Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:26 - ಕನ್ನಡ ಸತ್ಯವೇದವು J.V. (BSI)

26 ನಿನ್ನನ್ನೂ ನಿನ್ನ ಹೆತ್ತ ತಾಯಿಯನ್ನೂ ಜನ್ಮಭೂವಿುಯಲ್ಲದ ಅನ್ಯದೇಶಕ್ಕೆ ಎಸೆಡುಬಿಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಿನ್ನನ್ನೂ ಮತ್ತು ನಿನ್ನ ಹೆತ್ತ ತಾಯಿಯನ್ನೂ ಜನ್ಮಭೂಮಿಯಲ್ಲದ ಅನ್ಯದೇಶಕ್ಕೆ ಎಸೆದುಬಿಡುವೆನು; ಅಲ್ಲೇ ಸಾಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಿನ್ನನ್ನೂ ನಿನ್ನ ಹೆತ್ತ ತಾಯಿಯನ್ನೂ ಜನ್ಮಭೂಮಿಯಲ್ಲದ ಅನ್ಯದೇಶಕ್ಕೆ ಎಸೆದುಬಿಡುವೆನು. ನೀವು ಅಲ್ಲೇ ಸಾಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಾನು ನಿನ್ನನ್ನೂ ನಿನ್ನ ತಾಯಿಯನ್ನೂ ನಿಮ್ಮಿಬ್ಬರ ಜನ್ಮಸ್ಥಳವಲ್ಲದ ಬೇರೆ ದೇಶದಲ್ಲಿ ಎಸೆದುಬಿಡುತ್ತೇನೆ. ನೀನು ಮತ್ತು ನಿನ್ನ ತಾಯಿ ಆ ದೇಶದಲ್ಲಿ ಸತ್ತುಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಿನ್ನನ್ನೂ, ನಿನ್ನ ಹೆತ್ತ ತಾಯಿಯನ್ನೂ ನೀವು ಹುಟ್ಟದಿರುವ ಬೇರೆ ದೇಶದಲ್ಲಿ ಹಾಕಿಬಿಡುವೆನು. ನೀವು ಅಲ್ಲೇ ಸಾಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:26
16 ತಿಳಿವುಗಳ ಹೋಲಿಕೆ  

ಅವನು ಯೆಹೋಯಾಖೀನನನ್ನೂ ಅವನ ತಾಯಿ ಹೆಂಡತಿಯರು ಕಂಚುಕಿಗಳು


ಇಗೋ, ಬಲಿತವನೇ, ಯೆಹೋವನು ನಿನ್ನನ್ನು ಎಸೆದೇ ಎಸೆಯುವನು, ಹಿಡಿದೇ ಹಿಡಿಯುವನು;


ಯೆಹೋಯಾಖೀನನು ಅರಸನಾದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಮೂರು ತಿಂಗಳು ಆಳಿದನು. ಯೆರೂಸಲೇವಿುನ ಎಲ್ನಾತಾನನ ಮಗಳಾದ ನೆಹುಷ್ಟಾ ಎಂಬಾಕೆಯು ಇವನ ತಾಯಿ.


ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು, ಅವರಿಗೆ ಬುದ್ಧಿಬರಲೆಂದು ಅವರನ್ನು ಬಾಧಿಸುವೆನು ಎಂದು ಯೆಹೋವನು ಅನ್ನುತ್ತಾನೆ.


ರಾಜನಿಗೂ ರಾಜಮಾತೆಗೂ - ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ ಎಂದು ಹೇಳಿರಿ.


ನೀವಾಗಲಿ ನಿಮ್ಮ ಪಿತೃಗಳಾಗಲಿ ನೋಡದ ದೇಶಕ್ಕೆ ನಿಮ್ಮನ್ನು ಈ ದೇಶದೊಳಗಿಂದ ಎಸೆದುಬಿಡುವೆನು; ಅಲ್ಲಿ ಹಗಲಿರುಳೂ ಅನ್ಯದೇವತೆಗಳನ್ನು ಸೇವಿಸುವಿರಿ; ನಾನು ನಿಮಗೆ ದಯೆತೋರಿಸೆನು.


ಅಲ್ಲೇ ಸಾಯುವಿರಿ, ಹಿಂದಿರುಗಬೇಕೆಂದು ಹಂಬಲಿಸುವ ದೇಶಕ್ಕೆ ಅವರು ಹಿಂದಿರುಗುವದೇ ಇಲ್ಲ.


ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬೆಲಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರಿಗಿ ಬರಮಾಡುವೆನು. ಬಾಬೆಲಿನ ಅರಸನು [ನಿಮಗೆ] ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.


ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇವಿುನಿಂದ ಬಾಬೆಲಿಗೆ ಸೆರೆ ಒಯ್ದಿದ್ದ ಸಕಲಜನರಿಗೂ


ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದಜನಶೇಷದವರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಉಳಿದು ಅಲ್ಲಿಂದ ತಪ್ಪಿಸಿಕೊಂಡು ಯೆಹೂದಕ್ಕೆ ಹಿಂದಿರುಗುವದಿಲ್ಲ; ಓಡಿಬರುವ ಕೊಂಚ ಜನವೇ ಹೊರತು ಯಾವನೂ ಹಿಂದಿರುಗನು.


ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರುಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರುಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.


ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟ ಮಾಡಿದನು.


ಅವನು ಬದುಕಿರುವವರೆಗೂ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿ ನಿತ್ಯವೂ ಅರಸನಿಂದಲೇ ದೊರಕುತ್ತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು