Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:28 - ಕನ್ನಡ ಸತ್ಯವೇದವು J.V. (BSI)

28 ಕೊನ್ಯನೆಂಬ ಈ ಮನುಷ್ಯನು ಅಸಡ್ಡೆಗೀಡಾದ ಒಡಕು ಗಡಿಗೆಯೋ? ಯಾರಿಗೂ ಇಷ್ಟವಲ್ಲದ ಮಡಿಕೆಯೋ? ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ? ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಕೊನ್ಯನೆಂಬ ಈ ಮನುಷ್ಯನು ಬಿಸಾಡಿದ ಒಡಕು ಕುಡಿಕೆಯೋ? ಯಾರಿಗೂ ಇಷ್ಟವಿಲ್ಲದ ಮಣ್ಣಿನ ಮಡಿಕೆಯೋ? ಎಂಬಂತೆ, ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ? ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಕೊನ್ಯನು ಬಿಸಾಡಲ್ಪಟ್ಟ ಒಡಕು ಕುಡಿಕೆಯೆ? ಯಾರಿಗೂ ಬೇಡವಾದ ಮಣ್ಣಿನ ಮಡಿಕೆಯೆ? ಅವನೂ ಅವನ ಮಡದಿಮಕ್ಕಳೇಕೆ ಬೀದಿಪಾಲಾಗಿದ್ದಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೆಹೋಯಾಚೀನನು ಎಸೆಯಲ್ಪಟ್ಟ ಒಡೆದ ಮಡಕೆಯಂತಿದ್ದಾನೆ. ಅವನು ಯಾರಿಗೂ ಬೇಡವಾಗದ ಮಡಕೆಯಂತಿದ್ದಾನೆ. ಯೆಹೋಯಾಚೀನನು ಮತ್ತು ಅವನ ಮಕ್ಕಳು ಏಕೆ ಹೊರಗೆ ಎಸೆಯಲ್ಪಡುವರು? ಅವರು ಪರದೇಶಕ್ಕೆ ಏಕೆ ಒಯ್ಯಲ್ಪಡುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದುಹೋದ ಮಡಿಕೆಯೆ? ಮೆಚ್ಚುಗೆ ಇಲ್ಲದ ಪಾತ್ರೆಯೆ? ಏಕೆ ಕೊನ್ಯನೂ, ಅವನ ಸಂತಾನವೂ ಬೀದಿಪಾಲಾಗಿದ್ದಾರೆ, ತಮಗೆ ತಿಳಿಯದ ದೇಶಕ್ಕೆ ಗಡಿಪಾರಾಗಿದ್ದಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:28
20 ತಿಳಿವುಗಳ ಹೋಲಿಕೆ  

ಇಸ್ರಾಯೇಲೇ ನುಂಗಲ್ಪಟ್ಟಿದೆ; ಅದು ಜನಾಂಗಗಳ ಮಧ್ಯದಲ್ಲಿ ಯಾರಿಗೂ ಬೇಡದ ಪಾತ್ರೆಯಂತಿದೆ.


ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು; ಒಡೆದ ಬೋಕಿಯಂತಿದ್ದೇನೆ.


ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಚೌಕಗಳಲ್ಲಿಯೂ ರೋದನವು ತುಂಬಿದೆ; ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದು ಬಿಟ್ಟಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.


ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವದು, ಅದರ ಒರತೆಯು ಒಣಗುವದು; [ಶತ್ರುವು] ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಗೊಂಬುವನು.


ಯೆಹೋವನು ಇಂತೆನ್ನುತ್ತಾನೆ - ಇವನನ್ನು ಮಕ್ಕಳಿಲ್ಲದವನು, ವ್ಯರ್ಥಜನ್ಮದವನು ಎಂದು ಪಟ್ಟಿಯಲ್ಲಿ ಬರೆಯಿರಿ; ಇವನ ಸಂತಾನದಲ್ಲಿ ಇನ್ನು ಮೇಲೆ ಯಾವನೂ ದಾವೀದನ ಸಿಂಹಾಸನದಲ್ಲಿ ಕೂತು ಯೆಹೂದವನ್ನು ಆಳಿ ಬಾಳನು.


ನಾನು ನಿಮಗೆ ದಯಪಾಲಿಸಿದ ಸ್ವಾಸ್ತ್ಯವನ್ನು ಸ್ವದೋಷದಿಂದಲೇ ಕಳೆದುಕೊಳ್ಳುವಿರಿ; ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು; ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.


ಯೆಹೋವನು ನನಗೆ ಹೀಗೆ ಹೇಳಿದನು - ಮೋಶೆಯೂ ಸಮುವೇಲನೂ ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗದು; ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿಹೋಗಲಿ! ಅವರು - ನಾವು ಎಲ್ಲಿಗೆ ಹೋಗೋಣ ಎಂದು ಕೇಳಲು


ನಾನು ಊರಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು; ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ.


ಫಿಲಿಷ್ಟಿಯರು ಅಲ್ಲಿ ಬಿಟ್ಟುಹೋಗಿದ್ದ ವಿಗ್ರಹಗಳನ್ನು ದಾವೀದನೂ ಅವನ ಜನರೂ ತೆಗೆದುಕೊಂಡು ಬಂದರು.


ಅವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಎಂಟು ವರುಷ ಆಳಿದನು. ಅವನು ತೀರಿಹೋದಾಗ ಅವನನ್ನು ಯಾರೂ ಹಂಬಲಿಸಲಿಲ್ಲ. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜಶ್ಮಶಾನದಲ್ಲಿ ಅಲ್ಲ.


ಅಲ್ಲೇ ಸಾಯುವಿರಿ, ಹಿಂದಿರುಗಬೇಕೆಂದು ಹಂಬಲಿಸುವ ದೇಶಕ್ಕೆ ಅವರು ಹಿಂದಿರುಗುವದೇ ಇಲ್ಲ.


ಆ ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳು, ಈ ಪಟ್ಟಣದಲ್ಲಿ ನಿಂತಿರುವ ಉಪಕರಣಗಳು,


ಯೋಷೀಯನ ಮಗನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದದೇಶದ ಪಟ್ಟಕ್ಕೆ ತರಲ್ಪಟ್ಟು ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದಾಗ


ಇಗೋ, ನೀವೆಲ್ಲರೂ ನಿಮ್ಮ ದುಷ್ಟಹೃದಯದ ಹಟದಂತೆ ನಡೆಯುತ್ತಾ ನನ್ನನ್ನು ಕೇಳದೆ ನಿಮ್ಮ ಪಿತೃಗಳಿಗಿಂತ ಹೆಚ್ಚು ಕೇಡನ್ನು ಮಾಡಿದ್ದರಿಂದಲೂ


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಶಿಲ್ಪಿಗಳನ್ನೂ ಕಮ್ಮಾರರನ್ನೂ ಯೆರೂಸಲೇವಿುನಿಂದ ಬಾಬೆಲಿಗೆ ಸೆರೆ ಒಯ್ದ ಮೇಲೆ ಯೆಹೋವನ ಆಲಯದ ಮುಂದೆ ಇಟ್ಟಿರುವ ಅಂಜೂರದ ಹಣ್ಣು ತುಂಬಿದ ಎರಡು ಪುಟ್ಟಿಗಳನ್ನು ಯೆಹೋವನು ನನಗೆ ಕಾಣಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು