Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:6 - ಕನ್ನಡ ಸತ್ಯವೇದವು J.V. (BSI)

6 ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲ್ಯರು ನೆಮ್ಮದಿಯಾಗಿ ವಾಸಿಸುವರು; ಯೆಹೋವ ಚಿದ್ಕೇನು [ಅಂದರೆ ಯೆಹೋವನೇ ನಮ್ಮ ಸದ್ಧರ್ಮ] ಎಂಬ ಹೆಸರು ಅವನಿಗಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸದ್ಧರ್ಮದ ‘ಸಸಿಯ’ ಸಮಯದಲ್ಲಿ ಯೆಹೂದದ ಜನರು ರಕ್ಷಿಸಲ್ಪಡುವರು ಮತ್ತು ಇಸ್ರೇಲ್ ಸುರಕ್ಷಿತವಾಗಿರುವುದು. ಯೆಹೋವನೇ, ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:6
50 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು, ಯೆರೂಸಲೇವಿುನವರು ನೆಮ್ಮದಿಯಾಗಿ ವಾಸಿಸುವರು; ಯೆಹೋವ ಚಿದ್ಕೇನು [ಅಂದರೆ ಯೆಹೋವನೇ ನಮ್ಮ ಸದ್ಧರ್ಮ] ಎಂಬ ಹೆಸರು ಈ ಪಟ್ಟಣಕ್ಕೆ ಸಲ್ಲುವದು.


ಇದರಲ್ಲಿ ನನ್ನ ಉದ್ದೇಶವೇನಂದರೆ - ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ನೇಮನಿಷ್ಠೆಗಳ ಫಲವಾಗಿರುವ ಸ್ವನೀತಿಯನ್ನಾಶ್ರಯಿಸದೆ ಕ್ರಿಸ್ತನನ್ನು ನಂಬುವದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿ ಕಾಣಿಸಿಕೊಳ್ಳಬೇಕೆಂಬದೇ.


ದೇವರಿಂದಾಗುವ ಆ ನೀತಿಯು ಯಾವದಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ ನಂಬುವವರೆಲ್ಲರಿಗೆ ದೊರಕುವಂಥದು. ಹೆಚ್ಚುಕಡಿಮೆ ಏನೂ ಇಲ್ಲ.


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಇಗೋ, ನಾನು ಕೋಪರೋಷ ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಯೆಹೋವನು ಇಂತೆನ್ನುತ್ತಾನೆ - ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ ಹಾಯಾಗಿಯೂ ಇರುವದು;


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


ಇದರಿಂದ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟದ್ದು ಇಲ್ಲದಂತಾಗುವದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸುವೆನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನೀವೆಲ್ಲರು ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿಗೆ ಕರೆಯುವಿರಿ.


ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; [ಮಂದೆಯಂತೆ] ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.


ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವಿನ ಪರ್ವತವನ್ನು ಆಳುವರು; ಆಗ ರಾಜ್ಯವು ಯೆಹೋವನದಾಗಿರುವದು.


ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು; ಆ ಪರ್ವತವು ಮೀಸಲಾಗಿರುವದು; ಯಾಕೋಬನ ವಂಶದವರು ತಮ್ಮ ಸ್ವಾಸ್ತ್ಯಗಳನ್ನು ಅನುಭವಿಸುವರು.


ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ ಆಕಾಶಪಕ್ಷಿಗಳಿಗೂ ನೆಲದ ಕ್ರಿವಿುಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲುಕತ್ತಿಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು; ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತ, ಈ ಮೂಲಕದಿಂದಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು ಅಂದನು.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ ಎಂದು ಯೆಹೋವನು ಅನ್ನುತ್ತಾನೆ.


ಸಿಂಹವು ಅಲ್ಲಿರದು, ಕ್ರೂರ ಜಂತು ಅಲ್ಲಿ ಸೇರದು, ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು;


ಇಸ್ರಾಯೇಲಿಗೋ ಯೆಹೋವನಿಂದ ಶಾಶ್ವತರಕ್ಷಣೆ ದೊರೆಯುವದು; ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವದಿಲ್ಲ, ಮಾನಭಂಗಪಡುವದಿಲ್ಲ.


ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಧರ್ಮವಿಧಾಯಕ, ಯೆಹೋವನು ನಮ್ಮ ರಾಜ; ಆತನೇ ನಮ್ಮನ್ನು ರಕ್ಷಿಸುವನು.


ಆತನು ದೇಶದೇಶಗಳ ವ್ಯಾಜ್ಯಗಳನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ [ಆಯುಧಗಳನ್ನು] ಕುಲುಮೆಗೆ ಹಾಕಿ ಕತ್ತಿಗಳನ್ನು ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು; ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು, ಇನ್ನು ಯುದ್ಧಾಭ್ಯಾಸವು ನಡೆಯುವದೇ ಇಲ್ಲ.


ಸೊಲೊಮೋನನ ಆಳಿಕೆಯಲ್ಲೆಲ್ಲಾ ದಾನ್‍ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲ್ಯರೂ ಯೆಹೂದ್ಯರೂ ತಮ್ಮತಮ್ಮ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ವಾಸಿಸುತ್ತಾ ಸುರಕ್ಷಿತರಾಗಿದ್ದರು.


ನೀನು ಕುರುಡರಿಗೆ ಕಣ್ಣುಕೊಟ್ಟು ಬಂದಿಗಳನ್ನು ಸೆರೆಯಿಂದಲೂ ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ಕರತರಬೇಕು ಎಂದು


ಇವರಿಗೆ ಗತಿಯಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.


ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಿಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿನ್ಯಾಯಗಳನ್ನು ನಿರ್ವಹಿಸುವನು.


ನಾನು ದೊಬ್ಬಿಬಿಡುವೆನು, ದೊಬ್ಬಿಬಿಡುವೆನು, ದೊಬ್ಬಿಬಿಡುವೆನು; [ರಾಜ್ಯಕ್ಕೆ] ಬಾಧ್ಯನು ಬರುವದರೊಳಗೆ ಒಂದೂ ಇದ್ದಂತಿರದು; ಅವನಿಗೇ ರಾಜ್ಯವನ್ನು ವಹಿಸುವೆನು.


ಅಲ್ಲಿ ನಿರ್ಭಯವಾಗಿರುವರು, ಮನೆಗಳನ್ನು ಕಟ್ಟಿಕೊಂಡು ತೋಟಗಳನ್ನು ಮಾಡಿಕೊಂಡು ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರಿಗೆ ನಾನು ದಂಡನೆಮಾಡಿದ ಮೇಲೆ ನಾನೇ ತಮ್ಮ ದೇವರಾದ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವದು.


ಹೀಗಿರಲು, ನರಪುತ್ರನೇ, ನೀನು ಗೋಗನಿಗೆ ಈ ದೈವೋಕ್ತಿಯನ್ನು ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜನರಾದ ಇಸ್ರಾಯೇಲ್ಯರು ನೆಮ್ಮದಿಯಾಗಿ ವಾಸಿಸುವ ಕಾಲದಲ್ಲಿ ಆ ನೆಮ್ಮದಿಯು ನಿನಗೆ ಗೊತ್ತಾಗುವದಲ್ಲವೆ.


ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳ; ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ಯೆಹೋವನ ನೆಲೆ ಎಂಬ ಹೆಸರಾಗುವದು.


ಕರ್ತನೇ, ನೀನು ಧರ್ಮಸ್ವರೂಪ, ನಾವೋ ನಾಚಿಕೆಗೀಡಾದವರು; ಹೌದು, ಈಗಲೇ ಯೆಹೂದ್ಯರೂ ಯೆರೂಸಲೇವಿುನ ನಿವಾಸಿಗಳೂ ನಿನಗೆ ವಿರುದ್ಧವಾಗಿ ಮಾಡಿದ ದ್ರೋಹದ ನಿವಿುತ್ತ ನಿನ್ನಿಂದ ದೇಶದೇಶಗಳಿಗೆ ತಳ್ಳಲ್ಪಟ್ಟು ದೂರದಲ್ಲಿಯೂ ಸಮೀಪದಲ್ಲಿಯೂ ಚದರಿರುವ ಎಲ್ಲಾ ಇಸ್ರಾಯೇಲ್ಯರೂ ನಾಚಿಕೆಗೆ ಈಡಾಗಿದ್ದಾರೆ.


ಯೆಹೂದ್ಯರೂ ಇಸ್ರಾಯೇಲ್ಯರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು.


ಇಸ್ರಾಯೇಲ್ಯರು ಇದ್ದ ಗೋಷೆನ್ ಸೀಮೆಯಲ್ಲಿ ಮಾತ್ರ ಕಲ್ಲಿನ ಮಳೆ ಬೀಳಲಿಲ್ಲ.


ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು; ಅವು ರಾಜವಿರೋಧಿಗಳ ಎದೆಯನ್ನು ಭೇದಿಸುವವು; ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು.


ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.


ನನ್ನ ಜನರು ಸಮಾಧಾನನಿವಾಸದಲ್ಲಿಯೂ ನಿರ್ಭಯನಿಲಯಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.


ಯೆಹೋವನು ಉನ್ನತೋನ್ನತನಾಗಿದ್ದಾನೆ; ಮೇಲಿನ ಲೋಕದಲ್ಲಿ ವಾಸಿಸುತ್ತಾನಷ್ಟೆ; ಚೀಯೋನನ್ನು ನೀತಿನ್ಯಾಯಗಳಿಂದ ತುಂಬಿಸಿದ್ದಾನೆ.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅವರ ಪಟ್ಟಣಗಳಲ್ಲಿಯೂ - ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ ಎಂದು ಮತ್ತೆ ಮಾತಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು