Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:32 - ಕನ್ನಡ ಸತ್ಯವೇದವು J.V. (BSI)

32 ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ ಕೊಚ್ಚಾಟದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ; ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವದಿಲ್ಲ. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಸುಳ್ಳು ಕನಸುಗಳನ್ನು ಪ್ರಕಟಿಸುತ್ತಾ ಹಾಗು ವಿವರಿಸುತ್ತಾ ತಮ್ಮ ಅಬದ್ಧ ಮಾತುಗಳಿಂದಲೂ ಕಚ್ಚಾಟದಿಂದಲೂ ನನ್ನ ಜನರಿಗೆ ದಾರಿ ತಪ್ಪಿಸುವ ಪ್ರವಾದಿಗಳನ್ನು ನಾನು ಖಂಡಿಸುತ್ತೇನೆ. ನಾನು ಅವರನ್ನು ಕಳುಹಿಸಲಿಲ್ಲ, ಅಥವಾ ಅವರಿಗೆ ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಇಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನಾನು ಕಾಲ್ಪನಿಕ ಕನಸುಗಳನ್ನು ಬೋಧಿಸುವ ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಬೋಧನೆಗಳಿಂದ ನನ್ನ ಜನರನ್ನು ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನ್ನು ಕಳುಹಿಸಿಲ್ಲ. ನನಗೋಸ್ಕರವಾಗಿ ಏನನ್ನಾದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸ್ವಲ್ಪವೂ ಸಹಾಯವನ್ನು ಮಾಡಲಾರರು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಸುಳ್ಳಿನ ಕನಸುಗಳನ್ನು ಪ್ರವಾದಿಸಿ, ತಮ್ಮ ಸುಳ್ಳುಗಳಿಂದಲೂ ತಮ್ಮ ನಿರರ್ಥಕವಾದ ವಿಚಾರಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆ ಕೊಡಲಿಲ್ಲ. ಆದ್ದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವುದೇ ಇಲ್ಲ,” ಎಂದು ಯೆಹೋವ ದೇವರು ನುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:32
24 ತಿಳಿವುಗಳ ಹೋಲಿಕೆ  

ಅದರ ಪ್ರವಾದಿಗಳು ಬಡಾಯಿಗಾರರು, ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲೆಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ.


ನಿನ್ನ ಪ್ರವಾದಿಗಳು ಕಂಡುಹೇಳಿದ ಕಣಿಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವದಕ್ಕೆ ಆಸ್ಪದವಾದವು.


ಆಹಾ, ನೀವು ನಿಷ್ಪ್ರಯೋಜನವಾದ ಸುಳ್ಳುಮಾತುಗಳಲ್ಲಿ ಭರವಸವಿಟ್ಟಿದ್ದೀರಿ.


ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ನಮಸ್ಕರಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲ್ಪಟ್ಟರು;


ಅವರ ಮಾತನ್ನು ಬಿಡಿರಿ; ತಾವೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸುವದಕ್ಕೆ ಹೋಗುತ್ತಾರೆ; ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಕುಣಿಯಲ್ಲಿ ಬೀಳುವರು ಅಂದನು.


ಸೆರೆಯವರೆಲ್ಲರಿಗೆ ಹೀಗೆ ಹೇಳಿ ಕಳುಹಿಸು - ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ - ನಾನು ಕಳುಹಿಸದೆ ಹೋದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳಿನಲ್ಲಿ ನಂಬಿಕೆಯನ್ನು ಹುಟ್ಟಿಸಿದ ಕಾರಣ


ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮ್ಮಲ್ಲಿ ವ್ಯರ್ಥನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಹೃದಯಕ್ಕೆ ಹೊಳೆದದ್ದನ್ನೇ ಹೇಳುತ್ತಾರೆ.


ನನ್ನ ಜನರನ್ನೋ ಬಾಧಿಸುವವರು ಹುಡುಗರು, ಆಳುವವರು ಹೆಂಗಸರು. ನನ್ನ ಜನರೇ! ನಿಮ್ಮನ್ನು ನಡಿಸುವವರು ದಾರಿತಪ್ಪಿಸುವವರಾಗಿದ್ದಾರೆ, ನೀವು ನಡೆಯತಕ್ಕ ದಾರಿಯನ್ನು ಅಳಿಸಿಬಿಟ್ಟಿದ್ದಾರೆ.


ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.


ಇದನ್ನು ಯೋಚಿಸಿದಾಗ ಚಪಲಚಿತ್ತನಾಗಿದ್ದೆನೋ? ನಾನು ಯೋಚಿಸುವದನ್ನು ಕೇವಲ ಮಾನುಷಬುದ್ಧಿಯಿಂದ ಯೋಚಿಸಿ ಹೌದು ಹೌದು ಅಂದ ಮೇಲೆ ಅಲ್ಲ ಅಲ್ಲ ಅನ್ನುವವನಾಗಿದ್ದೇನೋ?


ನೀವಾದರೋ ಸುಳ್ಳನ್ನು ಮೆತ್ತುವವರಾಗಿದ್ದೀರಿ, ನೀವೆಲ್ಲರೂ ವ್ಯರ್ಥವೈದ್ಯರೇ.


(ಘನಹೊಂದಿದ ಹಿರಿಯನೇ ತಲೆ; ಸುಳ್ಳುಬೋಧನೆ ಮಾಡುವ ಪ್ರವಾದಿಯೇ ಬಾಲ).


ನಾನು ಸಮಾರ್ಯದ ಪ್ರವಾದಿಗಳಲ್ಲಿ ಅಯುಕ್ತವನ್ನು ನೋಡಿದ್ದೇನೆ; ಅವರು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಇಸ್ರಾಯೇಲೆಂಬ ನನ್ನ ಜನರನ್ನು ಮಾರ್ಗತಪ್ಪಿಸಿದ್ದಾರೆ.


ಆಹಾ, ತಮ್ಮ ನಾಲಿಗೆಗಳನ್ನು ಚಾಚಿ ಯೆಹೋವನು ನುಡಿಯುತ್ತಾನೆ ಎಂದು ಹೇಳುವ ಪ್ರವಾದಿಗಳಿಗೆ ನಾನು ಪ್ರತಿಭಟಿಸುವವನಾಗಿದ್ದೇನೆ. ಇದು ಯೆಹೋವನ ನುಡಿ.


ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?


ವಿಗ್ರಹಗಳು ನುಡಿಯುವದು ಜೊಳ್ಳು; ಕಣಿಯವರು ಕಾಣುವದು ಸುಳ್ಳು, ತಿಳಿಸುವ ಕನಸುಗಳು ಕಲ್ಪಿತ, ಹೇಳುವ ಸಮಾಧಾನವು ವ್ಯರ್ಥ, ಆದದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು