Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:13 - ಕನ್ನಡ ಸತ್ಯವೇದವು J.V. (BSI)

13 ನಾನು ಆ ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ (ಅಂದರೆ ಯೆರೆಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಈ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ) ಅದರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಆ ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ ಅಂದರೆ ಯೆರೆಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಈ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ ಅದರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾನು ಈ ನಾಡಿನ ವಿಷಯದಲ್ಲಿ ನುಡಿದುದೆಲ್ಲವನ್ನು, ಅಂದರೆ ಯೆರೆಮೀಯನ ಮುಖಾಂತರ ಸಕಲ ರಾಷ್ಟ್ರಗಳ ವಿರುದ್ಧ ನುಡಿದಿರುವ ಹಾಗು ಪ್ರವಾದನೆಗಳ ಗ್ರಂಥದಲ್ಲಿ ಬರೆದುದೆಲ್ಲವನ್ನು ಅದರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಾಬಿಲೋನಿಗೆ ಅನೇಕ ಕೇಡುಗಳು ಬರುವವೆಂದು ನಾನು ಹೇಳಿದ್ದೇನೆ. ಅದೆಲ್ಲ ನಡೆಯುವುದು. ಯೆರೆಮೀಯನು ಆ ಅನ್ಯಜನಾಂಗಗಳ ಬಗ್ಗೆ ಬೋಧಿಸಿದ್ದಾನೆ. ಆ ಮೂನ್ಸೂಚನೆಗಳೆಲ್ಲಾ ಈ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ, ಯೆರೆಮೀಯನು ಜನಾಂಗಗಳಿಗೆ ವಿರೋಧವಾಗಿ ಪ್ರವಾದಿಸಿ, ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:13
10 ತಿಳಿವುಗಳ ಹೋಲಿಕೆ  

ಕಿತ್ತುಹಾಕುವದು, ಕೆಡವುವದು, ನಾಶಪಡಿಸುವದು, ಹಾಳುಮಾಡುವದು, ಕಟ್ಟುವದು, ನೆಡುವದು, ಈ ಕಾರ್ಯಗಳನ್ನು ಮಾಡುವದಕ್ಕೋಸ್ಕರ ಜನಾಂಗಗಳ ಮೇಲೂ ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇವಿುಸಿದ್ದೇನೆ ಅಂದನು.


ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವದಕ್ಕೆ ಮುಂಚೆ ನಿನ್ನನ್ನು ತಿಳಿದಿದ್ದೆನು; ನೀನು ಉದರದಿಂದ ಬರುವದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು; ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇವಿುಸಿದ್ದೇನೆ.


ಆಮೇಲೆ - ಇನ್ನೂ ನೀನು ಅನೇಕವಾಗಿರುವ ಪ್ರಜೆ ಜನ ಭಾಷೆ ರಾಜ ಇವರ ವಿಷಯದಲ್ಲಿ ಪ್ರವಾದನೆ ಹೇಳಬೇಕೆಂದು ನನಗೆ ತಿಳಿಸಲ್ಪಟ್ಟಿತು.


ಮೇದ್ಯಯನಾದ ದಾರ್ಯಾವೆಷನು ರಾಜ್ಯವನ್ನು ತೆಗೆದುಕೊಂಡನು. ಅವನ ವಯಸ್ಸು ಹೆಚ್ಚು ಕಡಿಮೆ ಅರುವತ್ತೆರಡು.


ಫೆರೇಸ್ ಅಂದರೆ ನಿನ್ನ ರಾಜ್ಯವು ಭಿನ್ನವಾಗಿ ಮೇದ್ಯಯರಿಗೂ ಪಾರಸಿಯರಿಗೂ ಕೊಡಲ್ಪಟ್ಟಿದೆ ಎಂದು ಅರಿಕೆಮಾಡಿದನು.


ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲಾ ಗ್ರಂಥವಾಗಿ ಬರೆ.


ನೀನು ಗ್ರಂಥ ಬರೆಯತಕ್ಕ ಸುರಳಿಯನ್ನು ತೆಗೆದುಕೊಂಡು ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತಾಡಿದಂದಿನಿಂದ ಇಂದಿನವರೆಗೆ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು, ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ.


ಆಗ ಯೆರೆಮೀಯನು ನೇರೀಯನ ಮಗನಾದ ಬಾರೂಕನನ್ನು ಕರೆಯಿಸಿ ಯೆಹೋವನ ಮಾತುಗಳನ್ನೆಲ್ಲಾ ನುಡಿಯಲು ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರಳಿಯಲ್ಲಿ ಬರೆದನು.


ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು - ಯೆಹೋವನು ಇಂತೆನ್ನುತ್ತಾನೆ - ಬಾಬೆಲಿನ ಅರಸನು ಬಂದು ಈ ದೇಶವನ್ನು ಜನಪಶುಗಳಿಲ್ಲದಂತೆ ಹಾಳುಮಾಡುವದು ಖಂಡಿತ ಎಂದು ಈ ಸುರಳಿಯನ್ನು ಬರೆಯಿಸಿದ್ದೇಕೆ ಎಂಬದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ;


ಹಾಗೆಯೇ ನನ್ನ ಬಾಯಿಂದ ಹೊರಟ ಮಾತು ನನ್ನ ಇಷ್ಟಾರ್ಥವನ್ನು ನೆರವೇರಿಸಿ ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು