ಯೆರೆಮೀಯ 24:9 - ಕನ್ನಡ ಸತ್ಯವೇದವು J.V. (BSI)9 ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವರ ಕೇಡಿಗಾಗಿ ನಾನು ಅವರನ್ನು ಜಗದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗುವ ಸ್ಥಳಗಳಲ್ಲೆಲ್ಲ ಅವರು ಕಟ್ಟುಗಾದೆಗೆ, ನಿಂದೆ ಪರಿಹಾಸ್ಯಕ್ಕೆ, ಶಾಪತಾಪಕ್ಕೆ ಗುರಿಯಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾನು ಆ ಜನರನ್ನು ದಂಡಿಸುವೆನು. ಆ ಶಿಕ್ಷೆಯು ಭೂಲೋಕದ ಎಲ್ಲಾ ಜನರಲ್ಲಿ ಭೀತಿಯನ್ನು ಉಂಟು ಮಾಡುವುದು. ಜನರು ಯೆಹೂದದ ಜನರನ್ನು ಗೇಲಿಮಾಡುವರು. ನಾನು ಅವರನ್ನು ತಳ್ಳಿದ ಎಲ್ಲಾ ದೇಶಗಳಲ್ಲಿ ಜನರು ಅವರ ಬಗ್ಗೆ ಪರಿಹಾಸ್ಯದ ಮಾತುಗಳನ್ನು ಆಡುವರು; ಅವರನ್ನು ಶಪಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ‘ನಾನು ಅವರನ್ನು ಅಸಹ್ಯಪಡಿಸುತ್ತೇನೆ. ನಿಂದೆಗೂ, ಗಾದೆಗೂ, ಹಾಸ್ಯಕ್ಕೂ, ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು. ಅಧ್ಯಾಯವನ್ನು ನೋಡಿ |
ಆದಕಾರಣ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ - ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗವ್ಯಾಧಿಕ್ಷಾಮಗಳಿಗೆ ಗುರಿಯಾಗುವಂತೆ ಬಿಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.