Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:16 - ಕನ್ನಡ ಸತ್ಯವೇದವು J.V. (BSI)

16 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮ್ಮಲ್ಲಿ ವ್ಯರ್ಥನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಹೃದಯಕ್ಕೆ ಹೊಳೆದದ್ದನ್ನೇ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸೇನಾಧೀಶ್ವರನಾದ ಯೆಹೋವನು, “ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಮನಸ್ಸಿಗೆ ಬಂದದ್ದನ್ನೇ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವಶಕ್ತ ಸರ್ವೇಶ್ವರನ ನುಡಿಯಿದು: “ಪ್ರವಾದಿಗಳು ನಿಮಗೆ ಹೇಳುವ ಮಾತುಗಳನ್ನು ಕೇಳಬೇಡಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಂಬಿಕೆ ನಿರೀಕ್ಷೆಯನ್ನು ಹುಟ್ಟಿಸುತ್ತಾರಷ್ಟೆ. ಸರ್ವೇಶ್ವರನ ಬಾಯಿಂದ ಹೊರಟದ್ದನ್ನು ನುಡಿಯದೆ ತಮ್ಮ ಸ್ವಂತ ಮನಸ್ಸಿಗೆ ತೋಚಿದ್ದನ್ನೇ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಪ್ರವಾದಿಗಳು ನಿಮಗೆ ಹೇಳುತ್ತಿರುವ ವಿಷಯಗಳ ಕಡೆಗೆ ಗಮನ ಕೊಡಬೇಡಿರಿ. ಅವರು ನಿಮ್ಮನ್ನು ಮರುಳುಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ದರ್ಶನಗಳ ಬಗ್ಗೆ ಹೇಳುತ್ತಾರೆ. ಅವರ ದರ್ಶನಗಳು ಅವರ ಮನಸ್ಸಿನಿಂದ ಬಂದವುಗಳೇ ಹೊರತು ನನ್ನಿಂದ ಬಂದವುಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿಗೊಡಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ. ಯೆಹೋವ ದೇವರ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನವನ್ನು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:16
26 ತಿಳಿವುಗಳ ಹೋಲಿಕೆ  

ಆಗ ಯೆಹೋವನು ನನಗೆ ಹೀಗೆ ನುಡಿದನು - ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ; ಅವರು ಸುಳ್ಳಾದ ದಿವ್ಯದರ್ಶನವನ್ನೂ ಕಣಿಯನ್ನೂ ಮಾಯಾತಂತ್ರವನ್ನೂ ಸ್ವಕಲ್ಪಿತಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.


ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯುವವರಿಗೆ ಆದ ದರ್ಶನ ವಿುಥ್ಯ, ಕೇಳಿಸಿದ ಕಣಿ ಸುಳ್ಳು; ಯೆಹೋವನು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವದೆಂದು ಸುಮ್ಮ ಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.


ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರ್ರಿ. ಅವರು ಕುರೀವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುತ್ತಾರೆ; ಆದರೆ ಒಳಗೆ ನೋಡಿದರೆ ಅವರು ಹಿಡುಕೊಂಡು ಹೋಗುವ ತೋಳಗಳೇ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖ ಪ್ರವಾದಿಗಳ ಗತಿಯು ಏನೆಂದು ಹೇಳಲಿ!


ಪ್ರಿಯರೇ, ಅನೇಕ ಮಂದಿ ಸುಳ್ಳು ಪ್ರವಾದಿಗಳು ಲೋಕದೊಳಗೆ ಬಂದಿರುವದರಿಂದ ನೀವು ಆತ್ಮದ ಎಲ್ಲಾ ನುಡಿಗಳನ್ನು ನಂಬದೆ ಆಯಾ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು; ನಾನು ಇವರಿಗೆ ಏನೂ ಹೇಳಲಿಲ್ಲ, ತಾವೇ ಪ್ರವಾದಿಸಿದರು.


ಆತನು ತಮ್ಮ ಪಿತೃಗಳಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿ ವಾಕ್ಯಗಳನ್ನೂ ತಿರಸ್ಕರಿಸಿ ವಿುಥ್ಯಾದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು; ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ ಅವರನ್ನು ಅನುಸರಿಸಿದರು;


ಗಾಳಿಯನ್ನೂ ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು - ನಾನು ದ್ರಾಕ್ಷಾರಸಮದ್ಯಗಳ ವಿಷಯವಾಗಿ ನಿನಗೆ ಪ್ರವಾದನೆಮಾಡುವೆನು ಎಂದು ಹೇಳಿದರೆ ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.


ಇವರ ಪಿತೃಗಳು ಬಾಳನನ್ನು ಸೇರಿ ನನ್ನ ಹೆಸರನ್ನು ಮರೆತ ಪ್ರಕಾರ ಈ ಪ್ರವಾದಿಗಳು ಸ್ವಹೃದಯಕಲ್ಪಿತ ಮೋಸವನ್ನು ಪ್ರಕಟಿಸುತ್ತಾ ತಾವು ತಮ್ಮ ನೆರೆಹೊರೆಯವರಿಗೆ ತಿಳಿಸುವ ತಮ್ಮ ಕನಸುಗಳ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸಿಕೊಂಡಿದ್ದಾರಲ್ಲಾ.


ಅಲ್ಲಿನ ಪ್ರವಾದಿಗಳು ಇವರಿಗಾಗಿ ವಿುಥ್ಯಾದರ್ಶನವನ್ನೂ ಸುಳ್ಳು ಕಣಿಯನ್ನೂ ಕಂಡು ಯೆಹೋವನು ಮಾತಾಡದಿದ್ದರೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯುತ್ತಾ ಮೇಲೆ ಮೇಲೆ ಸುಣ್ಣ ಬಳಿದಿದ್ದಾರೆ.


ನೀವು ವಿುಥ್ಯಾದರ್ಶನವನ್ನು ಹೊಂದಿ ಕಣಿಹೇಳುವ ಕೆಲಸವು ಇನ್ನು ನಡಿಯುವದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಇಸ್ರಾಯೇಲಿನ ಪ್ರವಾದಿಗಳೇ, ಕ್ಷೇಮವಿಲ್ಲದಿದ್ದರೂ ಕ್ಷೇಮವಾಗುವದೆಂಬ ದರ್ಶನಗಳನ್ನು ನೀವು ಕಂಡು ಯೆರೂಸಲೇವಿುನ ವಿಷಯವಾಗಿ ಪ್ರವಾದಿಸಿದ್ದೀರಲ್ಲಾ; ಗೋಡೆಯು ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು. ಇದು ಕರ್ತನಾದ ಯೆಹೋವನ ನುಡಿ.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡದಿರಿ;


ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ; ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಟವನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸಮಾಡಿಸಲಿ;


ಯೆಹೋವನು ಹೀಗನ್ನುತ್ತಾನೆ, ನಿಮ್ಮ ಪಿತೃಗಳು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡದರಿಂದ ವ್ಯರ್ಥಾಚಾರವನ್ನು ಅನುಸರಿಸಿ ತಾವೇ ವ್ಯರ್ಥರಾಗಿ ನನ್ನನ್ನು ಬಿಟ್ಟು ದೂರವಾದರು?


ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ ಉಪದೇಶ ಕೇಳುವದನ್ನೇ ಬಿಟ್ಟುಬಿಡು.


ಯಾಕಂದರೆ ದೇವರ ವಿಷಯವಾಗಿ ಅವರಿಗೆ ತಿಳುವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಘನಪಡಿಸಲಿಲ್ಲ; ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ವಿಚಾರ ಮಾಡಿಮಾಡಿ ಫಲ ಕಾಣಲಿಲ್ಲ; ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಯಿತು.


ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟುಹೋದದ್ದು ಏಕೆ? ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು?


ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಸರದಾರರೂ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಧರ್ಮೋಪದೇಶವೇ ಕಾಣೆ; ಅದರ ಪ್ರವಾದಿಗಳಿಗೆ ಕೂಡಾ ಯೆಹೋವನಿಂದ ಯಾವ ದರ್ಶನವೂ ಇಲ್ಲ.


ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ [ಕಟ್ಟಿಕೊಂಡು] ಬಂದು - ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂದನು.


ಆಗ ಇಸ್ರಾಯೇಲ್ಯರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ - ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವರು - ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು.


ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡಿಸಿ ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿ ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ ಎಂಬದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು