Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:30 - ಕನ್ನಡ ಸತ್ಯವೇದವು J.V. (BSI)

30 ಯೆಹೋವನು ಇಂತೆನ್ನುತ್ತಾನೆ - ಇವನನ್ನು ಮಕ್ಕಳಿಲ್ಲದವನು, ವ್ಯರ್ಥಜನ್ಮದವನು ಎಂದು ಪಟ್ಟಿಯಲ್ಲಿ ಬರೆಯಿರಿ; ಇವನ ಸಂತಾನದಲ್ಲಿ ಇನ್ನು ಮೇಲೆ ಯಾವನೂ ದಾವೀದನ ಸಿಂಹಾಸನದಲ್ಲಿ ಕೂತು ಯೆಹೂದವನ್ನು ಆಳಿ ಬಾಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೆಹೋವನು, “ಇವನನ್ನು ಮಕ್ಕಳಿಲ್ಲದವನು, ವ್ಯರ್ಥಜನ್ಮದವನು ಎಂದು ಪಟ್ಟಿಯಲ್ಲಿ ಬರೆಯಿರಿ; ಇವನ ಸಂತಾನದಲ್ಲಿ ಇನ್ನು ಮೇಲೆ ಯಾರೂ ದಾವೀದನ ಸಿಂಹಾಸನದಲ್ಲಿ ಕುಳಿತು ಯೆಹೂದವನ್ನು ಆಳಿ ಬಾಳನು” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಹೀಗಿದೆ ಸರ್ವೇಶ್ವರನ ನುಡಿ: “ಇವನು ಮಕ್ಕಳನ್ನು ಕಳೆದುಕೊಂಡ ವ್ಯಕ್ತಿ ತನ್ನ ಜನ್ಮವನ್ನು ಸಾರ್ಥಕ ಮಾಡಿಕೊಳ್ಳದ ವ್ಯಕ್ತಿ ಇವನ ಸಂತಾನದಲ್ಲಿ ಇನ್ನು ಯಾವನೂ ದಾವೀದನ ಸಿಂಹಾಸನದಲ್ಲಿ ಕೂರನು, ಜುದೇಯವನ್ನು ಆಳಿ ಬಾಳನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೆಹೋವನು ಹೇಳುವುದೇನೆಂದರೆ: “ಯೆಹೋಯಾಚೀನನು ಮಕ್ಕಳಿಲ್ಲದವನೆಂದು ನೊಂದಾಯಿಸಿರಿ. ಯೆಹೋಯಾಚೀನನು ತನ್ನ ಜೀವನದಲ್ಲಿ ಯಶಸ್ವಿಯಾಗುವುದಿಲ್ಲ. ಅವನ ಮಕ್ಕಳಲ್ಲಿ ಯಾರೂ ದಾವೀದನ ಸಿಂಹಾಸನವನ್ನೇರುವದಿಲ್ಲ. ಅವನ ಮಕ್ಕಳಲ್ಲಿ ಯಾರೂ ಯೆಹೂದದಲ್ಲಿ ರಾಜ್ಯಭಾರ ಮಾಡುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ, ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆಯಿರಿ. ಏಕೆಂದರೆ ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕುಳಿತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:30
11 ತಿಳಿವುಗಳ ಹೋಲಿಕೆ  

ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ - ಇವನ ಸಂತಾನದಲ್ಲಿ ಯಾವನೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ ರಾತ್ರಿಯ ಚಳಿಗೂ ಈಡಾಗುವದು.


ಧರ್ಮಶಾಸ್ತ್ರದ ನೆವನದಿಂದ ಕೇಡುಕಲ್ಪಿಸುವ ನಾಶಕರನ್ಯಾಯಾಸನಕ್ಕೂ ನಿನಗೂ ಸಂಬಂಧವೇನು?


ಏಕಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ; ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.


ಅಲ್ಲಿಂದಲೂ ತಲೆಯ ಮೇಲೆ ಕೈಯಿಟ್ಟುಕೊಂಡು ಹೊರಡುವಿ; ಏಕಂದರೆ ನಿನ್ನ ಭರವಸಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಸಾಗದು.


ದಾವೀದನ ಸಿಂಹಾಸನಾರೂಢನಾದ ಯೆಹೂದದ ಅರಸನೇ, ಯೆಹೋವನ ಮಾತನ್ನು ಕೇಳು; ನಿನ್ನ ಸೇವಕರೂ ಈ ಬಾಗಿಲುಗಳಲ್ಲಿ ಸೇರುವ ನಿನ್ನ ಪ್ರಜೆಗಳೂ ಕೇಳಲಿ.


ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನಗೆ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ.


ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು.


ಅವನಿಗೆ ಸ್ವಜನರಲ್ಲಿ ಮಗನಾಗಲಿ ಮೊಮ್ಮಗನಾಗಲಿ ಇರುವದಿಲ್ಲ, ಅವನು ವಾಸಿಸಿದ ಸ್ಥಳದಲ್ಲಿ ಯಾರೂ ಉಳಿಯುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು