Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:20 - ಕನ್ನಡ ಸತ್ಯವೇದವು J.V. (BSI)

20 ಯೆಹೋವನು ತನ್ನ ಹೃದಯಾಲೋಚನೆಗಳನ್ನು ನಡಿಸಿ ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು; ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನು ತನ್ನ ಹೃದಯದ ಆಲೋಚನೆಗಳನ್ನು ಸಾಧಿಸಿ, ನೆರವೇರಿಸುವ ತನಕ ಆತನ ರೋಷವು ತಣ್ಣಗಾಗುವುದಿಲ್ಲ. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರ ತಮ್ಮ ಅಂತರಾಳದ ಸಂಕಲ್ಪಗಳನ್ನು ನಡೆಸಿ ನೆರವೇರಿಸುವ ತನಕ ಅವರ ಆ ಕೋಪವು ಹಿಂದಿರುಗದು. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆತನು ಮಾಡಬೇಕೆಂದು ಯೋಜಿಸಿದ್ದನ್ನು ಮಾಡಿ ಮುಗಿಸುವವರೆಗೆ ಆತನ ಕೋಪವು ಕಡಿಮೆಯಾಗುವುದಿಲ್ಲ. ಆ ದಿನವಾದ ಮೇಲೆ ನೀವು ಇದನ್ನು ಸರಿಯಾಗಿ ಅರ್ಥಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆತನು ತನ್ನ ಹೃದಯದ ಆಲೋಚನೆಗಳನ್ನು ನಡೆಸಿ ತೀರಿಸುವವರೆಗೂ ಯೆಹೋವ ದೇವರ ಕೋಪವು ತಿರುಗುವುದಿಲ್ಲ. ಅಂತ್ಯ ದಿವಸಗಳಲ್ಲಿ ನೀವು ಅದನ್ನು ಸಂಪೂರ್ಣವಾಗಿ ಗ್ರಹಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:20
18 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಹೃದಯಾಲೋಚನೆಯನ್ನು ನಡಿಸಿ ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು; ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.


ಹಾಗೆಯೇ ನನ್ನ ಬಾಯಿಂದ ಹೊರಟ ಮಾತು ನನ್ನ ಇಷ್ಟಾರ್ಥವನ್ನು ನೆರವೇರಿಸಿ ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವದಿಲ್ಲ.


ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ವಿಧಿಗಳೂ ನಿಮ್ಮ ಪಿತೃಗಳನ್ನು ಹಿಂದಟ್ಟಿ ಹಿಡಿದು ನಿತ್ಯವಾಗಿವೆಯಷ್ಟೆ; ಅವರು ತಿರುಗಿಕೊಂಡು - ಸೇನಾಧೀಶ್ವರ ಯೆಹೋವನು ನಮ್ಮ ದುರ್ಮಾರ್ಗ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ ಅಂದುಕೊಂಡರು.


ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವದೇನಂದರೆ - ನಾನು ಸಂಕಲ್ಪಿಸಿದ್ದೇ ನೆರವೇರುವದು, ಉದ್ದೇಶಿಸಿದ್ದೇ ನಿಲ್ಲುವದು, ಖಂಡಿತ.


ಯಾವ ಜ್ಞಾನವೂ ಯಾವ ವಿವೇಕವೂ ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವದಿಲ್ಲ.


ಯಾಕೋಬನು ತನ್ನ ಮಕ್ಕಳನ್ನು ಕರಸಿ - ನೀವೆಲ್ಲರೂ ಕೂ ಡಿಬನ್ನಿರಿ; ಮುಂದಿನ ಕಾಲದಲ್ಲಿ ನಿಮಗೆ ಸಂಭವಿಸುವದನ್ನು ತಿಳಿಸುತ್ತೇನೆ.


ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ.


ತಾವು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು


ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.


ಆತನು - ಇಸ್ರಾಯೇಲ್ಯರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು; ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣವನ್ನೂ ನನ್ನ ನಾಮಮಹತ್ತಿಗೋಸ್ಕರ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು ಎಂದು ಹೇಳಿದನು.


ಇದಕ್ಕಾಗಿ ಭೂಲೋಕವು ಪ್ರಲಾಪಿಸುವದು, ಮೇಲೆ ಆಕಾಶವು ಕಪ್ಪಾಗುವದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಉದ್ದೇಶಿಸಿದ್ದೇನೆ, ಹಿಂದೆಗೆಯೆನು.


ಬಾಬೆಲ್ ಕೋಟೆಗೆ ಎದುರಾಗಿ ಧ್ವಜವೆತ್ತಿರಿ, ಠಾಣ್ಯವನ್ನು ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ; ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ಚಿತ್ತಕ್ಕೆ ತಂದು ನೆರವೇರಿಸಿದ್ದಾನೆ.


ಆಗ ಯೆಹೋವನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹಿರಿದಿದ್ದೇನೆ ಎಂಬದು ಎಲ್ಲಾ ನರಮನುಷ್ಯರಿಗೂ ಗೊತ್ತಾಗುವದು; ಅದು ಪುನಃ ಒರೆಗೆ ಸೇರದು.


ಸಂಹರಿಸುವಂತೆ ಸಾಣೆಹಿಡಿದಿದೆ, ವಿುಂಚುವಂತೆ ತಿಕ್ಕಿದೆ. ನಮ್ಮ ಕುಮಾರನ ರಾಜದಂಡವು ವಿುಕ್ಕ ಎಲ್ಲಾ ದಂಡಗಳನ್ನು ತಿರಸ್ಕರಿಸುತ್ತದಲ್ಲಾ ಎಂಬದಾಗಿ ನಾವು ಸಂಭ್ರಮಪಡಬಹುದೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು