ಯೆರೆಮೀಯ 23:10 - ಕನ್ನಡ ಸತ್ಯವೇದವು J.V. (BSI)10 ಸೀಮೆಯು ಸೂಳೆಗಾರರಿಂದ ತುಂಬಿದೆ, ದೈವಶಾಪದ ನಿವಿುತ್ತ ದೇಶವು ದುಃಖಿಸುತ್ತದೆ; ಅಡವಿಯ ಹುಲ್ಗಾವಲು ಬಾಡಿದೆ; ದೇಶದವರು ತ್ವರೆಪಡುವ ಮಾರ್ಗವು ದುರ್ಮಾರ್ಗ, ಅವರ ಶೌರ್ಯವು ಅನ್ಯಾಯಸಾಧಕ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಸೀಮೆಯು ವ್ಯಭಿಚಾರಿಗಳಿಂದ ತುಂಬಿದೆ, ದೈವಶಾಪದ ನಿಮಿತ್ತ ದೇಶವು ದುಃಖಿಸುತ್ತದೆ. ಅಡವಿಯ ಹುಲ್ಗಾವಲು ಬಾಡಿದೆ; ದೇಶದವರು ತ್ವರೆಪಡುವ ಮಾರ್ಗವು ದುರ್ಮಾರ್ಗ, ಅವನ ಶೌರ್ಯವು ಅನ್ಯಾಯಸಾಧಕ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದೈವಶಾಪದ ನಿಮಿತ್ತ ದೇಶ ದುಃಖಿಸುತ್ತಿದೆ ವ್ಯಭಿಚಾರದಿಂದ ನಾಡು ತುಂಬಿತುಳುಕುತ್ತಿದೆ ಅಡವಿಯ ಹುಲ್ಲುಗಾವಲು ಬಾಡಿದೆ. ನಾಡಿನ ಜನರು ಹಿಡಿದೋಡುತ್ತಿರುವ ಮಾರ್ಗ ದುರ್ಮಾರ್ಗ ಅನ್ಯಾಯ ಸಾಧನೆಗಾಗಿಯೆ ಅವರ ಅಧಿಕಾರ ಪ್ರಯೋಗ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೂದ ದೇಶವು ವ್ಯಭಿಚಾರಿಗಳಿಂದ ತುಂಬಿಹೋಗಿದೆ. ಅವರು ಅನೇಕ ರೀತಿಯಲ್ಲಿ ಅಪನಂಬಿಗಸ್ತರಾಗಿದ್ದಾರೆ. ಯೆಹೋವನು ನಾಡನ್ನು ಶಪಿಸಿದ್ದರಿಂದ ಅದು ಬರಡು ಭೂಮಿಯಾಯಿತು. ಹುಲ್ಲುಗಾವಲಿನ ಸಸಿಗಳು ಒಣಗಿ ಸತ್ತುಹೋಗುತ್ತಲಿವೆ. ಹೊಲಗಳು ಮರುಭೂಮಿಯಂತಾಗಿವೆ. ಪ್ರವಾದಿಗಳು ಸೆರೆ ಒಯ್ಯಲ್ಪಟ್ಟಿದ್ದಾರೆ. ಆ ಪ್ರವಾದಿಗಳು ತಮ್ಮ ಪ್ರಭಾವವನ್ನೂ ಶಕ್ತಿಯನ್ನೂ ತಪ್ಪಾಗಿ ಬಳಸಿಕೊಳ್ಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಏಕೆಂದರೆ ದೇಶವು ವ್ಯಭಿಚಾರಗಳಿಂದ ತುಂಬಿದೆ. ದೇಶವು ಶಾಪದಿಂದ ದುಃಖಿಸುತ್ತದೆ. ಮರುಭೂಮಿಯ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ. ಪ್ರವಾದಿಗಳು ಕೆಟ್ಟ ಮಾರ್ಗವನ್ನು ಅನುಸರಿಸುತ್ತಾರೆ ಮತ್ತು ತಮ್ಮ ಶಕ್ತಿಯನ್ನು ಅನ್ಯಾಯವಾಗಿ ಬಳಸುತ್ತಾರೆ. ಅಧ್ಯಾಯವನ್ನು ನೋಡಿ |