Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:23 - ಕನ್ನಡ ಸತ್ಯವೇದವು J.V. (BSI)

23 ಸಮುದ್ರದ ಆಚಿನ ಕರಾವಳಿಯ ಅರಸರು, ದೆದಾನ್ಯರು, ತೇಮಾದೇಶದವರು, ಬೂಜ್‍ದೇಶದವರು, ಚಂಡಿಕೆಬಿಟ್ಟುಕೊಂಡಿರುವವರೆಲ್ಲರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದೆದಾನ್ಯರು, ತೇಮಾ ದೇಶದವರು, ಬೂಜ್ ದೇಶದವರು, ಚಂಡಿಕೆ ಬಿಟ್ಟುಕೊಂಡಿರುವವರೆಲ್ಲರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸಮುದ್ರದ ಆಚಿನ ಕರಾವಳಿಯ ಅರಸರು, ದೆದಾನ್ಯರು, ತೇಮಾ, ಬೂಜ್ ನಾಡಿನವರು, ಮುಂದಲೆಗೂದಲು ಕತ್ತರಿಸಿಕೊಳ್ಳುವವರೆಲ್ಲರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದೆದಾನ್ಯರು, ತೇಮಾದೇಶದವರು, ಬೂಜ್ ದೇಶದವರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ತಮ್ಮ ತಲೆಕೂದಲನ್ನು ಕತ್ತರಿಸಿಕೊಳ್ಳುವ ಎಲ್ಲಾ ಜನರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ದೆದಾನಿಗೂ, ತೇಮಾಕ್ಕೂ, ಬೂಜಿಗೂ, ಕಟ್ಟಕಡೆಯ ಮೂಲೆಯವರೆಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:23
15 ತಿಳಿವುಗಳ ಹೋಲಿಕೆ  

ಏಕಂದರೆ ಸಕಲಜನಾಂಗಗಳವರೂ ಸುನ್ನತಿಹೀನರು, ಎಲ್ಲಾ ಇಸ್ರಾಯೇಲ್ ವಂಶದವರೂ ಹೃದಯ ಸುನ್ನತಿಯಿಲ್ಲದವರು ಎಂದು ಯೆಹೋವನು ಅನ್ನುತ್ತಾನೆ.


ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.


ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು.


ತೇಮದ ಗುಂಪಿನವರು ಕಣ್ಣೆತ್ತಿ ನೋಡಿದರು, ಶೆಬದ ಸಮೂಹದವರು ಆ ತೊರೆಗಳನ್ನು ಹಾರೈಸಿದರು.


ಅವರು ಯಾರಾರಂದರೆ - ಅವನ ಚೊಚ್ಚಲನಾದ ಊಚ್, ಇವನ ತಮ್ಮನಾದ ಬೂಜ್, ಅರಾಮನ ತಂದೆಯಾದ ಕೆಮೂವೇಲ್, ಕೆಸೆದ್, ಹಜೋ, ಪಿಲ್ದಾಷ್, ಇದ್ಲಾಫ್, ಬೆತೂವೇಲ್ ಎಂಬಿವರೇ.


ದೆದಾನಿನವರು ಹಲ್ಲಣಕ್ಕೆ ಸರಿಯಾದ ಒಳ್ಳೆಯ ಜಮಖಾನೆಗಳನ್ನು ನಿನಗೋಸ್ಕರ ತರುವ ವ್ಯಾಪಾರಿಗಳಾಗಿದ್ದರು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಎದೋವಿುನ ಮೇಲೆ ಕೈಯೆತ್ತಿ ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.


ವಿುಬ್ಸಾಮ್, ವಿುಷ್ಮ, ದೂಮ, ಮಸ್ಸ, ಹದದ್, ತೇಮ, ಯೆಟೂರ್, ನಾಫೀಷ್, ಕೇದೆಮ.


ಕೂಷನ ಸಂತಾನದವರು - ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬ ಜನಾಂಗಗಳು. ರಗ್ಮ ಸಂತಾನದವರು - ಶೆಬಾ, ದೆದಾನ್ ಎಂಬ ಜನಾಂಗಗಳು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ತೇಮಾನ್ ಸೀಮೆಗಿದ್ದ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?


ದೇದಾನಿನವರು ನಿನ್ನ ವರ್ತಕರು; ಬಹು ದ್ವೀಪಗಳ ಉತ್ಪತ್ತಿಯು ನಿನ್ನ ಕೈಗೆ ಸೇರಿತು; ಗಜದಂತಗಳನ್ನೂ ಕರೀಮರವನ್ನೂ ನಿನಗೆ ಕಪ್ಪವಾಗಿ ಸಲ್ಲಿಸಿದರು.


ಆಹಾ, ಐಗುಪ್ತ್ಯರು ಯೆಹೂದ್ಯರು ಎದೋಮ್ಯರು ಅಮ್ಮೋನ್ಯರು ಮೋವಾಬ್ಯರು ಚಂಡಿಕೆಬಿಟ್ಟುಕೊಂಡಿರುವ ಅರಣ್ಯನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ;


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. ಏಳಿರಿ, ಕೇದಾರಿಗೆ ಹೋಗಿ ಮೂಡಣ ದೇಶದವರನ್ನು ಹಾಳುಮಾಡಿರಿ ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು