ಯೆರೆಮೀಯ 24:8 - ಕನ್ನಡ ಸತ್ಯವೇದವು J.V. (BSI)8 ಇದಲ್ಲದೆ ಯೆಹೋವನು ಇಂತೆನ್ನುತ್ತಾನೆ - ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇವಿುನವರ ಶೇಷ, ಐಗುಪ್ತದೇಶಕ್ಕೆ ವಲಸೆಯಾದವರು, ಇವರೆಲ್ಲರನ್ನು ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ತರುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದಲ್ಲದೆ ಯೆಹೋವನು, “ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇಮಿನವರ ಶೇಷ, ಐಗುಪ್ತ ದೇಶಕ್ಕೆ ವಲಸೆಯಾದವರು, ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಇವರನ್ನು ತರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಇದಲ್ಲದೆ ಸರ್ವೇಶ್ವರನಾದ ನಾನು ಹೇಳುವುದು ಇದು: ಜುದೇಯದ ಅರಸ ಚಿದ್ಕೀಯನು, ಅವನ ಪ್ರಧಾನಿಗಳು, ಜೆರುಸಲೇಮಿನ ಜನರು ಶೇಷವಾಗಿ ಈ ನಾಡಿನಲ್ಲೆ ಉಳಿದವರು ಮತ್ತು ಈಜಿಪ್ಟ್ ದೇಶಕ್ಕೆ ವಲಸೆಹೋದವರು - ಇವರೆಲ್ಲರು ಕೆಟ್ಟು ಯಾರೂ ತಿನ್ನಲಾಗದಷ್ಟು ಅಸಹ್ಯವಾದ ಅಂಜೂರದ ಹಣ್ಣುಗಳಂಥವರು. ಅವರನ್ನು ಅಂಥ ಗತಿಗೆ ಇಳಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಆದರೆ ಯೆಹೂದದ ರಾಜನಾದ ಚಿದ್ಕೀಯನು ತಿನ್ನಲು ಬಾರದಷ್ಟು ಕೊಳೆತ ಅಂಜೂರದಂತಾಗುವನು. ಚಿದ್ಕೀಯನೂ ಅವನ ಹಿರಿಯ ಅಧಿಕಾರಿಗಳೂ ಜೆರುಸಲೇಮಿನಲ್ಲಿ ಅಳಿದುಳಿದ ಜನರೂ ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದದ ಜನರೂ ಕೊಳೆತ ಅಂಜೂರದಂತಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ ‘ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ, ಈಜಿಪ್ಟ್ ದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |