ ತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವಾಸ್ತ್ಯವನ್ನು ತುಳಿದು ನನಗೆ ಇಷ್ಟವಾದ ಆ ಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ.


ಏಕಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ; ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.


ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು; ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತಾವಮಾನಕ್ಕೆ ಒಳಗಾಗುವರು.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ತರಗೆಲೆಯೋಪಾದಿಯಲ್ಲಿ ಒಣಗಿ ಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆತಪ್ಪಿತು; ಅವೂ ನನಗೆ ಬೇಸರಗೊಂಡವು.


ಗಾಳಿಯು ಅವರನ್ನು ತನ್ನ ರೆಕ್ಕೆಗಳಲ್ಲಿ ಸುತ್ತಿಕೊಂಡು ಹೋಗುವದು; ತಾವು ಮಾಡುತ್ತಿದ್ದ ಯಜ್ಞಗಳಿಗೆ ನಾಚಿಕೆಪಡುವರು.


ಅಲ್ಲಿಂದಲೂ ತಲೆಯ ಮೇಲೆ ಕೈಯಿಟ್ಟುಕೊಂಡು ಹೊರಡುವಿ; ಏಕಂದರೆ ನಿನ್ನ ಭರವಸಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಸಾಗದು.


ಯಾಜಕರಿಗೆ ಯೆಹೋವನು ಎಲ್ಲಿ ಎಂಬ ವಿಚಾರವೇ ಇರಲಿಲ್ಲ, ಧರ್ಮೋಪದೇಶಕರು ನನ್ನನ್ನು ತಿಳಿಯಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್‍ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಸೇವಿಸಿದರು.


ಹೀಗಿರಲು ಕರ್ತನಾದ ಯೆಹೋವನು ಹೀಗನ್ನುತ್ತಾನೆ - ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.


ಎಲೈ, [ನಗರಿಯೇ,] ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು ನೀಲಾಂಜನದಿಂದ ವಿಶಾಲಾಕ್ಷಿಯಾದರೇನು, ನಿನ್ನನ್ನು ಸೊಗಸು ಮಾಡಿಕೊಳ್ಳುವದು ವ್ಯರ್ಥ; ನಿನ್ನ ವಿುಂಡರು ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ.


ಪ್ರವಾದಿಗಳು ಬರೀ ಗಾಳಿಯೇ, ದೈವೋಕ್ತಿಯು ಅವರಲ್ಲಿಲ್ಲ; ಅವರಿಗೇ ಹೀಗಾಗಲಿ ಅಂದುಕೊಂಡಿದ್ದಾರೆ.


ಅವರು ನನಗೆ ಕೇಡುಮಾಡುತ್ತಾರೋ, ಅವಮಾನವು ತಮ್ಮ ಮುಖವನ್ನು ಮುಚ್ಚುವಷ್ಟರ ಮಟ್ಟಿಗೆ ತಮಗೇ ಕೇಡುಮಾಡಿಕೊಳ್ಳುತ್ತಾರಲ್ಲಾ ಎಂದು ಯೆಹೋವನು ಅನ್ನುತ್ತಾನೆ.


ನಿನ್ನ ವಿುಂಡರಾರೂ ನಿನ್ನನ್ನು ಹುಡುಕುವದಿಲ್ಲ, ಮರೆತುಬಿಟ್ಟರು; ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು.


ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣ ಗಾಳಿಯೇ; ಅದು ಮೋಸವನ್ನೂ ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡಿಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು [ಕಾಣಿಕೆಯಾಗಿ] ಕಳುಹಿಸುತ್ತದೆ.


ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಅತ್ತಿತ್ತ ಹೋಗುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು