ಯೆರೆಮೀಯ 23:36 - ಕನ್ನಡ ಸತ್ಯವೇದವು J.V. (BSI)36 ಯೆಹೋವನ ಭಾರ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಭಾರವಾಗಿರುವದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆಕೆಳಗು ಮಾಡಿದ್ದೀರಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಎಂದು ಕೇಳಬೇಕೇ ಹೊರತು ಯೆಹೋವನ ಹೊರೆ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಹೊರೆಯಾಗಿರುವುದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆ ಕೆಳಗೆ ಮಾಡಿದ್ದೀರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ‘ಸರ್ವೇಶ್ವರನ ಹೊರೆ’ ಎಂಬ ಮಾತನ್ನು ಎತ್ತಲೇಕೂಡದು. ಪ್ರತಿಯೊಬ್ಬನ ನುಡಿ ಅವನವನಿಗೊಂದು ಹೊರೆ. ಜೀವಸ್ವರೂಪರಾದ ದೇವರ ನುಡಿಗಳನ್ನು ಹೌದು, ನಮ್ಮ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ನುಡಿಗಳನ್ನು ನೀವು ತಲೆಕೆಳಗಾಗಿಸಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ನೀವು ಪುನಃ ಎಂದಿಗೂ ‘ಯೆಹೋವನ ಭಾರ’ ಎಂಬ ಮಾತನ್ನು ಉಪಯೋಗಿಸಕೂಡದು. ಏಕೆಂದರೆ ಯೆಹೋವನ ಸಂದೇಶವು ಯಾರಿಗೂ ಭಾರವಾಗಬೇಕಾಗಿಲ್ಲ. ಆದರೆ ನೀವು ನಿಮ್ಮ ದೇವರ ಮಾತುಗಳನ್ನು ತಲೆಕೆಳಗೆ ಮಾಡಿದ್ದೀರಿ. ಆತನು ಸರ್ವಶಕ್ತನಾಗಿದ್ದಾನೆ ಮತ್ತು ಜೀವಸ್ವರೂಪನಾದ ದೇವರಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ‘ಯೆಹೋವ ದೇವರ ಹೊರೆ,’ ಎಂಬ ಮಾತನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿ ಅವನವನಿಗೆ ಹೊರೆ. ಜೀವಸ್ವರೂಪನಾದ ದೇವರ ನುಡಿಗಳನ್ನು ಹೌದು, ನಮ್ಮ ದೇವರೂ ಸೇನಾಧೀಶ್ವರ ಯೆಹೋವ ದೇವರ ನುಡಿಗಳನ್ನು ನೀವು ತಲೆಕೆಳಗಾಗಿಸಿದ್ದೀರಿ. ಅಧ್ಯಾಯವನ್ನು ನೋಡಿ |
ಜೀವಸ್ವರೂಪನಾದ ದೇವರನ್ನು ದೂಷಿಸುವದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿನ್ನ ದೇವರಾದ ಯೆಹೋವನು ಕೇಳಿರುವನು; ನಿನ್ನ ದೇವರಾದ ಯೆಹೋವನು ತಾನು ಹೇಳಿದ ವಾಕ್ಯಗಳ ನಿವಿುತ್ತ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿರಿ ಎಂಬದೇ.