Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:3 - ಕನ್ನಡ ಸತ್ಯವೇದವು J.V. (BSI)

3 ಯೆಹೋವನು ಹೀಗನ್ನುತ್ತಾನೆ - ನೀತಿನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ; ವಿದೇಶಿ, ಅನಾಥ, ವಿಧವೆ, ಇವರಿಗೆ ಯಾವ ಅನ್ಯಾಯವನ್ನೂ ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು, ನೀತಿ, ನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ವಿದೇಶಿ, ಅನಾಥ, ವಿಧವೆ ಇವರಿಗೆ ಯಾವ ಅನ್ಯಾಯವನ್ನೂ ಮತ್ತು ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿರಿ” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನ ಸಂದೇಶ ಇದು: ನ್ಯಾಯನೀತಿಯನ್ನು ಆಚರಿಸಿರಿ. ವಂಚಿತನಾದವನನ್ನು ದೋಚಿಕೊಳ್ಳುವವನ ಕೈಯಿಂದ ಬಿಡಿಸಿರಿ. ಪರದೇಶೀಯರಿಗೆ, ಅನಾಥರಿಗೆ, ವಿಧವೆಯರಿಗೆ ಅನ್ಯಾಯಮಾಡಬೇಡಿ, ಅವರನ್ನು ಹಿಂಸಿಸಬೇಡಿ. ನಿರಪರಾಧಿಗಳ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ಅನ್ನುತ್ತಾನೆ, ನಿಮ್ಮ ಆಚರಣೆ ನೀತಿಬದ್ಧವಾಗಿಯೂ ನ್ಯಾಯಬದ್ಧವಾಗಿಯೂ ಇರಲಿ. ಸುಲಿಗೆಗೀಡಾದವರನ್ನು ದೋಚಿಕೊಂಡವನಿಂದ ರಕ್ಷಿಸಿರಿ. ಅನಾಥರನ್ನು ಮತ್ತು ವಿಧವೆಯರನ್ನು ಹಿಂಸಿಸಬೇಡಿ; ನಿರಪರಾಧಿಗಳನ್ನು ಕೊಲ್ಲಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರು ಹೇಳುವುದೇನೆಂದರೆ: ನ್ಯಾಯವನ್ನೂ, ನೀತಿಯನ್ನೂ ನಡೆಸಿರಿ. ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಪರದೇಶಸ್ಥನಿಗೆ, ದಿಕ್ಕಿಲ್ಲದವನಿಗೆ ಮತ್ತು ವಿಧವೆಗೆ ಉಪದ್ರವವನ್ನಾದರೂ, ಬಲಾತ್ಕಾರವನ್ನಾದರೂ ಮಾಡಬೇಡಿರಿ. ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:3
49 ತಿಳಿವುಗಳ ಹೋಲಿಕೆ  

ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ ಮುಂಜಾನೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ.


ಮನುಷ್ಯನೇ, ಒಳ್ಳೆಯದು ಇಂಥದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಷ್ಟೆ; ನ್ಯಾಯವನ್ನು ಆಚರಿಸುವದು, ಕರುಣೆಯಲ್ಲಿ ಆಸಕ್ತನಾಗಿರುವದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವದು, ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?


ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವದು, ದೋಚಿಕೊಳ್ಳುವದು, ಹಿಂಸಿಸುವದು, ಜಜ್ಜುವದು, ಇವುಗಳನ್ನು ಮಾಡುವದರಲ್ಲಿಯೇ ನಿನ್ನ ದೃಷ್ಟಿಯೂ ನಿನ್ನ ಮನಸ್ಸೂ ನೆಲೆಗೊಂಡಿವೆ.


ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.


ನಿನ್ನವರು ತಾಯಿತಂದೆಗಳನ್ನು ತುಚ್ಫೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.


ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಐಗುಪ್ತ್ಯರೂ ಎದೋಮ್ಯರೂ ಯೆಹೂದ್ಯರನ್ನು ಹಿಂಸಿಸಿ ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದರಿಂದ ಐಗುಪ್ತವು ಹಾಳುಬೀಳುವದು, ಎದೋಮು ಬೆಗ್ಗಾಡಾಗುವದು.


ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು ನಾನು ಲೋಕದಲ್ಲಿ ಪ್ರೀತಿನೀತಿನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬದಕ್ಕೇ ಹೆಚ್ಚಳಪಡಲಿ; ಪ್ರೀತಿನೀತಿನ್ಯಾಯಗಳೇ ನನಗೆ ಆನಂದವೆಂದು ಯೆಹೋವನು ಅನ್ನುತ್ತಾನೆ.


ಕೊಬ್ಬಿ ಮೆರಮೆರುಗಾಗಿದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ. ಅನಾಥರ ವೃದ್ಧಿಗಾಗಿ ಅವರ ಪಕ್ಷಹಿಡಿದು ವ್ಯಾಜ್ಯ ನಡಿಸರು, ದಿಕ್ಕಿಲ್ಲದವರಿಗೆ ನ್ಯಾಯ ದೊರಕಿಸರು.


ನಿನ್ನ ಅಧಿಕಾರಿಗಳು ದ್ರೋಹಿಗಳೂ ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಆಶಿಸಿ ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸರು; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.


ಪೂರ್ವಕಾಲದ ಮೇರೆಯನ್ನು ಒತ್ತಬೇಡ; ಅನಾಥರ ಹೊಲಗಳಲ್ಲಿ ನುಗ್ಗದಿರು.


ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.


ಅವುಗಳಿಗಾಗಿ ಆತನು ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದದರಿಂದ ಆತನ ಅಪ್ಪಣೆಯ ಪ್ರಕಾರ ಈ ಶಿಕ್ಷೆಯು ಅವರಿಗೆ ಆಯಿತು.


ಯಾವನಾದರೂ ಸ್ವದೇಶದವನಾದ ಇಸ್ರಾಯೇಲ್ಯನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಮಾರಿಬಿಟ್ಟದ್ದಾಗಲಿ ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.


ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕಪ್ರವಾದಿಗಳಿಗೆ - ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ ಎಂದು ಹೇಳಿದ ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು -


ಯಾವವಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷರಕ್ತವನ್ನು ಸುರಿಸುವ ಕೈ,


ಜೀವತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ; ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ.


ವಿಧವೆಯನ್ನೂ ಪರದೇಶಿಯನ್ನೂ ಕೊಲ್ಲುತ್ತಾರೆ; ಅನಾಥರನ್ನು ಹತಮಾಡುತ್ತಾರೆ.


ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು ಬಡವರಿಂದ ಒತ್ತೆತೆಗೆದುಕೊಳ್ಳುವವರಿದ್ದಾರೆ.


ನೀನು ವಿಧವೆಯರನ್ನು ಬರಿಗೈಯಾಗಿ ಕಳುಹಿಸಿಬಿಟ್ಟು, ಅನಾಥರ ಕೈಗಳನ್ನು ಮುರಿದಿದ್ದೀ.


ಇಸ್ರಾಯೇಲ್ಯರ ಶರಣನೂ ದೇವರೂ ಆಗಿರುವಾತನು ಹೇಳಿದ್ದೇನಂದರೆ - ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು


ಅವರು - ಪರದೇಶಿ, ತಾಯಿತಂದೆಯಿಲ್ಲದವ, ಇವರ ವ್ಯಾಜ್ಯದಲ್ಲಿ ನ್ಯಾಯ ಬಿಟ್ಟು ತೀರ್ಪುಹೇಳಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.


ಆತನು ತಾಯಿತಂದೆಯಿಲ್ಲದವರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ; ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.


ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ, ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ, ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ; ಆದರೂ ಯೆಹೋವನ ಮೇಲೆ ಭಾರಹಾಕಿ - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು ಅಂದುಕೊಳ್ಳುತ್ತಾರೆ.


ವಿಧವೆಯರನ್ನಾಗಲಿ ದಿಕ್ಕಿಲ್ಲದ ಮಕ್ಕಳನ್ನಾಗಲಿ ಬಾಧಿಸಬಾರದು.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಮರುಗ ಸೋಪು ಜೀರಿಗೆಗಳಲ್ಲಿ ಹತ್ತರಲ್ಲೊಂದು ಪಾಲುಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಗೌರವವಾದದ್ದನ್ನು, ಅಂದರೆ ನ್ಯಾಯವನ್ನೂ ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿರಿ. ಇವುಗಳನ್ನು ಮಾಡಬೇಕಾಗಿತ್ತು; ಅವುಗಳನ್ನೂ ಬಿಡಬಾರದು.


ಪರದೇಶಸ್ಥನಿಗೆ ಅನ್ಯಾಯಮಾಡಬಾರದು, ಉಪದ್ರವಕೊಡಲೂಬಾರದು. ನೀವೂ ಐಗುಪ್ತದೇಶದಲ್ಲಿ ಪರದೇಶಸ್ಥರಾಗಿದ್ದಿರಲ್ಲವೇ.


ನೋಡಿರಿ, ಕೇಡಿನ ಬಂಧಗಳನ್ನು ಬಿಚ್ಚುವದು, ನೊಗದ ಕಣ್ಣಿಗಳನ್ನು ಕಳಚುವದು, ಜಜ್ಜಿಹೋದವರನ್ನು ಬಿಡುಗಡೆಮಾಡುವದು, ನೊಗಗಳನ್ನೆಲ್ಲಾ ಮುರಿಯುವದು,


ಹಸಿದವರಿಗೆ ಅನ್ನವನ್ನು ಹಂಚುವದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವದು, ನಿನ್ನಂತೆ ನರನಾಗಿರುವ ಯಾವನಿಗೇ ಆಗಲಿ ಮುಖ ತಪ್ಪಿಸಿಕೊಳ್ಳದಿರುವದು, ಇವುಗಳೇ ನನಗೆ ಇಷ್ಟವಾದ ಉಪವಾಸವ್ರತವಲ್ಲವೇ.


ಆದರೆ ಈ ಒಂದಪ್ಪಣೆಯನ್ನು ಮಾತ್ರ ಕೊಟ್ಟೆನು - ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ.


ಈ ಜನರು ನನ್ನನ್ನು ತೊರೆದು ತಮಗಾಗಲಿ ತಮ್ಮ ಪಿತೃಗಳಿಗಾಗಲಿ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ ಈ ಸ್ಥಳವನ್ನು ಅನ್ಯಸ್ಥಾನವಾಗಿ ಮಾಡಿ


ವ್ಯಾಜ್ಯವನ್ನು ಅನ್ಯಾಯವಾಗಿ ತೀರಿಸುವದು, ಇವುಗಳನ್ನು ಕರ್ತನು ಲಕ್ಷ್ಯಕ್ಕೆ ತಾರನೇ?


ದೀನದರಿದ್ರರನ್ನು ಹಿಂಸಿಸಿ ಜನರ ಸೊತ್ತನ್ನು ಅಪಹರಿಸಿ ಸಾಲಗಾರನ ಒತ್ತೆಯನ್ನು ಬಿಗಿಹಿಡಿದು ವಿಗ್ರಹಗಳ ಕಡೆಗೆ ಕಣ್ಣೆತ್ತಿ ಅಸಹ್ಯಕಾರ್ಯವನ್ನು ಮಾಡಿ


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲಿನ ಪ್ರಭುಗಳೇ, ಇನ್ನು ಸಾಕು, ಸಾಕು; ಕೊಳ್ಳೆಯನ್ನೂ ಬಲಾತ್ಕಾರವನ್ನೂ ತ್ಯಜಿಸಿ ನೀತಿನ್ಯಾಯಗಳನ್ನು ನಡಿಸಿರಿ; ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿರಿ; ಇದು ಕರ್ತನಾದ ಯೆಹೋವನ ನುಡಿ,


ನ್ಯಾಯವು ಹೊಳೆಯ ಹಾಗೆ ಹರಿಯಲಿ, ಧರ್ಮವು ಮಹಾನದಿಯಂತೆ ಪ್ರವಹಿಸಲಿ.


ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪುಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.


ಕುಗ್ಗಿದವರನ್ನೂ ಬಡವರನ್ನೂ ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.


ಮುಟ್ಟಿನ ಹೆಂಗಸನ್ನು ಸೇರದೆ ಯಾರನ್ನೂ ಹಿಂಸಿಸದೆ ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ ಯಾರ ಸೊತ್ತನ್ನೂ ಅಪಹರಿಸದೆ ಹಸಿದವನಿಗೆ ಅನ್ನವಿಕ್ಕಿ ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೇದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೇನಾಧೀಶ್ವರದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದಾನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು