Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:29 - ಕನ್ನಡ ಸತ್ಯವೇದವು J.V. (BSI)

29 ದೇಶವೇ, ದೇಶವೇ, ದೇಶವೇ, ಯೆಹೋವನ ಮಾತನ್ನು ಕೇಳು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದೇಶವೇ, ದೇಶವೇ, ದೇಶವೇ ಯೆಹೋವನ ಮಾತನ್ನು ಕೇಳು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಾಡೇ, ನಾಡೇ, ಎಲೈ ನಾಡೇ, ಸರ್ವೇಶ್ವರನ ಮಾತಿಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ದೇಶವೇ, ದೇಶವೇ, ಯೆಹೂದದ ದೇಶವೇ, ಯೆಹೋವನ ಸಂದೇಶವನ್ನು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಓ ದೇಶವೇ, ದೇಶವೇ, ದೇಶವೇ, ಯೆಹೋವ ದೇವರ ವಾಕ್ಯವನ್ನು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:29
9 ತಿಳಿವುಗಳ ಹೋಲಿಕೆ  

ಆಕಾಶಮಂಡಲವೇ, ನಾನು ಹೇಳುವದನ್ನು ಕೇಳು: ಭೂಮಂಡಲವೇ, ನನ್ನ ಮಾತುಗಳಿಗೆ ಕಿವಿಕೊಡು.


ಜನಾಂಗಗಳೇ, ನೀವೆಲ್ಲರೂ ಕೇಳಿರಿ; ಭೂಮಂಡಲವೇ, ಭೂವಿುಯಲ್ಲಿರುವ ಸಮಸ್ತವೇ, ಕಿವಿಗೊಡಿರಿ! ಕರ್ತನು, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತಾನೆ.


ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ ನನ್ನ ಧರ್ಮಬೋಧನೆಯನ್ನು ಅಸಡ್ಡೆ ಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.


ಜನಾಂಗಗಳೇ, ಸಮೀಪಿಸಿ ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂವಿುಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವದೆಲ್ಲವೂ ಆಲಿಸಲಿ.


ಆದಕಾರಣ ನೀನು ಈ ಪದ್ಯವನ್ನು ಬರೆದುಕೊಂಡು ಇಸ್ರಾಯೇಲ್ಯರಿಗೆ ಕಲಿಸಿಕೊಡಬೇಕು. ಈ ಪದ್ಯವು ಇಸ್ರಾಯೇಲ್ಯರಿಗೆ ವಿರೋಧವಾಗಿ ನನ್ನ ಪಕ್ಷದಲ್ಲಿ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿ ಪಾಠಮಾಡಿಸು.


ಆತನನ್ನು ಕೋಪಗೊಳಿಸಿದರೆ ನೀವು ಯೊರ್ದನ್ ಹೊಳೆಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ಕರೆದು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿವಸ ಇರದೆ ನಾಶವಾಗಿಯೇ ಹೋಗುವಿರಿ.


ಆಗ ಆತನು ನನಗೆ ಹೀಗೆ ಅಪ್ಪಣೆಮಾಡಿದನು - ನೀನು ಎಲುಬುಗಳ ಮೇಲೆ ಧ್ವನಿಯನ್ನು ಹರಡಿ ಅದಕ್ಕೆ ಈ ದೈವೋಕ್ತಿಯನ್ನು ನುಡಿ - ಒಣಗಿದ ಎಲುಬುಗಳೇ, ಯೆಹೋವನ ವಾಕ್ಯವನ್ನು ಕೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು