Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:4 - ಕನ್ನಡ ಸತ್ಯವೇದವು J.V. (BSI)

4 ನಾನು ಅವುಗಳ ಮೇಲೆ ಕುರುಬರನ್ನು ನೇವಿುಸುವೆನು, ಅವರು ಅವುಗಳನ್ನು ಮೇಯಿಸುವರು; ಅವು ಇನ್ನು ಭಯಪಡವು, ಬೆದರವು, ಅವುಗಳಲ್ಲಿ ಒಂದೂ ಕಡಿಮೆಯಾಗದು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಅವುಗಳ ಮೇಲೆ ಕುರುಬರನ್ನು ನೇಮಿಸುವೆನು, ಅವರು ಅವುಗಳನ್ನು ಮೇಯಿಸುವರು. ಅವು ಇನ್ನು ಕಳವಳಗೊಳ್ಳುವುದಿಲ್ಲ, ಭಯಪಡುವುದಿಲ್ಲ ಮತ್ತು ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ; ಇದು ಯೆಹೋವನ ನುಡಿ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾನು ಅವುಗಳ ಮೇಲೆ ಕುರಿಗಾಹಿಗಳನ್ನು ನೇಮಿಸುವೆನು. ಅವರು ಅವುಗಳನ್ನು ಪರಿಪಾಲಿಸುವರು. ಅವು ಇನ್ನು ಹೆದರಬೇಕಾಗಿಲ್ಲ, ಬೆದರಬೇಕಾಗಿಲ್ಲ. ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ಕುರಿಗಳನ್ನು ನೋಡಿಕೊಳ್ಳುವದಕ್ಕೆ ನಾನು ಹೊಸ ಕುರುಬರನ್ನು ನೇಮಿಸುವೆನು. ಆ ಕುರುಬರು ನನ್ನ ಕುರಿಗಳ ಯೋಗಕ್ಷೇಮವನ್ನು ನೋಡಿಕೊಳ್ಳುವರು. ನನ್ನ ಕುರಿಗಳು ಬೆದರುವದಿಲ್ಲ, ಭಯಪಡುವದಿಲ್ಲ. ನನ್ನ ಒಂದು ಕುರಿಯೂ ಕಳೆದುಹೋಗುವದಿಲ್ಲ.” ಇದು ಯೆಹೋವನ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ. ಅವರು ಇನ್ನು ಮೇಲೆ ಭಯಪಡುವುದೇ ಇಲ್ಲ, ಅಂಜುವುದಿಲ್ಲ, ಕೊರತೆ ಪಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:4
25 ತಿಳಿವುಗಳ ಹೋಲಿಕೆ  

ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.


ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳಕೊಳ್ಳಲಿಲ್ಲವೆಂದು ಆತನು ಹೇಳಿದ ಮಾತು ಹೀಗೆ ನೆರವೇರಿತು.


ನಾನು ಇವರ ಸಂಗಡ ಇದ್ದಾಗ ನೀನು ನನಗೆ ಕೊಟ್ಟಿರುವ ನಿನ್ನ ಹೆಸರಿನಲ್ಲಿ ಇವರನ್ನು ಕಾಯುತ್ತಾ ಬಂದೆನು, ಇವರನ್ನು ಕಾಪಾಡಿದೆನು; ಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕೆ ಗುರಿಯಾದ ಆ ಮನುಷ್ಯನೇ ಹೊರತು ಇವರಲ್ಲಿ ಮತ್ತಾರೂ ನಾಶವಾಗಲಿಲ್ಲ.


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು; ಆತನ ಹೊರಡೋಣದ ಮೂಲವು ಪುರಾತನವೂ ಅನಾದಿಯೂ ಆದದ್ದು.


ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೇನು. ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.


ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ, ದೂರದ್ವೀಪಗಳಲ್ಲಿ ಸಾರಿರಿ! ಇಸ್ರಾಯೇಲ್ಯರನ್ನು ಚದರಿಸಿದಾತನು ಕುರುಬನು ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು ಎಂದು ಪ್ರಕಟಿಸಿರಿ.


ಯೆಹೋವನು ಇಂತೆನ್ನುತ್ತಾನೆ - ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ ಹಾಯಾಗಿಯೂ ಇರುವದು;


ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು.


ನಿನ್ನ ದಾಸರಾದ ನಾವು ನಮ್ಮ ಅಧಿಕಾರದೊಳಗೆ ಇದ್ದ ಭಟರನ್ನು ಲೆಕ್ಕಿಸಲಾಗಿ ಒಬ್ಬನಾದರೂ ಕಡಿಮೆಯಾಗಿಲ್ಲವೆಂದು ಗೊತ್ತಾಯಿತು.


ಫಲವತ್ತಾದ ಭೂವಿುಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವಾಸ್ತ್ಯವಾದ ಹಿಂಡನ್ನು ನಿನ್ನ ಕೋಲಿನಿಂದ ಮೇಯಿಸು; ಪೂರ್ವಕಾಲದಂತೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.


ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸಿ ನಿಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


ನಿಮ್ಮಲ್ಲಿ ಬಹುಜನರನ್ನೂ ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವದು.


ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷಾಲತೆ, ಅಂಜೂರಗಿಡ, ಇವುಗಳ ನೆರಳಿನಲ್ಲಿ ಕೂತುಕೊಳ್ಳುವನು; ಅವರನ್ನು ಯಾರೂ ಹೆದರಿಸರು; ಸೇನಾಧೀಶ್ವರನಾದ ಯೆಹೋವನ ಬಾಯೇ ಇದನ್ನು ನುಡಿದಿದೆ.


ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; [ಮಂದೆಯಂತೆ] ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು