ಯೆರೆಮೀಯ 22:23 - ಕನ್ನಡ ಸತ್ಯವೇದವು J.V. (BSI)23 ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವದು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವುದು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ‘ಲೆಬನೋನ್’ ಅರಮನೆಯಲ್ಲಿ ವಾಸಿಸುವವಳೇ, ದೇವದಾರುಗಳ ನಡುವೆ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂಥ ಸಂಕಟಗಳು ಸಂಭವಿಸಿದಾಗ ನಿನಗೊದಗುವ ಪರಿಸ್ಥಿತಿ ಎಷ್ಟೋ ದುಃಖಕರ ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ರಾಜನೇ, ಬೆಟ್ಟದ ಮೇಲೆ ದೇವದಾರು ಮರದಿಂದ ಮಾಡಿದ ನಿನ್ನ ಮನೆಯಲ್ಲಿ ನೀನು ವಾಸಿಸುವೆ. ಆ ಮನೆಯು ಲೆಬನೋನಿನ ಮರದ ತೋಪಿನಂತಿದೆ. ನೀನು ಎತ್ತರವಾದ ಪರ್ವತ ಪ್ರದೇಶದಲ್ಲಿದ್ದ ನಿನ್ನ ವಿಶಾಲವಾದ ಮನೆಯಲ್ಲಿ ಸುರಕ್ಷಿತವಾಗಿರುವುದಾಗಿ ತಿಳಿದುಕೊಂಡಿರುವೆ. ಆದರೆ ನಿನಗೆ ದಂಡನೆಯಾದಾಗ ನೀನು ನರಳುವೆ. ಪ್ರಸವವೇದನೆಯಂಥ ನೋವನ್ನು ನೀನು ಅನುಭವಿಸುವೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಓ, ‘ಲೆಬನೋನಿನಲ್ಲಿ’ ವಾಸಮಾಡುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡವಳೇ, ನಿನ್ನ ಮೇಲೆ ಬೇನೆಗಳೂ, ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ದುಃಖಕರವಾಗಿರುವೆ. ಅಧ್ಯಾಯವನ್ನು ನೋಡಿ |