Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:27 - ಕನ್ನಡ ಸತ್ಯವೇದವು J.V. (BSI)

27 ಇಂಥಾ ಯೋಚನೆಯು ಸುಳ್ಳಾಗಿ ಪ್ರವಾದಿಸುವ ಈ ಪ್ರವಾದಿಗಳ ಹೃದಯದಲ್ಲಿ ಎಂದಿನವರೆಗೆ ಇರುವದು? ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇಂಥಾ ಯೋಚನೆಯು ಸುಳ್ಳಾಗಿ ಪ್ರವಾದಿಸುವ ಈ ಪ್ರವಾದಿಗಳ ಹೃದಯದಲ್ಲಿ ಎಂದಿನವರೆಗೆ ಇರುವುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇಂಥ ಯೋಚನೆ ಈ ಕಳ್ಳ ಪ್ರವಾದಿಗಳ ಮನದಲ್ಲಿ ಎಲ್ಲಿಯವರೆಗೆ ಇರುವುದು? ಕನಸು ಕಂಡ ಪ್ರವಾದಿ ತನ್ನ ಕನಸನ್ನು ಬೇಕಾದರೆ ತಿಳಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೂದದ ಜನರು ನನ್ನ ಹೆಸರನ್ನು ಮರೆಯುವಂತೆ ಅವರು ಪ್ರಯತ್ನ ಮಾಡುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು ಈ ಸುಳ್ಳು ಕನಸುಗಳ ಬಗ್ಗೆ ಹೇಳಿ ಹೀಗೆ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತಂತೆಯೇ ನನ್ನ ಜನರು ಸಹ ನನ್ನನ್ನು ಮರೆಯಲೆಂದು ಪ್ರಯತ್ನ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತು ಸುಳ್ಳುದೇವರಾದ ಬಾಳನನ್ನು ಪೂಜಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವರ ಪಿತೃಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ, ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತುಬಿಡುವಂತೆ ಮಾಡುವುದಕ್ಕೆ ಯೋಚಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:27
14 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.


ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯು ಕ್ರಿಸ್ತನನ್ನು ನಂಬದ ಹಾಗೆ ಪ್ರಯತ್ನಿಸಿದನು. ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದೇ ಅರ್ಥ.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡದಿರಿ;


ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಾನಗಳನ್ನು ತಿರಿಗಿ ಸ್ಥಾಪಿಸಿ ಇಸ್ರಾಯೇಲ್ಯರ ಅರಸನಾದ ಅಹಾಬನಂತೆ ಬಾಳನಿಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.


ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸಹತ್ತಿ ಯೆಹೋವನನ್ನು ಬಿಟ್ಟೇ ಬಿಟ್ಟರು.


ಸ್ವಂತ ಹೃದಯದ ಹಟದಂತೆ ನಡೆದು ತಮ್ಮ ಪಿತೃಗಳು ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದ್ದರಿಂದ


ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞಾವಿಧಿನಿರ್ಣಯಗಳನ್ನು ಕೈಕೊಳ್ಳದವರೂ ಆತನನ್ನು ಮರೆಯುವವರೂ ಆಗಬೇಡಿರಿ, ನೋಡಿರಿ.


ಒಂದು ವೇಳೆ ನೀವು ಮದಿಸಿ ನಿಮ್ಮ ದೇವರಾದ ಯೆಹೋವನನ್ನು ಮರೆತೀರಿ.


ಆದದರಿಂದ ನಿಮ್ಮ ದೇವರಾದ ಯೆಹೋವನೇ ತಾನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ.


ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು