ಯೆರೆಮೀಯ 25:10 - ಕನ್ನಡ ಸತ್ಯವೇದವು J.V. (BSI)10 ಇದಲ್ಲದೆ ನಾನು ಅವುಗಳಲ್ಲಿ ಹರ್ಷಸಂಭ್ರಮಗಳ ಧ್ವನಿಯನ್ನೂ ವಧೂವರರ ಸ್ವರವನ್ನೂ ಬೀಸುವ ಕಲ್ಲಿನ ಸದ್ದನ್ನೂ ದೀಪದ ಬೆಳಕನ್ನೂ ನಿಲ್ಲಿಸಿಬಿಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇದಲ್ಲದೆ ನಾನು ಅವುಗಳಲ್ಲಿ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ, ಬೀಸುವ ಕಲ್ಲಿನ ಶಬ್ದವನ್ನೂ, ದೀಪದ ಬೆಳಕನ್ನೂ ನಿಲ್ಲಿಸಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇವುಗಳಲ್ಲಿ ಸಂಭ್ರಮ ಸಡಗರಗಳ ಧ್ವನಿಯಾಗಲಿ. ವಧುವರರ ಸ್ವರವಾಗಲಿ ಏಳದಂತೆ ಮಾಡುವೆನು. ಬೀಸುಕಲ್ಲಿನ ಸದ್ದನ್ನು ಅಡಗಿಸುವೆನು. ದೀಪಕ್ಕೆ ಎಣ್ಣೆ ಇಲ್ಲದಂತೆ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆ ಸ್ಥಳಗಳಲ್ಲಿ ನಾನು ಸಂತೋಷದ ಮತ್ತು ಸಂಭ್ರಮದ ಧ್ವನಿಗಳು ಕೇಳಿಬರದಂತೆ ಮಾಡುವೆನು. ವಧುವರರ ಸಂತೋಷದ ಧ್ವನಿಗಳು ಇನ್ನು ಮೇಲೆ ಕೇಳಿಬರುವದಿಲ್ಲ. ನಾನು ಬೀಸುವಕಲ್ಲಿನ ಸದ್ದನ್ನು ತೆಗೆದುಕೊಳ್ಳುವೆನು. ನಾನು ದೀಪದ ಬೆಳಕನ್ನು ತೆಗೆದುಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾನು ಈ ದೇಶಗಳಿಂದ ಸಂತೋಷದ ಶಬ್ದ ಮತ್ತು ಸಂತೋಷದ ಶಬ್ದವನ್ನು ಮಾತ್ರ ತೆಗೆದುಹಾಕುತ್ತೇನೆ, ವಧು ಅಥವಾ ವಧುವಿನ ಧ್ವನಿ ಅಲ್ಲಿ ಕೇಳಿಸುವುದಿಲ್ಲ, ಬೀಸುಕಲ್ಲಿನ ಸದ್ದನ್ನು ಅಡಗಿಸುವೆನು. ದೀಪಕ್ಕೆ ಎಣ್ಣೆ ಇಲ್ಲದಂತೆ ಮಾಡುವೆನು. ಅಧ್ಯಾಯವನ್ನು ನೋಡಿ |